vijaya times advertisements
Visit Channel

May 28, 2021

ಕಾಡಾನೆ ದಾಳಿ ; ಕಾರ್ಮಿಕ ಸ್ಥಳದಲ್ಲೇ ಸಾವು

ಮೃತ ಕಾರ್ಮಿಕನನ್ನು ನಾಣು (60) ಎಂದು ಗುರುತಿಸಲಾಗಿದ್ದು ಶುಕ್ರವಾರ ಬೆಳಗ್ಗೆ 6.30ರ ವೇಳೆ ಈ ಘಟನೆ ನಡೆದಿದೆ. ನಾಣು ತನ್ನ ಮನೆಗೆ ಆಹಾರ ಸಾಮಾಗ್ರಿ ಖರೀದಿಸಲು ತಿತಿಮತಿಗೆ ಬರುತ್ತಿರುವ ವೇಳೆ ರಸ್ತೆಯಲ್ಲೇ ಎದುರಾದ ಒಂಟಿ ಸಲಗವೊಂದು ತುಳಿದು ಹಾಕಿದೆ. ಪರಿಣಾಮ ಆತ ಸ್ಥಳದಲ್ಲೇ ಮೃತಪಟ್ಟಿದ್ದಾನೆ.

ಕೋವಿಡ್‌ನಿಂದ ಪೋಷಕರನ್ನು ಕಳೆದುಕೊಂಡ ವಿದ್ಯಾರ್ಥಿಗಳಿಗೆ ಉಚಿತ ಸೀಟು ನೀಡಲು ಮೈಸೂರು ವಿವಿ ನಿರ್ಧಾರ

ಲವು ಸಂದರ್ಭಗಳಲ್ಲಿ ವಿದ್ಯಾರ್ಥಿಗಳು ತಂದೆ ಅಥವಾ ತಾಯಿಯನ್ನು ಕಳೆದುಕೊಂಡು ವಿದ್ಯಾರ್ಜನೆ ಮುಂದುವರಿಸಲು ಕಷ್ಟಸಾಧ್ಯವಾಗಿದೆ. ಈ ಜಾಗತಿಕ ಸಂಕಷ್ಟದ ಸಮಯದಲ್ಲಿ ಮೈಸೂರು ವಿಶ್ವವಿದ್ಯಾನಿಲಯ, ಈ ರೀತಿ ತಂದೆ ತಾಯಂದಿರನ್ನು ಅಥವಾ ಕುಟುಂಬದ ಜವಾಬ್ದಾರಿ ವಹಿಸಿಕೊಂಡ ಮುಖ್ಯಸ್ಥರನ್ನು ಕಳೆದುಕೊಂಡು ವಿದ್ಯಾರ್ಜನೆ ಮುಂದುವರೆಸಲು ಸಾಧ್ಯವಾಗದಿರುವ ವಿದ್ಯಾರ್ಥಿಗಳಿಗೆ ಉನ್ನತ ಶಿಕ್ಷಣವನ್ನು ಮುಂದುವರಿಸಲು ಅವರ ಬದುಕಿನ ಭವಿಷ್ಯವನ್ನು ರೂಪಿಸಲು ಪ್ರಸ್ತಾವನೆಯನ್ನು ತಯಾರಿಸಿದೆ.

ದೆಹಲಿಯಲ್ಲಿ ಲಾಕ್ ಡೌನ್ ಹಂತಹಂತವಾಗಿ ತೆಗೆಯಲು ನಿರ್ಧಾರ: ಕೇಜ್ರಿವಾಲ್

ಶುಕ್ರವಾರ ನಡೆದ ದೆಹಲಿ ವಿಪತ್ತು ನಿರ್ವಹಣಾ ಪ್ರಾಧಿಕಾರದ ಸಭೆಯಲ್ಲಿ, ಲಾಕ್‌ಡೌನ್ ಅನ್ನು ಹಂತ ಹಂತವಾಗಿ ತೆಗೆಯಲು ನಿರ್ಧರಿಸಲಾಯಿತು. ಈ ಪ್ರಕ್ರಿಯೆಯಲ್ಲಿ, ನಾವು ಮೊದಲು ಅತ್ಯಂತ ಕೆಳ ಹಂತದ ಕಾರ್ಮಿಕರ ಬಗ್ಗೆ ಯೋಚಿಸಬೇಕಿದೆ.

ನಕಲಿ ಮದ್ಯ ಸೇವಿಸಿ ಉತ್ತರಪ್ರದೇಶದಲ್ಲಿ 8 ಮಂದಿ ಸಾವು

ಕಾರ್ಸಿಯಾದಲ್ಲಿ ಪರವಾನಗಿ ಹೊಂದಿದ್ದ ಮದ್ಯ ಮಾರಾಟಗಾರನೊಬ್ಬನಿಂದ ಖರೀದಿಸಿದ ಮದ್ಯ ಸೇವಿಸಿ ಇಬ್ಬರು ಮೃತಪಟ್ಟಿದ್ದಾರೆ ಎಂದು ಲೂಧಾ ಪೊಲೀಸರು ತಿಳಿಸಿದ್ದರು. ಆದರೆ ಹಿರಿಯ ಜಿಲ್ಲಾ ಅಧಿಕಾರಿಗಳು ಘಟನಾ ಸ್ಥಳಕ್ಕೆ ಆಗಮಿಸಿದ ವೇಳೆ ಇನ್ನೂ ಆರು ಮಂದಿ ಸಾವಿಗೀಡಾಗಿರುವ ಬಗ್ಗೆ ಮಾಹಿತಿ ಸಿಕ್ಕಿತು.

ಅಂತರಾಷ್ಟ್ರೀಯ ವಿಮಾನಯಾನ ಜೂನ್ ೩೦ರವರೆಗೆ ನಿರ್ಬಂಧ ಮುಂದೂಡಿಕೆ

ನಿರ್ದಿಷ್ಟ ಪ್ರಕರಣಗಳ ಆಧಾರದಲ್ಲಿ ಆಯ್ದ ಮಾರ್ಗಗಳಲ್ಲಿ ಅಂತರರಾಷ್ಟ್ರೀಯ ವಿಮಾನಯಾನಕ್ಕೆ ಅನುಮತಿ ನೀಡಲಾಗುವುದು ಎಂದು ಡಿಜಿಸಿಎ ಹೇಳಿಕೆ ತಿಳಿಸಿದೆ. ಅನುಮತಿ ಪಡೆದ ಸರಕು ಸಾಗಣೆ ವಿಮಾನಗಳ ಸಂಚಾರಕ್ಕೆ ಇದು ಅನ್ವಯವಾಗುವುದಿಲ್ಲ.

ಡಿಆರ್ ಡಿಒದ ಆಂಟಿ-ಕೊವಿಡ್ ಡ್ರಗ್ ಪ್ಯಾಕೆಟ್​ಗೆ ₹990; ಸರ್ಕಾರಿ ಆಸ್ಪತ್ರೆಗಳಿಗೆ ರಿಯಾಯಿತಿ ದರ

ಕೊವಿಡ್ ಪ್ರತಿರೋಧ ಔಷಧದ 10,000 ಸ್ಯಾಶೆಗಳು ಮಾರುಕಟ್ಟೆಯಲ್ಲಿ ಲಭ್ಯವಾಗಲಿವೆ ಎಂದು ಕೇಂದ್ರ ರಕ್ಷಣಾ ಸಚಿವ ರಾಜನಾಥ್ ಸಿಂಗ್ ಗುರುವಾರ ಹೇಳಿದ್ದಾರೆ.

ಮೈಸೂರು ಜಿಲ್ಲಾಧಿಕಾರಿ ಕಾರ್ಯವೈಖರಿ ವಿಚಾರದಲ್ಲಿ ಪ್ರತಾಪ್ ಸಿಂಹ-ಜಿಟಿಡಿ ನಡುವೆ ಜಟಾಪಟಿ

ಜಿಲ್ಲಾಧಿಕಾರಿ ರೋಹಿಣಿ ಸಿಂಧೂರಿ ಕಾರ್ಯವೈಖರಿ ಬಗ್ಗೆ ಪ್ರತಾಪ್ ಸಿಂಹ, ಅಸಮಾಧಾನ ವ್ಯಕ್ತಪಡಿಸಿದ್ದರು. ಇದಕ್ಕೆ ಪ್ರತಿಕ್ರಿಯೆ ನೀಡಿದ ಜಿಟಿಡಿ, ನಿನಗೆ ತಾಕತ್ತಿದ್ದರೆ ಡಿಸಿಯನ್ನ ವರ್ಗಾವಣೆ ಮಾಡಿಸು. ಸುಖಾ ಸುಮ್ಮನೆ ಹಾದಿ ಬೀದಿಲಿ ನಿಂತು ಮಾತನಾಡಬೇಡ. ಮಾಧ್ಯಮದ ಮುಂದೆ ಹೇಳಿಕೆ‌ ನೀಡಿದ್ರೆ ಹುಲಿ ಆಗಲ್ಲ.

ಮುಂಬೈನಲ್ಲಿ ಕೊರೊನಾ ಅಟ್ಟಹಾಸ; 12 ಸಾವಿರ ಮಕ್ಕಳಲ್ಲಿ ಸೋಂಕು ಪತ್ತೆ, ವ್ಯಾಕ್ಸಿನ್ ನೀಡುವಂತೆ ಹೈಕೋರ್ಟ್ ಮೆಟ್ಟಿಲು ಹತ್ತಿದ ಬಾಲಕ

ಮುಂಬೈ ಮುನ್ಸಿಪಲ್ ಕಾರ್ಪೋರೇಷನ್ ಬಾಂಬೆ ಹೈಕೋರ್ಟ್ ಗೆ ಅಧಿಕೃತ ಮಾಹಿತಿ ನೀಡಿದೆ. ಕೊರೊನಾ ಎರಡನೇ ಅಲೆಯಲ್ಲೆ 12 ಸಾವಿರ ಮಕ್ಕಳು ಬಳಲುತ್ತಿದ್ದು, ಇನ್ನು 3 ನೇ ಹಂತದಲ್ಲಿ ಮಕ್ಕಳಿಗೆ ಹೆಚ್ಚು ಪರಿಣಾಮ ಬೀರುತ್ತದೆ ಎಂದು ತಜ್ಞ ವೈದ್ಯರು ಹೇಳಿರುವ ಕಾರಣ ಬಿಎಂಸಿ ಸಕಲ ಸಿದ್ಧತೆ ಮಾಡಿಕೊಂಡಿದೆ.

ಕೋವಿಡ್‌ ಎರಡನೇ ಅಲೆ ನಿಯಂತ್ರಿಸುವಲ್ಲಿ ಮೋದಿ ಸಂಪೂರ್ಣ ಸೋತಿದ್ದಾರೆ: ರಾಹುಲ್ ಗಾಂಧಿ ಕಿಡಿ

ಇಂದು ಫೇಸ್‌ಬುಕ್‌ ಲೈವ್ ನಲ್ಲಿ ಮಾತನಾಡಿದ ರಾಹುಲ್ ಗಾಂಧಿ, ಎರಡನೇ ಅಲೆಯನ್ನು ನಿಯಂತ್ರಿಸುವಲ್ಲಿ ಪ್ರಧಾನಿ ಅವರು ಪೂರ್ಣ ವಿಫಲರಾಗಿದ್ದಾರೆ.

12ನೇ ತರಗತಿಯ ಪರೀಕ್ಷೆಗಳನ್ನು ರದ್ದತಿ ಕುರಿತಂತೆ ಮೇ 31ಕ್ಕೆ ವಿಚಾರಣೆ ನಡೆಸಲಿರುವ ಸುಪ್ರೀಂ

ನ್ಯಾಯಮೂರ್ತಿಗಳಾದ ಎ.ಎಂ ಖಾನ್‌ವಿಲ್ಕರ್‌ ಮತ್ತು ಮತ್ತು ದಿನೇಶ್‌ ಮಹೇಶ್ವರಿ ಅವರನ್ನು ಒಳಗೊಂಡ ಪೀಠವು ‘ಈ ಅರ್ಜಿಯ ಪ್ರತಿಯನ್ನು ಕೇಂದ್ರೀಯ ಪ್ರೌಢಶಿಕ್ಷಣ ಪರೀಕ್ಷಾ ಮಂಡಳಿಗೆ (ಸಿಬಿಎಸ್‍ಇ)ಕಳುಹಿಸಲಾಗಿದೆಯೇ ಎಂದು ಅರ್ಜಿದಾರರನ್ನು ಕೋರ್ಟ್‌ ಪ್ರಶ್ನಿಸಿತು. ಈವರೆಗೆ ಸಿಬಿಎಸ್‍ಇಗೆ ಅರ್ಜಿಯ ಪ್ರತಿಯನ್ನು ಕಳುಹಿಸಿಲ್ಲ ಎಂದು ಅರ್ಜಿದಾರರು ತಿಳಿಸಿದರು.