Visit Channel

December 22, 2021

ಚಿಕ್ಕಬಳ್ಳಾಪುರದಲ್ಲಿ ಕಂಪಿಸಿದ ಭೂಮಿ

ಬುಧವಾರ ಬೆಳಗ್ಗೆ 7.10ರ ಸುಮಾರಿಗೆ ಭೂಮಿ ಕಂಪಿಸಿದೆ. ರಿಕ್ಟರ್ ಮಾಪಕದಲ್ಲಿ 2.9 ಮತ್ತು 3.0 ತೀವ್ರತೆಯ ಕಂಪನ ದಾಖಲಾಗಿದೆ. ಭೂಮಿ ಕಂಪಿಸಿದ ಅನುಭವ ಆಗುತ್ತಲೇ ಜನರು ಮನೆಯಿಂದ ಹೊರಗೋಡಿ ಬಂದಿದ್ದಾರೆ. ಭೂಮಿ ಕಂಪಿಸಿದ ಅನುಭವವಾಯಿತು. ಪಾತ್ರೆಗಳು ಅಲುಗಾಡಿದವು ಎಂದು ದೊಡ್ಡಹಳ್ಳಿ ಗ್ರಾಮಸ್ಥರು ಹೇಳಿದ್ದಾರೆ. ಬಂಡಹಳ್ಳಿಯಲ್ಲಿ ಕೆಲವು ಮನೆಗಳಲ್ಲಿ ಬಿರುಕು ಕಾಣಿಸಿಕೊಂಡಿದೆ.

ಮಸೀದಿಯಲ್ಲಿನ ಧ್ವನಿ ವರ್ಧಕಗಳನ್ನು ತೆರವುಗೊಳಿಸಿದ ಪೊಲೀಸರು

ಸುಪ್ರೀಂ ಕೋರ್ಟ್ ಆದೇಶದ ಹಿನ್ನಲೆಯಲ್ಲಿ ನಗರದಲ್ಲಿನ ಮಸೀದಿಗಳಲ್ಲಿರುವ ಧ್ವನಿ ವರ್ಧಕಗಳನ್ನು ಪೊಲೀಸರು ತೆರವುಗೊಳಿಸುತ್ತಿದ್ದಾರೆ. ರಾಜ್ಯ ರಾಜಧಾನಿಯ ಮಸೀದಿಗಳಲ್ಲಿ ಇದ್ದ ಧ್ವನಿವರ್ಧಕಗಳನ್ನ ಪೊಲೀಸರು ಉಚ್ಚ ನ್ಯಾಯಾಲಯದ ಆದೇಶದ ಹಿನ್ನೆಲೆಯಲ್ಲಿ ತೆರೆವುಗೊಳಿಸಿದ್ದಾರೆ.ನಿನ್ನೆಯಷ್ಟೆ ಸಿದ್ದಾಪುರ ವಾರ್ಡ್ 144 ನಲ್ಲಿದ್ದ ಧ್ವನಿ ವರ್ಧಕಗಳನ್ನ ತೆರುವುಗೊಳಿಸಲಾಗಿದೆ.

ಬೆಂಗಳೂರಿನಲ್ಲಿ ಜೀವಂತ ಮದ್ದು ಗುಂಡು ಪತ್ತೆ

ಇದನ್ನು ಗಂಭೀರವಾಗಿ ಪರಿಗಣಿಸಿದ ಮಾಲೀಕ ಶ್ರೀನಿವಾಸ್ ಪೊಲೀಸರಿಗೆ ಮಾಹಿತಿ ನೀಡಿದ್ದು ಸ್ಥಳಕ್ಕೆ ಬಂದ ಪೊಲೀಸರು ತಪಾಸಣೆ ನಡೆಸಿ ಪರಿಶೀಲಿಸಿದಾಗ ಸಿಂಗಲ್ ಬ್ಯಾರಲ್ ಗನ್ನೆ ಬಳಸುವ ಮದ್ದುಗುಂಡು ಎಂಬುದನ್ನು ಪತ್ತೆ ಹಚ್ಚಿದ್ದಾರೆ. ಅನುಮಾನಾಸ್ಪದವಾಗಿ ಗುಂಡು ದೊರೆತಿರುವ ಬಗ್ಗೆ ಬಾಂಬ್ ನಿಷ್ಕ್ರಿಯ ತಂಡ ಹಾಗೂ ಶ್ವಾನದಳ ಬಂದು ತಪಾಸಣೆ ನಡೆಸಿದಾಗ ಮತ್ತೊಂದು ಗುಂಡು ಪತ್ತೆಯಾಗಿತ್ತು ಎಂದು ಡಿಸಿಪಿ ಸಿಕೆ ಬಾಬಾ ತಿಳಿಸಿದ್ದಾರೆ.

ಕೆ.ಆರ್‌ಪೇಟೆಯ ಲೋಕನಹಳ್ಳಿ ಕನ್ನಡ ಸರ್ಕಾರಿ ಪ್ರಾಥಮಿಕ ಶಾಲೆ ದುಸ್ಥಿತಿ

ಶಿಕ್ಷಣ ಸಚಿವರು ನಿದ್ದೆ ಮಾಡ್ತಿದ್ದಾರಾ? ಇದು ಸರ್ಕಾರಿ ಶಾಲೆಯೋ ದನದ ಹಟ್ಟಿಯೋ? ಕೆ.ಆರ್‌ಪೇಟೆಯ ಲೋಕನಹಳ್ಳಿ ಕನ್ನಡ ಸರ್ಕಾರಿ ಪ್ರಾಥಮಿಕ ಶಾಲೆ ಕುಸಿದು ಬೀಳುತ್ತಿದ್ರು ಮಂಡ್ಯದ  ಶಿಕ್ಷಣ ಅಧಿಕಾರಿಗಳಿಗೆ ಕಾಣುತ್ತಿಲ್ಲ.

ಡಿಸೆಂಬರ್ 31ಕ್ಕೆ ಕರ್ನಾಟಕ ಬಂದ್‌ಗೆ ಕನ್ನಡಪರ ಸಂಘಟನೆಗಳ ಕರೆ

ಕರ್ನಾಟಕ, ಕನ್ನಡ ನಾಡು ನುಡಿಯ ಒಗ್ಗಟ್ಟಿಗೆ ಕನ್ನಡಿಗರು ಈ ಸಂದರ್ಭದಲ್ಲಿ ಒಟ್ಟಾಗಿ ಶಕ್ತಿಯನ್ನು ಪ್ರದರ್ಶಿಸಬೇಕು. 25ಕ್ಕೂ ಹೆಚ್ಚು ಸಂಘಟನೆಗಳು ಬೆಂಬಲ ಸೂಚಿಸಿವೆ. ಕನ್ನಡಿಗರೆಲ್ಲರೂ ನಮಗೆ ಬೆಂಬಲ ನೀಡಬೇಕು. ಡಿಸೆಂಬರ್ 31ರಂದು ಬೆಳಗ್ಗೆ 6 ಗಂಟೆಯಿಂದ ಸಂಜೆ 6 ಗಂಟೆಯವರೆಗೆ ಅಗತ್ಯ ಸೇವೆಗಳನ್ನು ಹೊರತುಪಡಿಸಿ ಬೇರೆಲ್ಲಾ ಸೇವೆಗಳಿಗೆ ವ್ಯತ್ಯಯವುಂಟಾಗಲಿದೆ ಎಂದು ಕನ್ನಡ ವಾಟಾಳ್ ಪಕ್ಷದ ವಾಟಾಳ್ ನಾಗರಾಜ್ ಇಂದು ಬೆಂಗಳೂರಿನಲ್ಲಿ ಘೋಷಿಸಿದ್ದಾರೆ. 

ರಾಜ್ಯ ಪೊಲೀಸ್‌ ಇಲಾಖೆಯಲ್ಲಿ ಅರ್ಜಿ ಸಲ್ಲಿಸಲು ತೃತೀಯ ಲಿಂಗಿಗಳಿಗೂ ಅವಕಾಶ

ಮಂಗಳಮುಖಿಯರಿಗಾಗಿ ರಾಜ್ಯ ಪೊಲೀಸ್​ ಇಲಾಖೆ 5 ಹುದ್ದೆಗಳನ್ನು ಮೀಸಲಿರಿಸಿದೆ. ಪೊಲೀಸ್ ಇಲಾಖೆಯ ವಿಶೇಷ ಮೀಸಲು ಪಡೆ (ಕೆಎಸ್​ಆರ್​​ಪಿ ಮತ್ತು ಐ.ಆರ್.ಬಿ) ಸಬ್ ಇನ್‌ಸ್ಪೆಕ್ಟರ್ ಹುದ್ದೆಗಳಿಗೆ ಅವರು ಅರ್ಜಿ ಸಲ್ಲಿಸಬಹುದಾಗಿದೆ. ಹುದ್ದೆಗೆ ಅರ್ಜಿ ಸಲ್ಲಿಸಲು ಜಿಲ್ಲಾಧಿಕಾರಿಯಿಂದ ಮಂಗಳಮುಖಿ ಎಂಬ ಧೃಡೀಕರಣ ಪತ್ರ ಕಡ್ಡಾಯವಾಗಿದೆ. ಧೃಡೀಕರಣ ಪತ್ರ ನೀಡಿಲ್ಲವಾದಲ್ಲಿ ಅಂತಹ ಅರ್ಜಿ ತಿರಸ್ಕೃತವಾಗಲಿದೆ.

RSS ಷಡ್ಯಂತ್ರದಿಂದಾಗಿ ಮತಾಂತರ ನಿಷೇಧ ಕಾಯಿದೆ – ಸಿದ್ದರಾಮಯ್ಯ

ರಾಜ್ಯ ಸರ್ಕಾರ ಮತಾಂತರ ನಿಷೇಧ ಕಾಯ್ದೆಯನ್ನು ಸದನದಲ್ಲಿ ಮಂಡಿಸಿದ ಬಳಿಕ ಸಭಾತ್ಯಾಗ ಮಾಡಿ ಮಾಧ್ಯಮದವರ ಜೊತೆ ಮಾತನಾಡಿದ ಸಿದ್ದರಾಮಯ್ಯ, ಪರಿಷತ್ ಚುನಾವಣೆಯ ಫಲಿತಾಂಶ ಇಂಥದ್ದೊಂದು ವಿವಾದಾತ್ಮಕ ಕಾನೂನು ಜಾರಿ ಮಾಡಲು ಕಾರಣ. ನಮಗೆ 45% ಮತ ಬಿದ್ದಿದೆ, ಬಿಜೆಪಿಗೆ 41% ಮತ ಬಿದ್ದಿದೆ. ಹೋದ ಮಾನ ಉಳಿಸಿಕೊಳ್ಳಲು ಸರ್ಕಾರ ಸಂವಿಧಾನ ಬಾಹಿರ ಕಾನೂನು ಜಾರಿ ಮಾಡಲು ಹೊರಟಿದೆ. ಭಾರತದ ಸಂವಿಧಾನದ ಆಧಾರದ ಮೇಲೆ ಸರ್ಕಾರ ನಡೆಸಬೇಕು, ಪಾಕಿಸ್ತಾನದ ಸಂವಿಧಾನ ನೋಡಿಕೊಂಡಲ್ಲ. ಈಶ್ವರಪ್ಪ ಅವರಿಗೆ ನಮ್ಮ ಸಂವಿಧಾನದ ಬಗ್ಗೆ ಗೊತ್ತಿಲ್ಲ ಎಂದು ಕಾಣುತ್ತದೆ ಎಂದು ವ್ಯಂಗ್ಯವಾಡಿದರು

ಲಕ್ನೋ ತಂಡದ ತರಬೇತುದಾರರಾಗಿ ಆಂಡಿ ಫ್ಲವರ್‌ ಆಯ್ಕೆ

‘ಜಿಂಬಾಬ್ವೆಯ ಮಾಜಿ ನಾಯಕ ಮತ್ತು ವಿಕೆಟ್‌ಕೀಪರ್ ಆಂಡಿ ಫ್ಲವರ್ ಐಪಿಎಲ್‌ನ ಲಕ್ನೋ ಫ್ರಾಂಚೈಸಿಗೆ ಕೋಚ್ ಆಗಲಿದ್ದಾರೆ. ಡಾ ಸಂಜೀವ್ ಗೋಯೆಂಕಾ, ಲಕ್ನೋ ಐಪಿಎಲ್ ತಂಡದ ಮಾಲೀಕ ಆಂಡಿಯನ್ನು ಆರ್‌ಪಿಎಸ್‌ಜಿ ಕುಟುಂಬಕ್ಕೆ ಸ್ವಾಗತಿಸಿದ್ದಾರೆ” ಎಂದು ಆರ್‌ಪಿ ಸಂಜೀವ್ ಗೋಯೆಂಕಾ ಗ್ರೂಪ್ ಶುಕ್ರವಾರ ಟ್ವೀಟ್ ಮಾಡಿದೆ.

ನೈಟ್‌ ಕರ್ಫ್ಯೂ ಹೇರಲು ರಾಜ್ಯಗಳಿಗೆ ಕೇಂದ್ರದ ಅನುಮತಿ

ಕರೋನಾ ಡೆಲ್ಟಾ ರೂಪಾಂತರಗಳಲ್ಲಿ (Delta Variant) ಓಮಿಕ್ರಾನ್ ಅತ್ಯಂತ ಮಾರಣಾಂತಿಕವಾಗಿದೆ ಎಂದು ಸಾಬೀತಾಗಿರುವ ರಾಜ್ಯಗಳಲ್ಲಿ ಕನಿಷ್ಠ ಮೂರು ಪಟ್ಟು ಹೆಚ್ಚು ಸಾಂಕ್ರಾಮಿಕ ಹರಡುವ ಬಗ್ಗೆ ಕೇಂದ್ರವು ಎಚ್ಚರಿಸಿದೆ. ಓಮಿಕ್ರಾನ್ ಪ್ರಕರಣಗಳ ಸಂಖ್ಯೆ ಹೆಚ್ಚಾಗುತ್ತಿರುವ ಹಿನ್ನಲೆಯಲ್ಲಿ ರಾಜ್ಯಗಳು ಹಾಗೂ ಕೇಂದ್ರಾಡಳಿತ ಪ್ರದೇಶಗಳಲ್ಲಿ ಅದನ್ನು ತಡೆಗಟ್ಟಲು ಅಗತ್ಯ ಕ್ರಮಗಳನ್ನು ತೆಗೆದುಕೊಳ್ಳುವಂತೆ ಕೇಂದ್ರ ಸರ್ಕಾರವು ಸೂಚಿಸಿದೆ.

ಡೆಲ್ಟಾಗಿಂತ ಓಮಿಕ್ರಾನ್‌ 3 ಪಟ್ಟು ವೇಗ – ಕೇಂದ್ರ ಆರೋಗ್ಯ ಸಚಿವಾಲಯ

ಕೇಂದ್ರ ಆರೋಗ್ಯ ಸಚಿವಾಲಯ ಎಲ್ಲಾ ಮುಖ್ಯಕಾರ್ಯದರ್ಶಿಗಳಿಗೂ ಪತ್ರ ಬರೆಯಲಾಗಿದ್ದು, ಜಿಲ್ಲಾ ಕೇಂದ್ರಗಳಲ್ಲಿ ಕೋವಿಡ್ 19 ನಿಂದ ಪೀಡಿತ ಜನಸಂಖ್ಯೆ,  ಭೌಗೋಳಿಕ ಹರಡುವಿಕೆ, ಆಸ್ಪತ್ರೆ ಮೂಲಸೌಕರ್ಯ, ಬಳಕೆ, ಮಾನವಸಂಪನ್ಮೂಲ, ಕಂಟೈನ್ಮೆಂಟ್ ಝೋನ್ ಗಳಿಗೆ  ಸಂಬಂಧಿಸಿದ ಡೇಟಾಗಳ ಪರಿಶೀಲನೆ ನಡೆಯಬೇಕು ಎಂದು ಕೇಂದ್ರ ಆರೋಗ್ಯ ಕಾರ್ಯದರ್ಶಿ ರಾಜೇಶ್ ಭೂಷಣ್ ಪತ್ರದಲ್ಲಿ ತಿಳಿಸಿದ್ದಾರೆ.