Visit Channel

September 27, 2021

ಮೈಸೂರು ದಸರಾದಲ್ಲಿ ಈ ಬಾರಿ ನಡೆಯಲ್ಲ ವಜ್ರಮುಷ್ಟಿ ಜಟ್ಟಿ ಕಾಳಗ

ಯದುವೀರ ಕೃಷ್ಣದತ್ತ ಚಾಮರಾಜ ಒಡೆಯರ್‌ ಅಕ್ಟೋಬರ್‌ 7 ನೇ ತಾರೀಕಿನಿಂದ ಖಾಸಗಿ ದರ್ಬಾರ್‌ ನಡೆಸಲಿದ್ದಾರೆ. ಅಕ್ಟೋಬರ್‌  14ರಂದು ಅರಮನೆಯಲ್ಲಿ ಆಯುಧಪೂಜೆ ನಡೆಯಲಿದೆ.  ಬೆಳಗ್ಗೆ 5.30ರಿಂದ ಪೂಜಾ ವಿಧಿ ವಿಧಾನ ಆರಂಭವಾಗಲಿವೆ. 7.45ಕ್ಕೆ ರಾಜರ ಆಯುಧಗಳು ಅರಮನೆ ಕೋಡಿ ಸೋಮೇಶ್ವರ ದೇಗುಲಕ್ಕೆ ತಂದು ಪೂಜೆ ಸಲ್ಲಿಸಲಾಗುತ್ತದೆ.  ಬಳಿಕ 11.02 ರಿಂದ 11.22ರ ಶುಭ ಮುಹೂರ್ತದಲ್ಲಿ ಅರಮನೆಯಲ್ಲಿ ಯದುವೀರ ಅವರು ಆಯುಧಗಳಿಗೆ ಪೂಜೆ ಸಲ್ಲಿಸಲಿದ್ದಾರೆ. 

ಇಂದು ವಿಶ್ವ ಪ್ರವಾಸೋದ್ಯಮ ದಿನ, ಇನ್ನಾದರೂ ಪ್ರವಾಸಿಗರಿಗೆ ಸಿಗಲಿ ಕೊರೊನಾದಿಂದ ಮುಕ್ತಿ

ಪ್ರವಾಸೋದ್ಯಮವು ಭಾರತದಲ್ಲಿ ಅತಿ ದೊಡ್ಡ ಸೇವಾ ವಲಯವಾಗಿದೆ. ಇದು ರಾಷ್ಟ್ರೀಯ ಜಿಡಿಪಿಗೆ 6.23% ಹಾಗೂ ಭಾರತದಲ್ಲಿ ಒಟ್ಟು ಉದ್ಯೋಗಕ್ಕೆ 8.78%ರಷ್ಟು ಕೊಡುಗೆ ನೀಡುತ್ತದೆ

ಮೋಯಿನ್ ಅಲಿ ಟೆಸ್ಟ್ ಕ್ರಿಕೆಟ್‌ಗೆ ವಿದಾಯ

34 ವರ್ಷದ ಮೋಯಿನ್ ಅಲಿ ಅವರು  ಇದುವರೆಗೆ 64 ಟೆಸ್ಟ್ ಪಂದ್ಯಗಳಲ್ಲಿ ಆಡಿದ್ದಾರೆ. 2014ರಲ್ಲಿ ಟೆಸ್ಷ್  ಕ್ರಿಕೆಟ್ ಗೆ ಪದಾರ್ಪಣೆ ಮಾಡಿದ್ದ ಅಲಿ ಐದು ಶತಕ ಮತ್ತು 14 ಅರ್ಧಶತಕ ಗಳೊಂದಿಗೆ 28.3ರ ಸದಾಸರಿಯಲ್ಲಿ 2014 ರನ್ ಗಳಿಸಿದ್ದಾರೆ

ಆಯುಷ್ಮಾನ್ ಭಾರತ್ ಡಿಜಿಟಲ್ ಮಿಷನ್​​​​ಗೆ ಪ್ರಧಾನಿ ಚಾಲನೆ

ಈ ಮಿಷನ್ ದೇಶದ ಬಡ ಮತ್ತು ಮಧ್ಯಮ ವರ್ಗದವರಿಗೆ ಅನುಕೂಲ ಆಗಲಿದೆ. ಬಡವರು ಚಿಕಿತ್ಸೆ ಸಂದರ್ಭದಲ್ಲಿ ಎದುರಿಸುತ್ತಿರುವ ಸಮಸ್ಯೆಗಳನ್ನು ತೆಗೆದುಹಾಕುವಲ್ಲಿ ದೊಡ್ಡ ಪಾತ್ರವನ್ನು ವಹಿಸುತ್ತದೆ.

ಜೆಡಿಎಸ್‌ ಮುಗಿಸಲು ಸಿದ್ದರಾಮಯ್ಯ ಅವರಿಂದ ಸಾಧ್ಯವಿಲ್ಲ – ದೇವೇಗೌಡ

ಜೆಡಿಎಸ್ ಪಕ್ಷವನ್ನು ಮುಗಿಸಲು ಸಿದ್ದರಾಮಯ್ಯ ಅವರಿಂದ ಮಾತ್ರವಲ್ಲ ಯಾರಿಂದಲೂ ಸಾಧ್ಯವಿಲ್ಲ ಎಂದು ಪಕ್ಷದ ರಾಷ್ಟ್ರೀಯ ಅಧ್ಯಕ್ಷ ಹಾಗೂ ಮಾಜಿ ಪ್ರಧಾನಮಂತ್ರಿಗಳ ಹೆಚ್.ಡಿ.ದೇವೇಗೌಡರು ಹೇಳಿದ್ದಾರೆ.

ಭಗತ್ ಎಂಬ ಅಪ್ರತಿಮ ಹೋರಾಟಗಾರ

“ಕ್ರಾಂತಿ ಎಂದರೆ ಅದರಲ್ಲಿ ರಕ್ತಮಯ ಕಲಹ ಇರಬೇಕು ಎಂದೇನೂ ಇಲ್ಲ. ಹಾಗೆಯೇ ವೈಯುಕ್ತಿಕ ದ್ವೇಷಕ್ಕೂ ಇದರಲ್ಲಿ ಅವಕಾಶ ಇಲ್ಲ. ಅದು ಬಾಂಬ್ ಮತ್ತು ಪಿಸ್ತೂಲುಗಳ ಸಂಸ್ಕೃತಿ ಅಲ್ಲ. ನಮ್ಮ ಪ್ರಕಾರ ಕ್ರಾಂತಿ ಎಂದರೆ ಎದ್ದು ಕಾಣುವ ಅನ್ಯಾಯದಿಂದ ಕೂಡಿದ ಈಗಿನ ವ್ಯವಸ್ಥೆ ಬದಲಾಗಬೇಕು” -ಭಗತ್ ಸಿಂಗ್

ಲಂಚ ಪ್ರಕರಣ ಹಿನ್ನಲೆ, ರಾಘವೇಂದ್ರಗೆ ಜಾಮೀನು ನಿರಾಕಸಿದ ಕೋರ್ಟ್

ಇದೇ ಪ್ರಕರಣದಲ್ಲಿ ಈ ಹಿಂದೆ ತಲಾ ಎರಡು ಬಾರಿ ನಾಲ್ಕು ಲಕ್ಷ ರೂಪಾಯಿ ಲಂಚ ಸ್ವೀಕರಿಸಿದ್ದರು. ಬಾಕಿ ಉಳಿದಿರುವ 2 ಲಕ್ಷ ಲಂಚದ ಹಣವನ್ನು ಖಾಸಗಿ ವ್ಯಕ್ತಿ ರಾಘವೇಂದ್ರ ಮೂಲಕ ಪಡೆಯುವ ವೇಳೆ ಎಸಿಬಿ ಪೊಲೀಸರಿಗೆ ಸಿಕ್ಕಿ ಬಿದಿದ್ದರು.

ಮನೆ ಮುಂದೆ ನಿಲ್ಲಿಸಿದ್ದ ಕಾರ್‌ಗಳಿಗೆ ಹಾನಿ ಐವರ ಬಂಧನ

ಬೆಂಗಳೂರಿನ ಆರ್‌ಆರ್‌ ನಗರದಲ್ಲಿನ 6 ಕಡೆ ಹಾಗೂ ಕೆಂಗೇರಿಯಲ್ಲಿ 8 ಕಾರುಗಳನ್ನು ಬೈಕಿನಲ್ಲಿ ಬಂದಿದ್ದ ದುಷ್ಕರ್ಮಿಗಳು ಒಟ್ಟು 14 ಕಾರುಗಳ ಗಾಜು ಒಡೆದು ದುಷ್ಕೃತ್ಯ ಮೆರೆದಿದ್ದರು.