vijaya times advertisements
Visit Channel

July 27, 2021

ಮುಖದಲ್ಲಿ ಮೂಡುವ ಮೊಡವೆ ಕಡಿಮೆಮಾಡಲು ಹೋಮ್ ಮೇಡ್ ಪಾನೀಯಗಳು

ಪುದಿನಾ ಉರಿಯೂತದ ಮತ್ತು ಬ್ಯಾಕ್ಟೀರಿಯಾ ವಿರೋಧಿ ಗುಣಗಳನ್ನು ಹೊಂದಿದ್ದು, ಇದು ಹಾರ್ಮೋನುಗಳ ಅಸಮತೋಲನವನ್ನು ಸರಿಪಡಿಸಲು ಸಹಾಯ ಮಾಡುತ್ತದೆ. ಇದರ ಚಹಾವನ್ನು ನಿಯಮಿತವಾಗಿ ಸೇವಿಸುವುದರಿಂದ ಮೊಡವೆ ಸಮಸ್ಯೆಗಳನ್ನು 25 ರಿಂದ 50% ರಷ್ಟು ಕಡಿಮೆ ಮಾಡಬಹುದು ಎಂದು ಅಧ್ಯಯನಗಳು ತೋರಿಸಿವೆ. ಜಲಸಂಚಯನ ಮತ್ತು ಆಂಟಿಆಕ್ಸಿಡೆಂಟ್‌ಗಳ ನಿಯಂತ್ರಿಸಲು ಪ್ರತಿದಿನ ಬೆಳಿಗ್ಗೆ ಅಥವಾ ಸಂಜೆ ಒಂದರಿಂದ ಎರಡು ಕಪ್ ಪುದಿನಾ ಚಹಾವನ್ನು ಸೇವಿಸಬಹುದು, ಅದು ನಿಮ್ಮ ಚರ್ಮವನ್ನು ಸ್ಪಷ್ಟವಾಗಿ ಮತ್ತು ಹೊಳೆಯುವಂತೆ ಮಾಡುತ್ತದೆ.

132 ದಿನಗಳಲ್ಲಿ ಅತ್ಯಂತ ಕಡಿಮೆ ದೈನಂದಿನ ಕೊರೊನಾ ಪ್ರಕರಣ ದಾಖಲು

ಕೇರಳ ಮತ್ತು ಮಹಾರಾಷ್ಟ್ರದಲ್ಲಿ ಕ್ರಮವಾಗಿ 11,586 ಮತ್ತು 4,877 ಸೋಂಕುಗಳು ವರದಿಯಾಗಿವೆ. ಸಕ್ರಿಯ ಪ್ರಕರಣಗಳು ಪ್ರಸ್ತುತ 3,98,100 ರಷ್ಟಿದ್ದು, ಮಾರ್ಚ್ 24 ರ ನಂತರ ಮೊದಲ ಬಾರಿಗೆ 4 ಲಕ್ಷಕ್ಕಿಂತ ಕಡಿಮೆಯಾಗಿದೆ. ಸೋಮವಾರದ ವೇಳೆಗೆ ದೇಶದಲ್ಲಿ 3.98 ಲಕ್ಷ ಸಕ್ರಿಯ ಪ್ರಕರಣಗಳಿವೆ.

‘ಲಂಕೆ’ ಲಿರಿಕಲ್ ಸಾಂಗ್ ರಿಲೀಸ್

ದಿ ಗ್ರೇಟ್ ಎಂಟರ್ ಟೈನರ್ ಲಾಂಛನದಲ್ಲಿ ಪಟೇಲ್ ಶ್ರೀನಿವಾಸ್(ನಾಗವಾರ) ಹಾಗೂ ಸುರೇಖ ರಾಮಪ್ರಸಾದ್ ಈ ಚಿತ್ರ ನಿರ್ಮಾಣ ಮಾಡಿದ್ದಾರೆ.
ರಮೇಶ್ ಬಾಬು ಛಾಯಾಗ್ರಹಣ, ಶಿವರಾಜ್ ಮೇಹು ಸಂಕಲನ, ರವಿವರ್ಮ, ಪಳನಿರಾಜ್, ಅಶೋಕ್ ಸಾಹಸ ನಿರ್ದೇಶನ ಹಾಗೂ ಧನಂಜಯ್, ಮೋಹನ್ ಅವರ ನೃತ್ಯ ನಿರ್ದೇಶನ ಈ ಚಿತ್ರಕ್ಕಿದೆ.
ಲೂಸ್ ಮಾದ ಯೋಗೇಶ್ ಚಿತ್ರದ ನಾಯಕನಾಗಿ ಅಭಿನಯಿಸಿದ್ದು, ಇತ್ತೀಚೆಗೆ ನಿಧನರಾದ ಸಂಚಾರಿ ವಿಜಯ್ ಸಹ ಈ‌ ಚಿತ್ರದ ಪ್ರಮುಖ ಪಾತ್ರದಲ್ಲಿ ನಟಿಸಿದ್ದಾರೆ.

ಬಿ.ಎಸ್. ಯಡಿಯೂರಪ್ಪ ರಾಜಿನಾಮೆಯಿಂದ ಮನನೊಂದು ಅಭಿಮಾನಿ ಆತ್ಮಹತ್ಯೆ: ಅಭಿಮಾನ ಅತಿರೇಕಕ್ಕೆ ಹೋಗದಂತೆ ಯಡಿಯೂರಪ್ಪ ಕೈಮುಗಿದು ವಿನಂತಿ

ಯಡಿಯೂರಪ್ಪ ಸಂತಾಪ: ನನ್ನ ರಾಜೀನಾಮೆಯಿಂದ ಮನನ್ನೊಂದ ಗುಂಡ್ಲುಪೇಟೆ ತಾಲೂಕಿನ ಬೊಮ್ಮಲಾಪುರದ ರಾಜಪ್ಪ (ರವಿ) ಆತ್ಮಹತ್ಯೆಗೆ ಶರಣಾದ ಸುದ್ದಿ ಅತೀವ ನೋವು ಹಾಗೂ ಬೇಸರ ತರಿಸಿದೆ. ರಾಜಕಾರಣದಲ್ಲಿ ಏರಿಳಿತಗಳು ಸಹಜ ,ಇದಕ್ಕಾಗಿ ಪ್ರಾಣಾರ್ಪಣೆ ಮಾಡಿಕೊಳ್ಳಲು ಮುಂದಾಗುವುದು ಸರ್ವಥಾ ಒಪ್ಪಲಾಗದು, ಇದರಿಂದ ಕುಟುಂಬಕ್ಕಾಗುವ ನಷ್ಟ ಯಾರಿಂದಲೂ ಭರಿಸಲಾಗದು ಎಂದು ಯಡಿಯೂರಪ್ಪ ಬೇಸರ ವ್ಯಕ್ತಪಡಿಸಿದ್ದಾರೆ.

ಸಂಬಂಧಗಳ ಕತೆಯ ‘ಬಾಡಿ ಗಾಡ್’

ದಕ್ಷಿಣ ಭಾರತದ ಹೆಸರಾಂತ ಚಿತ್ರಗಳಿಗೆ ನೃತ್ಯ ನಿರ್ದೇಶನ ಮಾಡಿರುವ ಹಾಗೂ ಕನ್ನಡದಲ್ಲಿ “ಗಣಪ”, “ಕರಿಯ 2”,
“ಡಾಲಿ” ಚಿತ್ರಗಳನ್ನು ನಿರ್ದೇಶಿಸಿರುವ ಪ್ರಭು ಶ್ರೀನಿವಾಸ್ ಈ ಚಿತ್ರದ ನಿರ್ದೇಶಕರು. ಸತ್ತ ವ್ಯಕ್ತಿಯ ದೇಹದ ಹಿಂದೆ ಹೆಣೆಯಲಾಗಿರುವ ವಿಭಿನ್ನ ಕಥೆಯ ಬಾಡಿ ಗಾಡ್ ಚಿತ್ರವನ್ನು ಲಾಕ್ ಡೌನ್ ಸಮಯದಲ್ಲಿ ನಿರ್ದೇಶಿಸಿದ್ದೇನೆ.

ಸೆಪ್ಟೆಂಬರ್ ನಲ್ಲಿ ಬಡವ ರಾಸ್ಕಲ್

ಎರಡು ವರ್ಷಗಳ ಹಿಂದೆ ಮುಹೂರ್ತವಾಗಿದ್ದ ಚಿತ್ರವು ಕೋವಿಡ್ ಕಾರಣದಿಂದ ತಡವಾಗಿ ತೆರೆ ಕಾಣುತ್ತಿದೆ. ನಿರ್ದೇಶಕ ಸೂರಿ ಅವರ ‘ ಪಾಪ್ ಕಾರ್ನ್ ಮಂಕಿ ಟೈಗರ್’ ಚಿತ್ರದಲ್ಲಿ ಜೋಡಿಗಳಾಗಿದ್ದ ಧನಂಜಯ್ ಮತ್ತು ಅಮೃತ ಅಯ್ಯಂಗಾರ್ ಈ ಚಿತ್ರದ ಮೂಲಕ ಮತ್ತೊಮ್ಮೆ ಒಂದಾಗಿದ್ದಾರೆ. ಚಿತ್ರದ ಶೀರ್ಷಿಕೆ ಮತ್ತು ಪೋಸ್ಟರ್ ನ್ನು ಹ್ಯಾಟ್ರಿಕ್ ಹೀರೋ ಶಿವರಾಜ್ ಕುಮಾರ್ ಬಿಡುಗಡೆ ಮಾಡಿದ್ದಾರೆ.

ಟೋಕಿಯೋ ಒಲಿಂಪಿಕ್ಸ್‌: ಹಾಕಿಯಲ್ಲಿ ಸ್ಪೇನ್‌ ವಿರುದ್ಧ ಭಾರತಕ್ಕೆ 3-0 ಅಂತರದ ಜಯ

‘ಎ’ ಗುಂಪಿನ ಪಂದ್ಯದಲ್ಲಿ ವಿಶ್ವದ ನಂ.9 ಸ್ಪೇನ್‌ ವಿರುದ್ಧ ಗೆಲುವು ದಾಖಲಿಸುವಲ್ಲಿ ಸಿಮ್ರನ್‌ಜೀತ್‌ ಸಿಂಗ್ ಮತ್ತು ರೂಪೀಂದರ್ ಪಾಲ್ ಸಿಂಗ್ ಮಹತ್ತರ ಪಾತ್ರ ವಹಿಸಿದರು. ಈ ಗೆಲುವಿನ ಮೂಲಕ ಭಾರತ ಟೋಕಿಯೊ ಒಲಿಂಪಿಕ್ಸ್‌ನಲ್ಲಿ ತನ್ನ ಎರಡನೇ ಗೆಲುವು ದಾಖಲಿಸಿದೆ.

‘ಶಾರ್ದೂಲ’ ಗೀತೆಗೆ ಭರಪೂರ ಮೆಚ್ಚುಗೆ

ಶಾರ್ದೂಲ ಚಿತ್ರದ ಹಾಡಿನ ಲಿರಿಕಲ್ ವಿಡಿಯೋ ಇತ್ತೀಚೆಗಷ್ಟೇ ಆನಂದ್ ಆಡಿಯೋ ಮೂಲಕ ಬಿಡುಗಡೆಯಾಗಿತ್ತು. ನಿರ್ದೇಶಕ
ಅರವಿಂದ್ ಕೌಶಿಕ್ ಅವರೇ ಬರೆದಿರುವ ಈ ಹಾಡಿಗೆ ಸತೀಶ್ ಬಾಬು ಸಂಗೀತ ನೀಡಿದ್ದಾರೆ. ಭೈರವ ಸಿನಿಮಾಸ್ ಮತ್ತು ಸಿ ವಿ ಆರ್ ಸಿನಿಮಾಸ್ ಲಾಂಛನದಲ್ಲಿ ರೋಹಿತ್ ಶಾಂತಪ್ಪ ಹಾಗೂ ಕಲ್ಯಾಣ್ ಸಿ ನಿರ್ಮಿಸಿರುವ ಈ ಚಿತ್ರ ಆಗಸ್ಟ್ ವೇಳೆಗೆ ತೆರೆಗೆ ಬರುವ ಸಾಧ್ಯತೆಯಿದೆ.
ಥ್ರಿಲ್ಲರ್ ಕಥಾಹಂದರ ಹೊಂದಿದೆ.

ವಾಣಿಜ್ಯ ಮಂಡಳಿಯಿಂದ ಮುಖ್ಯಮಂತ್ರಿಗೆ ಮನವಿ

ಕೋವಿಡ್ 19 ಹಿನ್ನೆಲೆಯಲ್ಲಿ ಸರಕಾರವು ರಾಜ್ಯದ ಬೇರೆ ಬೇರೆ ಉದ್ಯಮಗಳಿಗೆ ಶೇ.100 ರಷ್ಟು ವಿನಾಯಿತಿ ನೀಡಿದೆ. ಆದರೆ ಜುಲೈ 19 ರಿಂದ ಚಲನಚಿತ್ರ ಮಂದಿರಗಳಲ್ಲಿ ಶೇ.50 ರಷ್ಟು ಆಸನಗಳಿಗಷ್ಟೇ ಚಿತ್ರ ಪ್ರದರ್ಶನ ಅನುಮತಿ ನೀಡಲಾಗಿರುತ್ತದೆ. ಸಂಕಷ್ಟದಲ್ಲಿರುವ ಚಿತ್ರಮಂದಿರಗಳಿಗೆ ಇದು ಇನ್ನಷ್ಟು ಕಷ್ಟ ನೀಡಿದೆಯೆಂದು ಕರ್ನಾಟಕ ಚಲನಚಿತ್ರ ವಾಣಿಜ್ಯ ಮಂಡಳಿ ಅಭಿಪ್ರಾಯ ಪಟ್ಟಿದೆ.

ಶಿವಣ್ಣನಿಗೆ ನಾಯಕಿಯಾದ ತೆಲುಗಿನ ಬೆಡಗಿ

ಬಾಲಶ್ರೀರಾಮ್ ಸ್ಟುಡಿಯೋಸ್ ಲಾಂಛನದಲ್ಲಿ ಸ್ವಾತಿ ವನಪಲ್ಲಿ, ಶ್ರೀಕಾಂತ್ ದುಲಿಪುಡಿ ಹಾಗೂ ನಾರಾಲ ಶ್ರೀನಿವಾಸ ರೆಡ್ಡಿ ನಿರ್ಮಿಸುತ್ತಿರುವ .
ರಾಮ್ ದುಲಿಪುಡಿ ನಿರ್ದೇಶನದ ಈ ಚಿತ್ರದ ಚಿತ್ರೀಕರಣ ಆಗಸ್ಟ್ ನಲ್ಲಿ ಆರಂಭವಾಗಲಿದೆ.