February 25, 2022

High Court

ಹಿಜಾಬ್‌ ಮೂಲಭೂತ ಹಕ್ಕಾ ? ಸಿಜೆ ಪ್ರಶ್ನೆ

ಹೈಕೋರ್ಟ್​ ಹಿಜಾಬ್ ವಿಚಾರಣೆಯನ್ನು ಇಂದು 2.30ಕ್ಕೆ ನಡೆಯಲಿದ್ದು, ಇಂದು ವಾದಮಂಡನೆ ಮುಕ್ತಾಯಗೊಳಿಸಬೇಕು ಮತ್ತು ಎರಡು ಮೂರು ದಿನಗಳಲ್ಲಿ ಲಿಖಿತ ವಾದಮಂಡನೆ ಸಲ್ಲಿಸಿವಂತೆ ವಾದ ಪ್ರತಿವಾದಿಗಳಿಗೆ ಹೈಕೋರ್ಟ್ ಸೂಚನೆ ನೀಡಿದೆ.ಅರ್ಜಿದಾರರ ಪರ ದೇವದತ್ ಕಾಮತ್ ವಾದ ಮಂಡನೆ ಮಾಡಿದ್ದು, ಹಿಜಾಬ್ ಧರಿಸಬೇಕೆಂಬುದು ವಿದ್ಯಾರ್ಥಿನಿಯರ ನಂಬಿಕೆಯಾಗಿದೆ.

ಪುಟಿನ್  ಜೊತೆ ಮೋದಿ ಮಾತುಕತೆ

ಪ್ರಧಾನಿ ಮೋದಿ ಅವರು ಉಕ್ರೇನ್‌ನಲ್ಲಿರುವ ಭಾರತೀಯ ನಾಗರಿಕರ, ವಿಶೇಷವಾಗಿ ವಿದ್ಯಾರ್ಥಿಗಳ ಸುರಕ್ಷತೆಯ ಬಗ್ಗೆ ಭಾರತ ಹೊಂದಿರುವ ಕಳವಳಗಳ ಬಗ್ಗೆ ರಷ್ಯಾದ ಅಧ್ಯಕ್ಷರಿಗೆ ತಿಳಿಸಿದ್ದಾರೆ. ಭಾರತೀಯರ ಸುರಕ್ಷತೆ ಮತ್ತು ಭಾರತಕ್ಕೆ ಮರಳಲು ಭಾರತವು ಹೆಚ್ಚಿನ ಆದ್ಯತೆಯನ್ನು ನೀಡುತ್ತದೆ ಎಂದು ಹೇಳಿದ್ದಾರೆ.

ಕಂಠೀರವ ಕ್ರೀಡಾಂಗಣದಲ್ಲಿ ಅತ್ಯಾಧುನಿಕ ಸಿಂಥೆಟಿಕ್ ಟ್ರ್ಯಾಕ್ ನಿರ್ಮಾಣ!

ನಗರದ ಕಂಠೀರವ ಕ್ರೀಡಾಂಗಣದಲ್ಲಿ ಅತ್ಯಾಧುನಿಕ ಸಿಂಥೆಟಿಕ್ ಟ್ರ್ಯಾಕ್ ನಿರ್ಮಾಣ ಮಾಡಲಾಗಿದ್ದು, ಶೀಘ್ರದಲ್ಲೇ ಕ್ರೀಡಾಪಟುಗಳ ಬಳಕೆಗೆ ಅನುವು ಮಾಡಿಕೊಡಲಾಗುವುದು ಎಂದು ರೇಷ್ಮೆ, ಯುವ ಸಬಲೀಕರಣ ಮತ್ತು ಕ್ರೀಡಾ ಇಲಾಖೆ ಸಚಿವ ಡಾ.ನಾರಾಯಣಗೌಡ ಅವರು ತಿಳಿಸಿದರು.