download app

FOLLOW US ON >

Saturday, May 28, 2022
Breaking News
ತೃತೀಯ ರಂಗಕ್ಕೆ ದೇವೇಗೌಡರ ಮಾರ್ಗದರ್ಶನ ; ಕೆಸಿಆರ್ ತಂತ್ರ!ಹಳೇ ಪಠ್ಯಪುಸ್ತಕವನ್ನೇ ಮುಂದುವರೆಸಲು ಕರವೇ ನಾರಾಯಣಗೌಡ ಆಗ್ರಹ!ಹಿಂದಿನ ಸರ್ಕಾರಗಳು ತಂತ್ರಜ್ಞಾನವನ್ನು ಬಡವರ ವಿರೋಧಿ ಎಂದು ಬಿಂಬಿಸಿದ್ದವು : ಮೋದಿ!ಬಿಜೆಪಿಗೆ ಡಿಕೆಶಿ ಅವರಂತ ಕಳ್ಳರ ಅವಶ್ಯಕತೆ ಇಲ್ಲ : ಯತ್ನಾಳ್!ಇಂದಿರಾ ಕ್ಯಾಂಟೀನ್ ನಿರ್ವಹಣೆ ಇಸ್ಕಾನ್‍ಗೆ ವಹಿಸಲು ಚಿಂತನೆ!ಮೋದಿ ಮೂಲಗುರಿ ಪ್ರಾದೇಶಿಕ ಪಕ್ಷಗಳ ಮೂಲೋತ್ಪಾಟನೆ : ಹೆಚ್.ಡಿ ಕುಮಾರಸ್ವಾಮಿ!ಚೆನ್ನಪಟ್ಟಣದಲ್ಲಿ ಡಿಕೆಶಿ ವಿರುದ್ದವೇ ಬಂಡಾಯ ಸಾರಿದ ಭಾವ ಶರತ್‍ಚಂದ್ರ!ಸಂವಿಧಾನಕ್ಕೆ ಶಿರಸಾಷ್ಟಾಂಗ ನಮಸ್ಕಾರ, ಇತ್ತ ‘ಆಪರೇಷನ್ ಕಮಲ’ : ಮೋದಿಗೆ ಹೆಚ್.ಡಿ.ಕೆ ಟಾಂಗ್!ಆರ್‍ಎಸ್‍ಎಸ್‍ನವರು ಮೂಲ ಭಾರತೀಯರಲ್ಲ : ಸಿದ್ದರಾಮಯ್ಯ!ದಾಳಿ ವೇಳೆ ನನ್ನ ಗೌಪ್ಯ ದಾಖಲೆಗಳನ್ನು ವಶಪಡಿಸಿಕೊಂಡಿದೆ ಸಿಬಿಐ : ಕಾರ್ತಿ ಚಿದಂಬರಂ!
English English Kannada Kannada

January 7, 2022

ಗೃಹ ಮಂತ್ರಿಗಳಿಗೆ ತಾಕತ್ತಿದ್ದರೆ ಪಾದಯಾತ್ರೆ ತಡೆಯಲಿ – ಡಿ.ಕೆ. ಶಿವಕುಮಾರ್

ದೇಶದ ರಾಜ್ಯದ ಬಡಪಾಯಿ ಜನರಿಗೆ ಒಂದು ನಿಯಮ, ಸರ್ಕಾರವನ್ನು ನಡೆಸುವವರಿಗೆ ಮತ್ತೊಂದು ನಿಯಮ ಸಮಾರಂಭ, ಮದುವೆಗಳಿಗೆ ಸಮಾರಂಭಗಳಿಗೆ ನೂರು ಜನರಿಗೆ ಮಾತ್ರ ಅವಕಾಶವನ್ನು ನೀಡಿದ್ದಾರೆ ಆದರೆ ಸರ್ಕಾರ ನಡೆಸುವ ಕಾರ್ಯಕ್ರಮಗಳಿಗೆ ಸಾವಿರಾರು ಜನ ಬಂದು ಸೇರುತ್ತಿದ್ದಾರೆ. ಇದು ಗೃಹಸಚಿವರಿಗೆ ತಿಳಿಯುವುದಿಲ್ಲವೇ ಎಂದು ಪ್ರಶ್ನಿಸಿದರು.

ಭದ್ರತಾ ವೈಫಲ್ಯಕ್ಕೆ ಮೋದಿಯೇ ಕಾರಣ – ಮಲ್ಲಿಕಾರ್ಜುನ ಖರ್ಗೆ

ಪಂಜಾಬ್ ನಲ್ಲಿ ನಡೆಯಬೇಕಿದ್ದ ರ್ಯಾಲಿಯನ್ನು ರದ್ದೂಗೊಳಿಸಿ ಮೋದಿ ಹಿಂತಿರುಗಲು ಅಲ್ಲಿಯ ಭದ್ರತಾ ಲೋಪವೇ ಕಾರಣ ಎಂದು ಕೇಂದ್ರ ಸರ್ಕಾರ ದಾರಿ ತಪ್ಪಿಸುವ ಹೇಳಿಕೆಯನ್ನು ನೀಡುವ ಕೆಲಸವನ್ನು ಮಾಡುತ್ತಿದೆ ಆದರೆ ನಿಜವಾಗಿಯೂ ಭದ್ರತಾ ಲೋಪವಾಗಿರುವುದು ಕೇಂದ್ರದಿಂದಲೇ ಪ್ರಧಾನಿಯವರೇ ಮಾರ್ಗಸೂಚಿಯನ್ನು ಪಾಲಿಸಿಲ್ಲ ಎಂದು ಆರೋಪಿಸಿದರು.

ಬೆಂಗಳೂರಿನಲ್ಲಿವೆ ಬರೋಬ್ಬರಿ 221 ಮೈಕ್ರೋ ಕಂಟೈನ್‌ಮೆಂಟ್ ವಲಯಗಳು

221 ಮೈಕ್ರೋ ಕಂಟೈನ್‌ಮೆಂಟ್ ವಲಯಗಳಲ್ಲಿ 100ಕ್ಕೂ ಹೆಚ್ಚು ಮೈಕ್ರೋ ಕಂಟೈನ್‌ಮೆಂಟ್ ವಲಯಗಳು ಅಪಾರ್ಟ್‌ಮೆಂಟ್‌ಗಳಲ್ಲಿವೆ. ಮಹದೇವಪುರ ವಲಯದಲ್ಲಿ ಅತಿ ಹೆಚ್ಚು, ಬೊಮ್ಮನಹಳ್ಳಿಯಲ್ಲಿ 63, ಪಶ್ಚಿಮದಲ್ಲಿ 21, ಯಲಹಂಕದಲ್ಲಿ 27, ದಕ್ಷಿಣದಲ್ಲಿ 12, ಪೂರ್ವದಲ್ಲಿ 12, ದಾಸರಹಳ್ಳಿಯಲ್ಲಿ 4 ಮತ್ತು ಆರ್‌ಆರ್‌ನಗರದಲ್ಲಿ – ಮಾತ್ರ 0 ಕಂಟೈನ್‌ಮೆಂಟ್‌ ವಲಯ ಎಂದು ಮಾಹಿತಿ ಲಭ್ಯವಾಗಿದೆ.  ಪಾಸೊಟಿವಿಟಿ ದರವು ದರವು 0.54 ಶೇಕಡಾದಿಂದ 7.5 ಶೇಕಡಾಕ್ಕೆ ಏರಿದೆ ಮತ್ತು ಕಳೆದ 3 ದಿನಗಳಲ್ಲಿ ಆಸ್ಪತ್ರೆಗೆ ದಾಖಲಾಗುವುದು ಹೆಚ್ಚಾಗಿದೆ. ಡಿಸೆಂಬರ್ 2 ರಂದು, ಆಸ್ಪತ್ರೆಗೆ ದಾಖಲಾದವರ ಸಂಖ್ಯೆ ಕೇವಲ ಎಂಟು ಆಗಿತ್ತು, ಇದು ಡಿಸೆಂಬರ್ 3 ರಂದು 22 ಕ್ಕೆ ಏರಿತು ಮತ್ತು ಡಿಸೆಂಬರ್ 5 ರಂದು 39 ಕ್ಕೆ ಏರಿತು. ಹಿರಿಯ ಸರ್ಕಾರಿ ಆರೋಗ್ಯ ಅಧಿಕಾರಿಯೊಬ್ಬರು ಪ್ರಸ್ತುತ, ಕೇವಲ 13 ಮೈಕ್ರೋ ಕಂಟೈನ್‌ಮೆಂಟ್ ವಲಯಗಳು ಓಮಿಕ್ರಾನ್‌ಗೆ ಸಂಬಂಧಿಸಿವೆ ಮತ್ತು ಎಲ್ಲಾ ಪಾಸಿಟಿವ್‌ ರೋಗಿಗಳಿಗೆ ಸಂಬಂಧಿಸಿವೆ ಎಂದು ಹೇಳಿದರು.

ಭಾರತದ ವಿರುದ್ದ ದಕ್ಷಿಣ ಆಫ್ರಿಕಾಗೆ ಭರ್ಜರಿ ಗೆಲುವು

ಎರಡನೇ ಇನ್ನಿಂಗ್ಸ್‌ನಲ್ಲಿ ಉತ್ತಮ ಆರಂಭ ಪಡೆದ ದ. ಆಫ್ರಿಕಾ: 2ನೇ ಇನ್ನಿಂಗ್ಸ್‌ನಲ್ಲಿ ಭಾರತ ನೀಡಿದ 240 ರನ್‌ಗಳ ಗುರಿಯನ್ನು ಬೆನ್ನಟ್ಟಿದ ದಕ್ಷಿಣ ಆಫ್ರಿಕಾ ತಂಡಕ್ಕೆ ಸಾಧಾರಣ ಆರಂಭ ದೊರೆಯಿತು. ಮೊದಲ ವಿಕೆಟ್‌ಗೆ 47 ರನ್‌ಗಳಿಸಿದ್ದಾಗ ದಕ್ಷಿಣ ಆಫ್ರಿಕಾ ತಂಡ 31 ರನ್‌ಗಳಿಸಿದ್ದ ಮಾರ್ಕ್ರಮ್ ವಿಕೆಟ್ ಕಳೆದುಕೊಂಡಿತ್ತು. ನಂತರ 93 ರನ್‌ಗಳಿಗೆ ದಕ್ಷಿಣ ಆಪ್ರಿಕಾ ತಂಡ 2ನೇ ವಿಕೆಟ್ ಕಳೆದುಕೊಂಡಿತು. ನಂತರ ಮೂರನೇ ವಿಕೆಟ್‌ಗೆ ಎಲ್ಗರ್ – ವಾನ್‌ ಡರ್‌ ಡುಸ್ಸೆನ್ ಜೋಡಿ  82 ರನ್‌ಗಳ ಜೊತೆಯಾಟವನ್ನು ನೀಡಿದರು

3 ಉಗ್ರರನ್ನು ಹೊಡೆದುರುಳಿಸಿದ ಭಾರತೀಯ ಸೈನಿಕರು

ಜಮ್ಮು ಮತ್ತು ಕಾಶ್ಮೀರ ಪೊಲೀಸರು ಶುಕ್ರವಾರ  ಟ್ವೀಟ್ ಮಾಡಿ, “ಎನ್‌ಕೌಂಟರ್‌ನಲ್ಲಿ ಮೂವರು ಭಯೋತ್ಪಾದಕರು ಹತರಾಗಿದ್ದಾರೆ. ಅವರ  ಗುರುತು ಮತ್ತು ಸಂಬಂಧವನ್ನು ಖಚಿತಪಡಿಸಲಾಗುತ್ತಿದೆ. ಶಸ್ತ್ರಾಸ್ತ್ರ ಮತ್ತು ಮದ್ದುಗುಂಡುಗಳು ಸೇರಿದಂತೆ ಅಕ್ರಮ ವಸ್ತುಗಳನ್ನು ವಶಪಡಿಸಿಕೊಳ್ಳಲಾಗಿದೆ” ಎಂದಿದ್ದಾರೆ.

ಎಸಿಬಿ ಬಲೆಗೆ ಬಿದ್ದ ತಹಶೀಲ್ದಾರ್‌

ಸಂಜಯ್ ಲಂಚದ ಹಣ ನೀಡಿ ಖಾತೆ ಮಾಡಿಸಿಕೊಳ್ಳಲು ಇಷ್ಟವಿಲ್ಲದ ಕಾರಣ ಈ ಬಗ್ಗೆ ಪೊಲೀಸ್ ಉಪಾಧೀಕ್ಷಕರು ಎಸಿಬಿ ಪೊಲೀಸ್ ಠಾಣೆ, ಚಿಕ್ಕಮಗಳೂರಿಗೆ ದೂರನ್ನು ನೀಡಿದ್ದು, ಪ್ರಕರಣ ದಾಖಲಾಗಿತ್ತು. ಈ ಸಂಬಂಧ ಇಂದು ಶೃಂಗೇರಿಯ ಪಟ್ಟಣದದ ಪ್ರವಾಸಿ ಮಂದಿರದಲ್ಲಿ 25 ಸಾವಿರ ರೂಪಾಯಿಯನ್ನು ಗ್ರಾಮ ಲೆಕ್ಕಾಧಿಕಾರಿ ಸ್ವೀಕರಿಸುವ ಸಂದರ್ಭದಲ್ಲಿ ಡಿವೈಎಸ್‍ಪಿ ಸಿ.ಆರ್. ಗೀತಾ ನೇತೃತ್ವದಲ್ಲಿ ತನಿಖಾಧಿಕಾರಿ ಅನಿಲ್ ಮಂಜುನಾಥ್ ಪಿಐ, ಮತ್ತು ಸಿಬ್ಬಂದಿಗಳು, ಭ್ರಷ್ಟಾಚಾರ ನಿಗ್ರಹ ದಳ ಎ.ಜಿ ರಾಥೋಡ್ ರವರುಗಳು ನಡೆಸಿದ ಕಾರ್ಯಾಚರಣೆಯ ಯಶಸ್ವಿಯಾಗಿದ್ದಾರೆ.

ವೀಕೆಂಡ್‌ ಕರ್ಫ್ಯೂ ಹಿನ್ನಲೆ ಬಸ್‌ ಸಂಚಾರ ಬಂದ್

ಆಸ್ಪತ್ರೆಗೆ ತೆರಳುವ ರೋಗಿಗಳು ಮತ್ತು ಅವರನ್ನು ಚಿಕಿತ್ಸೆ, ಪರೀಕ್ಷೆಗೆ ಕರೆದುಕೊಂಡು ಹೋಗವವರು ಸಂಚಾರ ನಡೆಸಬಹುದು.
ಸರ್ಕಾರಿ/ ಖಾಸಗಿ ಬ್ಯಾಂಕ್, ವಿಮೆ ಕಂಪನಿಗಳ ಸಿಬ್ಭಂದಿಗಳು, ಅಧಿಕಾರಿಗಳು. ಮುದ್ರಣ ಮತ್ತು ದೃಶ್ಯ ಮಾಧ್ಯಮದಲ್ಲಿ ಕೆಲಸ ಮಾಡುವವರು ಸಂಚರಿಸಬಹುದು.

ರಾಜ್ಯ ಲಾಕ್‌ಡೌನ್‌ ಆಗುತ್ತಾ ? ಈ ಬಗ್ಗೆ ಡಾ. ಸುಧಾಕರ್‌ ಹೇಳಿದ್ದು ಹೀಗೆ

ಇನ್ನು ಮುಂದೆ ರಾಜ್ಯದಲ್ಲಿ ಲಾಕ್ ಡೌನ್ ಮಾಡುವ ಯಾವುದೇ ಚಿಂತನೆ ಸರ್ಕಾರದ ಮುಂದೆ ಇಲ್ಲ ಎಂದು ಸ್ಪಷ್ಟಪಡಿಸಿದ್ದಾರೆ. ರಾಜ್ಯದಲ್ಲಿ ಪಾಸಿಟಿವಿಟಿ ದರ ಶೇ.3.5ರಷ್ಟಿದೆ. ಇದು ಹೆಚ್ಚಾಗದಂತೆ ತಡೆಯಲು ವೀಕೆಂಡ್ ಕರ್ಪ್ಯೂ ಜಾರಿ ಮಾಡಲಾಗಿದೆ. ಸಾರ್ವಜನಿಕರು ಲಾಕ್ ಡೌನ್ ಬಗ್ಗೆ ಆತಂಕ ಪಡುವ ಆತಂಕವಿಲ್ಲ ಎಂದು ಹೇಳಿದ್ದಾರೆ.

ಪ್ರಧಾನಿ ಭದ್ರತೆ ಕುರಿತು ಸುಪ್ರೀಂ ಕೋರ್ಟ್‌ನಲ್ಲಿ ಇಂದು ವಿಚಾರಣೆ

ಪ್ರಧಾನಿ ಭದ್ರತೆ ಲೋಪದ ಜವಾಬ್ದಾರಿಯನ್ನು ಸರಿಪಡಿಸಬೇಕು. ಇಂತಹ ಘಟನೆ ಮರುಕಳಿಸಬಾರದು ಎಂಬುದು ನಮ್ಮ ಅಪೇಕ್ಷೆ. ಬಂದೋಬಸ್ತ್ ಕುರಿತು ವೃತ್ತಿಪರ ಮತ್ತು ಪರಿಣಾಮಕಾರಿ ತನಿಖೆಯ ಅಗತ್ಯವಿದೆ. ಪ್ರಧಾನಿ ಭೇಟಿ ವೇಳೆ ಪಂಜಾಬ್ ಪೋಲೀಸರ ಚಲನವಲನ ಮತ್ತು ನಿಯೋಜನೆಯ ಸಂಪೂರ್ಣ ದಾಖಲೆಗಳನ್ನು ಬಟಿಂಡಾದ ಜಿಲ್ಲಾ ನ್ಯಾಯಾಧೀಶರು ಕಸ್ಟಡಿಗೆ ತೆಗೆದುಕೊಳ್ಳಲು ನಿಮ್ಮ ಮೇಲ್ವಿಚಾರಣೆಯಲ್ಲಿ ಸೂಕ್ತವಾಗಿರುತ್ತದೆ ಎಂದು ಸಿಂಗ್ ಪೀಠವನ್ನು ಒತ್ತಾಯಿಸಿದರು.

ಭದ್ರತಾ ಲೋಪದ ಬಗ್ಗೆ ಕಳವಳ ವ್ಯಕ್ತ ಪಡಿಸಿದ ರಾಷ್ಟ್ರಪತಿ

“ರಾಷ್ಟ್ರಪತಿ ರಾಮನಾಥ್ ಕೋವಿಂದ್ ಅವರು ಇಂದು ರಾಷ್ಟ್ರಪತಿ ಭವನದಲ್ಲಿ ಪ್ರಧಾನಿ ನರೇಂದ್ರ ಮೋದಿ ಅವರನ್ನು ಭೇಟಿ ಮಾಡಿದರು ಮತ್ತು ನಿನ್ನೆ ಪಂಜಾಬ್‌ನಲ್ಲಿ ತಮ್ಮ ಬೆಂಗಾವಲು ಪಡೆಗೆ ಉಂಟಾದ ಭದ್ರತಾ ಲೋಪದ ಬಗ್ಗೆ ಪ್ರತ್ಯಕ್ಷ ವಿವರವನ್ನು ಪಡೆದರು. ರಾಷ್ಟ್ರಪತಿ ಗಂಭೀರ ಲೋಪದ ಬಗ್ಗೆ ಕಳವಳ ವ್ಯಕ್ತಪಡಿಸಿದ್ದಾರೆ” ಎಂದು ರಾಷ್ಟ್ರಪತಿ ಭವನ ತಿಳಿಸಿದೆ.

error: Content is protected !!

Submit Your Article