vijaya times advertisements
Visit Channel

December 3, 2021

ಗೃಹ ರಕ್ಷಕ ಹುದ್ದೆಗೆ ಅರ್ಜಿ ಆಹ್ವಾನ

ಹೊಸದಾಗಿ ಪ್ರಾರಂಭವಾಗಿರುವ ಚಿತ್ರದುರ್ಗ ಜಿಲ್ಲೆಯ ಹೊಳಲ್ಕೆರೆ ತಾಲ್ಲೂಕು ಚಿತ್ರಹಳ್ಳಿ ಉಪ ಘಟಕದಲ್ಲಿ 32 ಖಾಲಿ ಸ್ಥಾನಗಳು, ಮೊಳಕಾಲೂರು ತಾಲ್ಲೂಕು ರಾಂಪುರ ಉಪ ಘಟಕದಲ್ಲಿ 09 ಖಾಲಿ ಸ್ಥಾನಗಳು, ಚಳ್ಳಕೆರೆ ತಾಲ್ಲೂಕು ಪರಶುರಾಂಪುರ ಉಪ ಘಟಕದಲ್ಲಿ 10 ಖಾಲಿ ಸ್ಥಾನಗಳು, ಚಿತ್ರದುರ್ಗ ತಾಲೂಕು ಭರಮಸಾಗರ ಉಪ ಘಟಕದಲ್ಲಿ 14 ಖಾಲಿ ಸ್ನಾನಗಳು ಹಾಗೂ ಚಳ್ಳಕೆರೆ ತಾಲ್ಲೂಕು ನಾಯಕನಹಟ್ಟಿ, ಉಪ ಘಟಕದಲ್ಲಿ 10 ಖಾಲಿ ಸ್ಥಾನಗಳು ಸೇರಿದಂತೆ ಒಟ್ಟು 75 ಖಾಲಿ ಸ್ಥಾನಗಳು ಇವೆ.

ಚರ್ಮದ ಅಂದಕ್ಕೆ ಉಪಯೋಗಿಸಿ ಮೆಂತ್ಯ

ತ್ವಚೆಯನ್ನು ಮೃದುವಾಗಿಸಲು ಮೆಂತ್ಯವನ್ನು ಬಹಳ ಹಿಂದಿನಿಂದಲೂ ಬಳಸಲಾಗುತ್ತಿದೆ. ಮೆಂತ್ಯವು ಚರ್ಮದ ಮೇಲಿನ ಕಲೆಗಳನ್ನು ಅಥವಾ ಗುರುತುಗಳನ್ನು ನಿವಾರಿಸುತ್ತದೆ ಮತ್ತು ಚರ್ಮಕ್ಕೆ ಹೊಳಪನ್ನು ತರುತ್ತದೆ. ಮೆಂತ್ಯ ತಿನ್ನುವುದರಿಂದ ಮೊಡವೆ ಸಮಸ್ಯೆಯನ್ನು ಹೋಗಲಾಡಿಸಬಹುದು.

ಐಎಂಎಫ್‌ನ ಉನ್ನತ ಸ್ಥಾನಕ್ಕೇರಿದ ಗೀತಾ ಗೋಪಿನಾಥ್

ಅಂತಾರಾಷ್ಟ್ರೀಯ ಹಣಕಾಸು ನಿಧಿಯ ಇತಿಹಾಸದಲ್ಲಿ ಮೊದಲ ಮಹಿಳಾ ಮುಖ್ಯ ಅರ್ಥಶಾಸ್ತ್ರಜ್ಞರಾಗಿರುವ ಗೀತಾ ಗೋಪಿನಾಥ್ ಅವರು ಐಎಂಎಫ್​ನ ಸದಸ್ಯ ರಾಷ್ಟ್ರಗಳಿಂದ ಮೆಚ್ಚುಗೆಯನ್ನು ಗಳಿಸಿದ್ದಾರೆ ಮತ್ತು ಕಠಿಣವಾದ ಕೆಲಸವನ್ನು ಮುನ್ನಡೆಸಿ, ಯಶಸ್ವಿಗೊಳಿಸುವ ಸಾಮರ್ಥ್ಯ ಅವರಲ್ಲಿದೆ ಎಂದು ಅಂತಾರಾಷ್ಟ್ರೀಯ ಹಣಕಾಸು ನಿಧಿಯ ವ್ಯವಸ್ಥಾಪಕ ನಿರ್ದೇಶಕಿ ಕ್ರಿಸ್ಟಲಿನಾ ಜಾರ್ಜಿವಾ ಅವರು ಹೇಳಿದ್ದಾರೆ.

ಕೊರೊನಾ ಹಿನ್ನೆಲೆಯಲ್ಲಿ ರಾಜ್ಯ ಸರ್ಕಾರದಿಂದ ಹೊಸ ಮಾರ್ಗಸೂಚಿ ಬಿಡುಗಡೆ

ವಿಮಾನ ನಿಲ್ದಾಣದಲ್ಲಿ ನೆಗೆಟಿವ್ ವರದಿ ಬಂದ ನಂತರವೇ ಹೊರಗೆ ಹೋಗಲು ಅವಕಾಶ.
ಮಕ್ಕಳನ್ನು ಶಾಲೆಗೆ ಕಳುಹಿಸಲು ಪೋಷಕರು ಕಡ್ಡಾಯವಾಗಿ 2 ಡೋಸ್ ಲಸಿಕೆ ಪಡೆದಿರಬೇಕು.
ಸಿನಿಮಾ ಥಿಯೇಟರ್‌ಗಳು ಮತ್ತು ಮಾಲ್‌ಗಳನ್ನು ಪ್ರವೇಶಿಸಲು 2 ಡೋಸ್ ಲಸಿಕೆ ಕಡ್ಡಾಯವಾಗಿ ಪಡೆದಿರಬೇಕು.
ಮದುವೆಗೆ ಭಾಗವಹಿಸಲು 500 ಜನಕ್ಕೆ ಮಾತ್ರ ಅವಕಾಶ.
ಶಾಲೆ ಕಾಲೇಜುಗಳಲ್ಲಿ ಯಾವುದೇ ಸಮಾರಂಭ ನಡೆಸಲು ಅವಕಾಶವಿಲ್ಲ.

ಚಿಕ್ಕಮಗಳೂರು ಜಿಲ್ಲಾ ಪೊಲೀಸರು ನಾಯಿಗಳ ರೀತಿಯಲ್ಲಿ ವರ್ತಿಸುತ್ತಿದ್ದಾರೆ – ಆರಗ ಜ್ಞಾನೇಂದ್ರ

ಚಿಕ್ಕಮಗಳೂರು ಜಿಲ್ಲಾ ಪೊಲೀಸರು ನಾಯಿಗಳ ರೀತಿಯಲ್ಲಿ ವರ್ತಿಸುತ್ತಿದ್ದಾರೆ ಎಂಬ ವಿವಾದಾತ್ಮಕ ಹೇಳಿಕೆ ಬಗ್ಗೆ ಪ್ರತಿಕ್ರಿಯಿಸಿರುವ ಆರಗ ಜ್ಞಾನೇಂದ್ರ ನಾನು ಎಲ್ಲಾ ಪೊಲೀಸರ ವಿರುದ್ಧ ಮಾತನಾಡಿಲ್ಲ. ಗೋ ಕಳ್ಳರಿಗೆ ಬೆಂಬಲ ನೀಡುವ ಪೊಲೀಸರ ಬಗ್ಗೆಯಷ್ಟೇ ಮಾತನಾಡಿದ್ದೇನೆ ಎಂದು ಗೃಹ ಸಚಿವ ಆರಗ ಜ್ಞಾನೇಂದ್ರ ಸ್ಪಷ್ಟಪಡಿಸಿದ್ದಾರೆ

ಒಮಿಕ್ರಾನ್‌ ಹಿನ್ನಲೆ ವರ್ಕ್ ಫ್ರಮ್ ಹೋಮ್ ಮುಂದುವರೆಸಿದ ಗೂಗಲ್

ಕೊರೊನಾ ರೂಪಾಂತರಿ ತಳಿ ಒಮಿಕ್ರಾನ್ ಭೀತಿ ಹಿನ್ನೆಲೆಯಲ್ಲಿ ತೀರ್ಮಾನ ಬದಲಾಯಿಸಲಾಗಿದೆ 2022 ಜನವರಿ 10ರಿಂದ ವಾರದಲ್ಲಿ ಮೂರು ದಿನ ಕಚೇರಿಯಿಂದ ಕೆಲಸ ನಿರ್ವಹಿಸುವಂತೆ ಗೂಗಲ್ ಸಿಬ್ಬಂದಿಗೆ ಸೂಚನೆ ನೀಡಿತ್ತು. ಇದೀಗ ತೀರ್ಮಾನ ಬದಲಾಯಿಸಲಾಗಿದೆ.

ಜನಸ್ವರಾಜ್‌ ಯಾತ್ರೆ ನಡೆಸಲು ಬಿಜೆಪಿಗೆ ನೈತಿಕತೆ ಇಲ್ಲ

ಚಿಕ್ಕಮಗಳೂರಿನಲ್ಲಿ ವಿಧಾನಪರಿಷತ್‌ ಚುನಾವಣೆ ಪ್ರಚಾರದ ವೇಳೆ ಮಾತನಾಡಿದ ಅವರು,  ಬಿಜೆಪಿಯವರು ಜನ ಸ್ವರಾಜ್ಯಯಾತ್ರೆ ಆರಂಭಿಸಿದ್ದಾರೆ.‌ ಕೇಂದ್ರ ಮತ್ತು ರಾಜ್ಯದಲ್ಲಿ ಅಧಿಕಾರದಲ್ಲಿ ಇದ್ದರೂ ಅವರು ಸ್ಥಳೀಯ ಸಂಸ್ಥೆಗಳ ಬಲವರ್ಧನೆ ಮಾಡಲಿಲ್ಲ. ಅಧಿಕಾರ ವಿಕೇಂದ್ರೀಕರಣದಲ್ಲಿ ಬಿಜೆಪಿಯವರಿಗೆ ನಂಬಿಕೆ ಇಲ್ಲ. ಆ ವ್ಯವಸ್ಥೆಯಲ್ಲಿ ಪ್ರಾಮಾಣಿಕವಾಗಿ ಕೆಲಸವನ್ನೂ ಮಾಡಲಿಲ್ಲ. ಪಂಚಾಯತ್ ರಾಜ್ ವ್ಯವಸ್ಥೆಯಲ್ಲಿ ನಂಬಿಕೆ ಇದ್ದಿದ್ದರೆ ಜಿಲ್ಲಾ ಹಾಗೂ ತಾಲೂಕು ಪಂಚಾಯತಿ ಚುನಾವಣೆ ಮುಂದೂಡುತ್ತಿರಲಿಲ್ಲ. ಚುನಾವಣೆ ಮುಂದೂಡಲು ಒಂದು ಕಾನೂನು ಬೇರೆ  ತಂದಿದ್ದಾರೆ. ಚುನಾವಣೆ ನಡೆಸುವ ವಿಚಾರದಲ್ಲಿ ಬಿಜೆಪಿಯವರಿಗೆ ಬದ್ಧತೆ ಇಲ್ಲ ಎಂದು ಕಿಡಿಕಾರಿದರು.

ಸದ್ಯಕ್ಕೆ ಮಾಲ್‌, ಥಿಯೇಟರ್ ಮತ್ತು ಹೋಟೆಲ್‌ಗಳನ್ನು ಬಂದ್ ಮಾಡುವುದಿಲ್ಲ – ಅಶ್ವತ್ಥನಾರಯಣ

ಓಮಿಕ್ರಾನ್ ವೈರಾಣುವಿನಿಂದ ಜೀವಕ್ಕೇನೂ ಅಪಾಯವಿಲ್ಲ. ಆದರೆ ಮುಂಜಾಗ್ರತೆ ಮತ್ತು ಸುರಕ್ಷತೆ ದೃಷ್ಟಿಯಿಂದ ಇದುವರೆಗೂ ಒಂದೂ ಲಸಿಕೆಯನ್ನು ಪಡೆದುಕೊಳ್ಳದೆ ಇರುವವರು ಲಸಿಕೆಯನ್ನು ಹಾಕಿಸಿಕೊಳ್ಳಬೇಕು. ಸರಕಾರ ಇದಕ್ಕೆ ಅಗತ್ಯ ಕ್ರಮ ಕೈಗೊಳ್ಳಲಿದೆ. ಆದರೆ, ಅನಗತ್ಯ ಭಯ-ಭೀತಿಗಳು ಬೇಡ ಎಂದು ಅವರು ಹೇಳಿದರು. 

basavaraja bommai

ಒಮಿಕ್ರಾನ್‌ ಸೋಂಕು ಹಿನ್ನಲೆ, ಇಂದು ಸಿಎಂ ಮಹತ್ವದ ಸಭೆ

ಶುಕ್ರವಾರ ಮಧ್ಯಾಹ್ನ 1 ಗಂಟೆಗೆ ಸಿಎಂ ಬಸವರಾಜ ಬೊಮ್ಮಾಯಿ ಅವರು ಗೃಹ ಕಚೇರಿ ಕೃಷ್ಣಾದಲ್ಲಿ ಸಭೆ ನಡೆಸಲಿದ್ದಾರೆ. ಸಭೆಯ ಬಳಿಕ ಪತ್ರಿಕಾಗೋಷ್ಠಿ ನಡೆಸಿ ಕೆಲವೊಂದು ಮಹತ್ವದ ವಿಚಾರಗಳನ್ನು ತಿಳಿಸುವ ಸಾಧ್ಯತೆ ಇದೆ. ಸಿಎಂ ಬೊಮ್ಮಾಯಿ ಅವರು ಗುರುವಾರ ದಿಲ್ಲಿ ಪ್ರವಾಸ ಕೈಗೊಂಡಿದ್ದರು. ಈ ಸಂದರ್ಭದಲ್ಲಿ ಅವರು ಕೇಂದ್ರ ಸಚಿವರಾದ ಗಜೇಂದ್ರ ಸಿಂಗ್ ಶೆಖಾವತ್, ಮನ್ಸುಖ್ ಮಾಂಡವೀಯ, ಕಿರೆನ್ ರಿಜಿಜು ಮುಂತಾದವರನ್ನು ಭೇಟಿ ಮಾಡಿದ್ದರು.

ಸಿದ್ದರಾಮಯ್ಯ ಅವರಿಗೆ ಜೆಡಿಎಸ್‌ ಮುಗಿಸುವ ಹಗಲು ಕನಸಿದೆ – ಹೆಚ್.ಡಿ. ಕುಮಾರಸ್ವಾಮಿ

ಈ ಬಗ್ಗೆ ಸರಣಿ ಟ್ವಿಟ್ ಮಾಡಿರುವ, ಅಸೂಯೆ, ದ್ವೇಷ, ಅಸಹನೆ, ಸರ್ವಾಧಿಕಾರಿ ಮನೋಭಾವದ ಸಿದ್ಧಕಲೆ’ಯ ನಿಪುಣನಿಗೆ ರಾಜಕೀಯದಲ್ಲಿ ವಿರಳಾತಿ ವಿರಳವಾಗಿ ಕಾಣುವ ಇಂಥ ಭೇಟಿಗಳನ್ನು ಅರಗಿಸಿಕೊಳ್ಳುವುದು ಹೇಗೆ ತಾನೇ ಸಾಧ್ಯ?. ರಾಜಕೀಯ ರಕ್ಕಸತನ’ಕ್ಕೆ ಅವರು ರಾಜಾಧಿರಾಜ, ‘ರಾಜಕೀಯ ಆಶ್ರಯ ನೀಡಿದ ಕಾಂಗ್ರೆಸ್ ಪಕ್ಷವನ್ನೇ ಹೆಬ್ಬಾವಿನಂತೆ ನುಂಗಲು ಹೊರಟ ಸಿದ್ಧಸೂತ್ರಧಾರನಿಗೆ ರಾಜಕೀಯ ಬದುಕು ಕೊಟ್ಟು ಬೆಳೆಸಿದ ಜೆಡಿಎಸ್ ಪಕ್ಷವನ್ನು ಮುಳುಗಿಸಿಬಿಡುವ ಹಗಲುಕನಸು ಬೇರೆ ಇದೆ ಎಂದು ಟೀಕೆ ಮಾಡಿದ್ದಾರೆ.