vijaya times advertisements
Visit Channel

December 15, 2021

ಮಾಜಿ ಶಾಸಕ ಕೋನರೆಡ್ಡಿ ಕಾಂಗ್ರೆಸ್‌ಗೆ ಸೇರ್ಪಡೆ

ಬೆಳಗಾವಿ ಕಾಂಗ್ರೆಸ್ ಭವನದಲ್ಲಿ ಮಂಗಳವಾರ ಸಂಜೆ ನಡೆದ ಕಾರ್ಯಕ್ರಮದಲ್ಲಿ ಕೋನರೆಡ್ಡಿ ತಮ್ಮ ಹಲವು ಬೆಂಬಲಿಗರ ಜೊತೆ ಕಾಂಗ್ರೆಸ್ ಪಕ್ಷ ಸೇರಿದರು. ಅಧಿವೇಶನದ ಪ್ರಯತ್ನ ಎಲ್ಲಾ ಕಾಂಗ್ರೆಸ್ ನಾಯಕರು ಅಲ್ಲಿಯೇ ಇರುವುದರಿಂದ ಪಕ್ಷ ಸೇರ್ಪಡೆ ಕಾರ್ಯಕ್ರಮ ಅಲ್ಲಿಯೇ ಆಯೋಜಿಸಲಾಗಿತ್ತು.

ನಾಯಕತ್ವದ ವಿಚಾರದ ಬಗ್ಗೆ ಪ್ರತಿಕ್ರಿಯಿಸಿದ ಕೊಯ್ಲಿ

ಸಭೆ ನಡೆಯುವ ಒಂದೂವರೆ ಗಂಟೆ ಮೊದಲು ನನಗೆ ಏಕದಿನ ತಂಡದ ನಾಯಕತ್ವದ ಕುರಿತು ಮಾಹಿತಿ ನೀಡಿದರು. ಇದಕ್ಕೂ ಮೊದಲು ನನ್ನೊಂದಿಗೆ ಈ ಕುರಿತು ಚರ್ಚೆ ನಡೆಸಿಲ್ಲ. ನಾವು ಟೆಸ್ಟ್ ತಂಡದ ಆಯ್ಕೆ ಕುರಿತು ಆಯ್ಕೆ ಸಮಿತಿಯೊಂದಿಗೆ ಚರ್ಚೆ ನಡೆಸಿದ್ದೆ. ಆ ವೇಳೆ ಏಕದಿನ ತಂಡದ ನಾಯಕತ್ವದ ಕುರಿತು ಯಾವುದೇ ಚರ್ಚೆ ನಡೆದಿರಲಿಲ್ಲ ಎಂದು ತಿಳಿಸಿದ್ಧಾರೆ.

ಯೋಧ ವರುಣ್ ಸಿಂಗ್ ವಿಧಿವಶ

‘ಕೆಚ್ಚೆದೆಯ ಗ್ರೂಪ್ ಕ್ಯಾಪ್ಟನ್ ವರುಣ್ ಸಿಂಗ್ ಅವರ ನಿಧನದ ಸುದ್ದಿಯನ್ನು ತಿಳಿಸಲ IAF ದುಃಖಿಸುತ್ತದೆ. ಡಿ. 8ರಂದು ಸಂಭವಿಸಿದ ಹೆಲಿಕಾಪ್ಟರ್ ಅಪಘಾತದಲ್ಲಿ ಗಾಯಗಳಿಂದ ಬಳಲುತ್ತಿದ್ದ ಅವರು ಇಂದು ಬೆಳಿಗ್ಗೆ (ಡಿ. 15) ನಿಧನರಾಗಿದ್ದಾರೆ. ಅವರ ಕುಟುಂಬಕ್ಕೆ ಐಎಎಫ್ ತೀವ್ರ ಸಂತಾಪ ವ್ಯಕ್ತಪಡಿಸುತ್ತಿದೆ ಮತ್ತು ಅವರ ಜತೆಗೆ ಇರಲಿದೆ’ ಎಂದು ಭಾರತೀಯ ವಾಯುಪಡೆ ಟ್ವೀಟ್ ಮಾಡಿದೆ

PFI ಕಾರ್ಯಕರ್ತರಿಂದ ರಾಜ್ಯಾದ್ಯಂತ ಪ್ರತಿಭಟನೆಗೆ ಕರೆ. ಕಾರಣ ಏನು ?

ಬಂಧನವನ್ನು ಖಂಡಿಸಿ ಪ್ರತಿಭಟನಕಾರರು ಠಾಣೆ ಮುಂದೆ ಜಮಾಯಿಸಿದಾಗಲಷ್ಟೇ ವಿಚಾರಣೆಗಾಗಿ ಕರೆ ತಂದಿದ್ದೇವೆಂದು ಪೊಲೀಸರು ಸಮಜಾಯಿಷಿ ನೀಡಿದ್ದರು. ಅಮಾಯಕರನ್ನು ಕೂಡಲೇ ಬಿಡುಗಡೆಗೊಳಿಸಬೇಕೆಂದು ಪ್ರತಿಭಟನಕಾರರು ಪಟ್ಟು ಹಿಡಿದಾಗ ಬಹಳ ಸಮಯದ ನಂತರ ಒಬ್ಬರನ್ನು ಬಿಡುಗಡೆಗೊಳಿಸಿದ್ದರು. ಉಳಿದಿಬ್ಬರು ಅಮಾಯಕರನ್ನು ಬಿಡುಗಡೆಗೊಳಿಸುವಂತೆ ಶಾಂತಿಯುತವಾಗಿ ಪ್ರತಿಭಟನೆ ಮುಂದುವರಿಸಿದಾಗ ಪೊಲೀಸರು ಯಾವುದೇ ಸೂಚನೆ ನೀಡದೇ ರಾತ್ರಿ 9 ಗಂಟೆ ಸುಮಾರಿಗೆ ಏಕಾಏಕಿ ಲಾಠಿ ಬೀಸಿದ್ದಾರೆ. ಘಟನೆಯಲ್ಲಿ ಹಲವಾರು ಮಂದಿ ಗಂಭೀರ ಗಾಯಗೊಂಡಿದ್ದಾರೆ.

ಮತಾಂತರ ನಿಷೇಧ ಕಾಯ್ದೆ ವಿರೋಧಿಸಲು ಕಾಂಗ್ರೆಸ್ ತೀರ್ಮಾನ

ಭಾವನಾತ್ಮಕ ವಿಚಾರಗಳನ್ನು ಮುಂದಿಟ್ಟುಕೊಂಡು ಬಿಜೆಪಿ ಜನರನ್ನು ದಾರಿ ತಪ್ಪಿಸುವ ಕೆಲಸ ಮಾಡುತ್ತಿದೆ. ಇದೂ ಸಹ ಆ ಪಕ್ಷದ ರಹಸ್ಯ ಕಾರ್ಯಸೂಚಿಯಾಗಿದೆ. ಈ ಹಿನ್ನೆಲೆಯಲ್ಲಿ ಕಾಯಿದೆಯನ್ನು ವಿರೋಧಿಸಬೇಕಿದೆ ಎಂದು ಸಿದ್ದರಾಮಯ್ಯ ಅವರು ಹೇಳಿದಾಗ ಸಭೆ ಸರ್ವಾನುಮತದಿಂದ ಒಪ್ಪಿಗೆ ಸೂಚಿಸಿತು.

ಬಹುಮತಕ್ಕೆ ಬೇಕು 1 ಸ್ಥಾನ ಹಾಗದರೆ ಯಾರಾಗ್ತಾರೆ ಮೇಲ್ಮನೆ ಕಿಂಗ್‌

ಈಗ 11 ಸ್ಥಾನ ಗೆದ್ದಿರುವ ಬಿಜೆಪಿ ಮೇಲ್ಮನೆಯಲ್ಲಿ ಹೊಂದಿರುವ ಸದಸ್ಯರ ಸಂಖ್ಯೆ 37ಕ್ಕೆ ಏರಿದೆ. ಕಾಂಗ್ರೆಸ್ ಬಲ 26ಕ್ಕೆ ವೃದ್ಧಿಸಿದೆ. ಜೆಡಿಎಸ್ 11 ಸದಸ್ಯರನ್ನ ಹೊಂದಿದೆ. ಪಕ್ಷೇತರ ಸದಸ್ಯರ ಸಂಖ್ಯೆ ಕೇವಲ 1ಮಾತ್ರ. ಪ್ರಸ್ತುತ ಇರುವ ಅಂಕಿ ಅಂಶಗಳನ್ನು ಗಮನಿಸಿದರೆ ಬಿಜೆಪಿ ಬಹುಮತ ಸಾಭೀತು ಪಡಿಸಿಲು ಇನ್ನೂ ಒಂದು ಸ್ಥಾನದ ಅವಶ್ಯಕತೆ ಇದೆ.

1ಕೆಜೆ ಚಹಾಪುಡಿ ಬೆಲೆ 99,999 ಎಲ್ಲಿದು ? ನೀವೆ ನೋಡಿ

 ಮನೋಹರಿ ಗೋಲ್ಡ್ ಟೀ ಅಸ್ಸಾಂನ ದಿಬ್ರುಗಡ್ ಜಿಲ್ಲೆಯಲ್ಲಿ ಮಾರಾಟವಾಗುವ ಅತ್ಯಂತ ಅಪರೂಪದ ಟೀ. ಔಷಧೀಯ ಗುಣಗಳಿಂದ ಹೆಚ್ಚು ಸಮೃದ್ಧವಾಗಿರುವ ಈ ಚಹಾದ ಮೊಗ್ಗುಗಳನ್ನು ಬೆಳಗ್ಗೆ ತರಿದುಹಾಕುವುದರಿಂದ ಅವುಗಳ ಗುಣಮಟ್ಟ ಮತ್ತು ಸುವಾಸನೆಯಲ್ಲಿ ಯಾವುದೇ ವ್ಯತ್ಯಾಸ ಕಾಣುವುದಿಲ್ಲ. ಹೀಗಾಗಿ ಮನೋಹರಿ ಗೋಲ್ಡ್ ಟೀ ಖರೀದಿಗೆ ಭಾರಿ ಡಿಮ್ಯಾಂಡ್ ಇದೆ.. ಇಂತಹ ಚಹಾಪುಡಿಯನ್ನು 75 ಸಾವಿರ ರೂಪಾಯಿಗೆ ಈ ಮೊದಲು ಗುಹಾವಟಿ ಮೂಲದ ವಿಷ್ಣು ಟೀ ಕಂಪನಿ ಖರೀದಿಸಿತ್ತು. ಇದೀಗ ಸೌರವ್​ ಟೀ ಟ್ರೇಡರ್ಸ್​ ಎಂಬ ಕಂಪನಿ 99,999ರೂ ಗೆ ಬಿಡ್‌ ಮಾಡಿ ಇದನ್ನು ಖರೀದಿಸಿದೆ.​ ಈ ಮೂಲಕ ವಿಶ್ವದ ಅತ್ಯಂತ ದುಬಾರಿ ಟೀ ಪೌಡರ್‌ ಎಂದು ಪ್ರಸಿದ್ಧಿ ಗಳಿಸಿದೆ.