vijaya times advertisements
Visit Channel

January 10, 2022

ಸಚಿವರ ಪುತ್ರನಿಗೆ ಬ್ಲಾಕ್‌ಮೇಲ್‌ ಆರೋಪಕ್ಕೆ ಸಂಬಂಧಿಸಿದಂತೆ 8 ಮಂದಿಯ ವಿಚಾರಣೆ

ವೀಡಿಯೋವನ್ನು ಸಾಮಾಜಿಕ ಜಾಲತಾಣಗಳಲ್ಲಿ ಹರಿಯಬಿಡುವುದಾಗಿ ಬ್ಲ್ಯಾಕ್ ಮೇಲ್ ಮಾಡಿದ್ದರು. ಈ ಸಂಬಂಧ ಭಾನುವಾರ ರಾಹುಲ್ ಭಟ್ ನನ್ನು ಬಂಧಿಸಿ ತಡರಾತ್ರಿವರೆಗೂ ವಿಚಾರಣೆ ನಡೆಸಲಾಗಿದೆ. ಆತನಿಂದ ಜಪ್ತಿ ಮಾಡಿದ ಮೊಬೈಲ್ ಪರಿಶೀಲನೆ ನಡೆಸಿದಾಗ ನಿಶಾಂತ್’ಗೆ ಸಂಬಂಧಿಸಿದ ವಿಡಿಯೊ ಪತ್ತೆಯಾಗಿರುವುದು ಕಂಡುಬಂದಿದೆ.

ಪಾದಯಾತ್ರೆ ನಿಲ್ಲಿಸಬೇಡಿ – ಮಲ್ಲಿಕಾರ್ಜುನ ಖರ್ಗೆ

ಉತ್ತಮ ಯೋಜನೆಗೆ ಸಿದ್ದರಾಮಯ್ಯ ಸರ್ಕಾರದಲ್ಲಿ ಎಂ.ಬಿ. ಪಾಟಿಲ್‌ ರೂಪ ಕೊಟ್ಟಿದ್ದರು. ಡಿ.ಕೆ. ಶಿವಕುಮಾರ್‌(DK Shivakumar) ಅವರು ಜಲ ಸಂಪನ್ಮೂಲ ಸಚಿವರಾದಾಗ ಪರಿಷ್ಕೃತ ಡಿಪಿಆರ್‌ನ್ನು ಕೇಂದ್ರಕ್ಕೆ ಕಳುಹಿಸಿದ್ದಾರೆ. ಈ ಯೋಜನೆ ಜಾರಿಯಾದರೆ ಬೆಂಗಳೂರಿನ ನೀರಿನ ಸಮಸ್ಯೆ ನೀಗುತ್ತದೆ ಎಂದರು.

ಇಂದಿನಿಂದ ಬೂಸ್ಟರ್ ಡೋಸ್‍ಗೆ ಚಾಲನೆ

ಕಳೆದ ಡಿ. 25ರಂದು ಪ್ರಧಾನಿ ಮೋದಿ ಜ.10 ರಿಂದ 60 ವರ್ಷ ದಾಟಿದವರಿಗೆ, ಆರೋಗ್ಯ ಸಿಬ್ಬಂದಿ ಮತ್ತು ಮುಂಚೂಣಿ ಕಾರ್ಯಕರ್ತರಿಗೆ ಬೂಸ್ಟರ್ ಡೋಸ್ ನೀಡುವುದಾಗಿ ಪ್ರಕಟಿಸಿದ್ದರು. ಈ ಹಿನ್ನೆಲೆಯಲ್ಲಿ ಬೂಸ್ಟರ್ ಡೋಸ್ ಲಸಿಕಾ ಅಭಿಯಾನಕ್ಕೆ ಇಂದಿನಿಂದ ಚಾಲನೆ ದೊರೆತಿದೆ. ಅದರಂತೆ ಜ.8ರ ಶನಿವಾರದಿಂದಲೇ ಕೋವಿಡ್ ಪೋರ್ಟಲ್‌ನಲ್ಲಿ 3ನೇ ಡೋಸ್ ಪಡೆಯಲು ಬುಕ್ಕಿಂಗ್ ಆರಂಭವಾಗಿದೆ. ಲಸಿಕಾ ಕೇಂದ್ರಗಳಲ್ಲಿ ನೇರವಾಗಿ ಬುಕ್ ಮಾಡಿಸಿ ಲಸಿಕೆ ಪಡೆಯಲು ಅವಕಾಶವಿದೆ.

ಚಿನ್ನ ಬೆಳ್ಳಿ ದರದಲ್ಲಿ ಭಾರೀ ಇಳಿಕೆ

ಬೆಂಗಳೂರಿನಲ್ಲಿ ಚಿನ್ನ, ಬೆಳ್ಳಿ ದರ ಹೀಗಿದೆ : ಬೆಂಗಳೂರಿನಲ್ಲಿ 22 ಕ್ಯಾರಟ್ 10 ಗ್ರಾಂ ಚಿನ್ನಕ್ಕೆ 44,600 ರೂಪಾಯಿ ಹಾಗೂ 100 ಗ್ರಾಂ ಚಿನ್ನಕ್ಕೆ 4,46,000 ರೂಪಾಯಿ ನಿಗದಿಯಾಗಿದೆ. ದೈನಂದಿನ ದರದಲ್ಲಿ 3,500 ರೂಪಾಯಿ ಇಳಿಕೆಯಾಗಿದೆ. ಇನ್ನು 24 ಕ್ಯಾರಟ್ 10 ಗ್ರಾಂ ಚಿನ್ನಕ್ಕೆ 48,650 ರೂಪಾಯಿ ಹಾಗೂ 100 ಗ್ರಾಂ ಚಿನ್ನಕ್ಕೆ 4,86,500 ರೂಪಾಯಿ ನಿಗದಿಯಾಗಿದೆ.

ಸಚಿವರ ಪುತ್ರನಿಗೆ ಬ್ಲಾಕ್‌ಮೇಲ್‌ : ಸ್ಪಷ್ಟನೆ ಕೊಟ್ಟ ಯಶವಂತರಾಯಗೌಡ ಪಾಟೀಲ್‌

ಪತ್ರಿಕಾಗೋಷ್ಠಿ ವೇಳೇ ನನ್ನ ಮಗಳಿನ್ನೂ ಚಿಕ್ಕವಳು. ಅವಳಿಗೆ ಏನೂ ತಿಳಿಯುವುದಿಲ್ಲ. ಸುಮ್ಮನೇ ಅವಳ ಹೆಸರನ್ನು ಎಳೆದು ತರಲಾಗುತ್ತಿದೆ ಎಂದರು. ಸಚಿವ ಎಸ್.ಟಿ.ಸೋಮಶೇಖರ್ ಹಾಗೂ ನಾನೂ ಉತ್ತಮ ಸ್ನೇಹಿತರು. ನಾವಿಬ್ಬರೂ ಮುಖ್ಯಮಂತ್ರಿಯನ್ನು ಭೇಟಿ ಮಾಡಿ ಸೂಕ್ತ ತನಿಖೆ ನಡೆಸುವಂತೆ ಮನವಿ ಮಾಡಿದ್ದೇವೆ. ಏನೋ ತಪ್ಪಾಗಿ ಹೀಗೆಲ್ಲಾ ಆಗಿದೆ

ದಿವ್ಯಾಂಗ ಮತ್ತು ಗರ್ಭಿಣಿಯರಿಗೆ ಮನೆಯಿಂದಲೇ ಕೆಲಸ ಮಾಡುವ ಅವಕಾಶ

ಅಧೀನ ಕಾರ್ಯದರ್ಶಿ ಮಟ್ಟಕ್ಕಿಂತ ಕೆಳಗಿರುವ ಸರ್ಕಾರಿ ನೌಕರರ ದೈಹಿಕ ಹಾಜರಾತಿಯನ್ನು ನೈಜ ಸಾಮರ್ಥ್ಯದ ಶೇಕಡಾ 50 ಕ್ಕೆ ನಿರ್ಬಂಧಿಸಲಾಗಿದೆ ಮತ್ತು ಉಳಿದ ಶೇಕಡಾ 50 ರಷ್ಟು ಮನೆಯಿಂದಲೇ ಕೆಲಸ ಮಾಡುತ್ತಾರೆ ಎಂದು ಸಚಿವರು ಹೇಳಿದರು. ಆದರೆ, ಕಚೇರಿಗೆ ಹಾಜರಾಗದ ಮತ್ತು ಮನೆಯಿಂದಲೇ ಕೆಲಸ ಮಾಡುವ ಅಧಿಕಾರಿಗಳು ಮತ್ತು ಸಿಬ್ಬಂದಿ ಯಾವಾಗಲೂ ದೂರವಾಣಿ ಮತ್ತು ಇತರ ಎಲೆಕ್ಟ್ರಾನಿಕ್ ಸಂವಹನ ವಿಧಾನಗಳಲ್ಲಿ ಲಭ್ಯವಿರುತ್ತಾರೆ ಎಂದು ಅವರು ಹೇಳಿದರು

ಡಿ.ಕೆ. ಶಿವಕುಮಾರ್‌ ಸೇರಿ 30 ಮಂದಿಯ ಮೇಲೆ FIR

ರಾಜ್ಯದಲ್ಲಿ ಒಮೈಕ್ರಾನ್ ಹಾಗೂ ಕೋವಿಡ್ ಪಾಸಿಟಿವ್ ಪ್ರಕರಣಗಳ ಹೆಚ್ಚಳದ ಹಿನ್ನೆಲೆಯಲ್ಲಿ ಸರಕಾರವು ಶುಕ್ರವಾರ ರಾತ್ರಿಯಿಂದ ಸೋಮವಾರ ಮುಂಜಾನೆಯವರೆಗೆ ವಾರಾಂತ್ಯ ಕರ್ಫ್ಯೂ ಜಾರಿಗೊಳಿಸಿತ್ತು. ವಾರಾಂತ್ಯ ಕರ್ಫ್ಯೂ ನಡುವೆಯೇ ಮೇಕೆದಾಟು ಪಾದಯಾತ್ರೆಗೆ ರಾಮನಗರ ಜಿಲ್ಲೆಯ ಕನಕಪುರ ತಾಲೂಕಿನ ಸಾತನೂರು ಸಮೀಪದ ಸಂಗಮದಲ್ಲಿ ಚಾಲನೆ ನೀಡಲಾಗಿತ್ತು.

ನಕಲಿ ಸಂಪುಟ ಸಭೆಯ ವಿಡಿಯೋ ಹರಿಬಿಟ್ಟ ಪಾಕಿಸ್ತಾನ

ಪಾಕಿಸ್ತಾನ ಭಾರತ ವಿರೋಧಿ ಶಕ್ತಿಗಳು ಭಾರತದಲ್ಲಿ ದೊಡ್ಡ ಮಟ್ಟದಲ್ಲಿ ಅರಾಜಕತೆಯನ್ನು ಸೃಷ್ಟಿ ಮಾಡಲು ಇನ್ನಿಲ್ಲದಂತೆ ಹವಣಿಸುತ್ತಿವೆ. ಸಿಖ್ಖರನ್ನು ಭಾರತದ ವಿರುದ್ಧ ಎತ್ತಿಕಟ್ಟಲು ಇಲ್ಲಸಲ್ಲದ ಕುತಂತ್ರಗಳನ್ನು ಅವುಗಳು ಮಾಡುತ್ತಿವೆ. ಪ್ರಧಾನಿ ನರೇಂದ್ರ ಮೋದಿಯವರು ನಡೆಸಿದ ಸಂಪುಟ ಸಭೆಯ ತಿರುಚಿದ ವಿಡಿಯೋವನ್ನು ಹರಿಬಿಡುವ ಮೂಲಕ ಅರಾಜಕತೆ ಸೃಷ್ಟಿಸಲು ಪ್ರಯತ್ನ ನಡೆಸಲಾಗಿದೆ.

ಡಿ.ಕೆ. ಶಿವಕುಮಾರ್ ಹೇಳಿಕೆಗೆ ಆಕ್ರೋಶ ವ್ಯಕ್ತಪಡಿಸಿದ ಬಿಜೆಪಿ

ಮೇಕೆದಾಟು ಯೋಜನೆಯ ವಿಷಯದಲ್ಲಿ ತಮಿಳುನಾಡಿನಲ್ಲಿ ಕಾಂಗ್ರೆಸ್ ಪಕ್ಷದ ಡಿಎಂಕೆ ಜೊತೆಗೆ ಒಪ್ಪಂದವನ್ನು ಮಾಡಿಕೊಂಡಿದೆ. ಆದರೆ ಮೇಕೆದಾಟು ಯೋಜನೆಯನ್ನು ಜಾರಿಗೆ ತರಲು ಆಗ್ರಹಿಸಿ ಕಾಂಗ್ರೆಸ್ ಪ್ರತಿಭಟನೆಯನ್ನು ನಡೆಸಬೇಕಿರುವುದು ಯಾರ ವಿರುದ್ಧ? ಎಂದು ಪ್ರಶ್ನಿಸಿದೆ. ಮೇಕೆದಾಟು ಯೋಜನೆ ಈಗ ಸ್ಟ್ಯಾಲಿನ್ ಸರ್ಕಾರದ ಅಂಗಳದಲ್ಲಿದೆ. ನೀವು ಸುಳ್ಳನ್ನು ಹೇಳಿಕೊಂಡು ಪಾದಯಾತ್ರೆ ಎಂಬ ಜಾತ್ರೆಯನ್ನು ಮಾಡುವ ಬದಲು ಅವರೊಂದಿಗೆ ಮಾತುಕತೆ ನಡೆಸಿ ಎಂದು ಸಲಹೆಯನ್ನು ನೀಡಿದೆ.

ಕನ್ನಡದ ಹಿರಿಯ ಸಾಹಿತಿ ಚಂದ್ರಶೇಖರ ಪಾಟೀಲ ನಿಧನ

ಚಂಪಾ ಅವರು 2004-08ರವರೆಗೆ ಕನ್ನಡ ಸಾಹಿತ್ಯ ಪರಿಷತ್ತಿನ ಅಧ್ಯಕ್ಷರಾಗಿ ಸೇವೆ ಸಲ್ಲಿಸಿದ್ದಾರೆ. ಅಲ್ಲದೆ, ಕನ್ನಡ ಅಭಿವೃದ್ಧಿ ಪ್ರಾಧಿಕಾರದ ಅಧ್ಯಕ್ಷರಾಗಿಯೂ ಕಾರ್ಯ ನಿರ್ವಹಿಸಿದ್ದಾರೆ. ಕ್ರಾಂತಿಕಾರ ಮನೋಭಾವ ಹೊಂದಿದ್ದ ಚಂಪಾ ಅವರನ್ನು ಕನ್ನಡ ಸಾಹಿತ್ಯ ಪರಿಷತ್ತನ್ನು ರಾಜ್ಯವ್ಯಾಪಿ ವಿಸ್ತರಿಸುವಲ್ಲಿ ಮತ್ತು ಕನ್ನಡವನ್ನು ಜನರಿಗೆ ತಲುಪಿಸುವಲ್ಲಿ ಸಾಕಷ್ಟು ಕೊಡುಗೆ ನೀಡಿದ್ದಾರೆ.