Mysore: 2024ರಲ್ಲಿ ನಾಡಹಬ್ಬ ದಸರಾವನ್ನು (2023 dasara Inaugural by hamsalekha) ಯಾರು ಉದ್ಘಾಟನೆ ಮಾಡಲಿದ್ದಾರೆ ಎಂಬ ಚರ್ಚೆ ಕಳೆದ ಅನೇಕ ದಿನಗಳಿಂದ ನಡೆಯುತ್ತಿತ್ತು.
ಇದೀಗ ಮುಖ್ಯಮಂತ್ರಿ ಸಿದ್ದರಾಮಯ್ಯ (Siddramaiah) ಅವರು, ಕನ್ನಡ ಚಿತ್ರರಂಗದ ಖ್ಯಾತ ಸಂಗೀತ ನಿರ್ದೇಶಕ ಹಂಸಲೇಖ (Hamsalekha) ಅವರಿಂದ ಈ ಬಾರಿಯ ದಸರಾವನ್ನು ಉದ್ಘಾಟನೆ
ಮಾಡಲಾಗುವುದು (2023 dasara Inaugural by hamsalekha) ಎಂದು ಘೋಷಿಸಿದ್ದಾರೆ.

ಮೈಸೂರು (Mysore) ಜಿಲ್ಲೆಯ ಪ್ರವಾಸದಲ್ಲಿರುವ ಅವರು ಇಂದು ಬೆಳಿಗ್ಗೆ ಉಪಮುಖ್ಯಮಂತ್ರಿ ಡಿ.ಕೆ ಶಿವಕುಮಾರ್ (D.K Shivakumar) ಹಾಗೂ ಮಹಿಳಾ ಮತ್ತು ಮಕ್ಕಳ ಕಲ್ಯಾಣ ಸಚಿವೆ
ಲಕ್ಷ್ಮೀ ಹೆಬ್ಬಾಳ್ಕರ್ (Lakshmi Hebbalkar) ಜೊತೆ ಚಾಮುಂಡಿ ಬೆಟ್ಟಕ್ಕೆ ಆಗಮಿಸಿ, ದೇವಿಯ ದರ್ಶನ ಪಡೆದು, ಪೂಜೆ ಸಲ್ಲಿಸಿದರು. ಬಳಿಕ ಮಾದ್ಯಮಗಳೊಂದಿಗೆ ಮಾತನಾಡಿದ ಅವರು,
ಈ ಬಾರಿಯ ದಸರಾ ಉದ್ಘಾಟನೆಯನ್ನು ಹಂಸಲೇಖ ಅವರಿಂದಲೇ ನೆರವೇರಿಸಲಾಗುವುದು ಎಂದು ತಿಳಿಸಿದರು. ಇದೇ ವೇಳೆ ಉಪಮುಖ್ಯಮಂತ್ರಿ ಡಿ.ಕೆ ಶಿವಕುಮಾರ್ ಜೊತೆಗಿನ ಸಂಬಂಧದ
ಬಗ್ಗೆ ಮಾತನಾಡಿದ ಅವರು, ಬಿಜೆಪಿ (BJP) ಮತ್ತು ಜೆಡಿಎಸ್ (JDS) ಪಕ್ಷಗಳು ನಮ್ಮನ್ನ ಎಷ್ಟು ದೂರ ಮಾಡಲು ಯತ್ನ ಮಾಡಿತ್ತಿವೆಯೋ ನಾವಿಬ್ಬರು ಅಷ್ಟು ಹತ್ತಿರವಾಗುತ್ತಿದ್ದೇವೆ.
ನಾವು ಮಾತ್ರ ಸದಾ ಒಟ್ಟಾಗಿರುವುದನ್ನ ನೀವು ನೋಡುತ್ತಲೇ ಇರುತ್ತೀರಿ ಎಂದು ಲೇವಡಿ ಮಾಡಿದರು. ಇನ್ನು ನಾಡಹಬ್ಬ ಮೈಸೂರು ದಸರಾವನ್ನು ದಿನಾಂಕ 15.10.2023 (ಅಕ್ಟೋಬರ್ 15)
ಗ್ಯಾಸ್ಟ್ರಿಕ್ ಸಮಸ್ಯೆ ನಿಮ್ಮನ್ನು ಪರಿಪರಿಯಾಗಿ ಕಾಡುತ್ತಿದೆಯಾ? ಹಾಗಾದ್ರೆ ಇಲ್ಲಿವೆ ಸರಳ ಮನೆಮದ್ದುಗಳು..!
ಬೆಳಿಗ್ಗೆ 10.15 ರಿಂದ 10.30 ಕ್ಕೆ ಸಲ್ಲುವ ಮಹೂರ್ತದಲ್ಲಿ ಉದ್ಘಾಟನೆ ನೆರವೇರಲಿದ್ದು, ಪಂಜಿನ ಕವಾಯತು ವಿಜಯದಶಮಿ (Vijayadashami ) ದಿನದಂದು ನಡೆಯಲಿದೆ. ಇನ್ನು 2022ರಲ್ಲಿ ದಸರಾವನ್ನು
ರಾಷ್ಟ್ರಪತಿ ದ್ರೌಪದಿ ಮುರ್ಮು (Droupadi Murmu) ಅವರು ಉದ್ಘಾಟಿಸಿದ್ದರು. 2021ರಲ್ಲಿ ಖ್ಯಾತ ಸಾಹಿತಿ ಎಸ್.ಎಲ್.ಬೈರಪ್ಪನವರು (L L Bairappa) ಉದ್ಘಾಟಿಸಿದ್ದರು.

ವಿಶಿಷ್ಟ ದೀಪಾಲಂಕಾರ : ದಸರಾದಲ್ಲಿ ಈ ಬಾರಿ ಜಂಬೂ ಸವಾರಿ, ದೀಪಾಲಂಕಾರ, ಪಂಜಿನ ಕವಾಯತು ಬಹಳ ಮುಖ್ಯವಾಗಿ ಆಚರಿಸಲ್ಪಡುತ್ತದೆ. ಈ ಬಾರಿ ದೀಪಾಲಂಕಾರ ದಸರಾ ಉದ್ಘಾಟನೆಯಾದ
ದಿನದಿಂದ ದಸರಾ ಮುಗಿಯುವವರೆಗೂ ಹಾಗೂ ನಂತರ ಒಂದು ವಾರದವವರೆಗೆ ದೀಪಾಲಂಕಾರ ಇರಬೇಕು ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ (Siddaramaiah) ಅವರು ಸೂಚನೆ ನೀಡಿದ್ದಾರೆ.
5 ಗ್ಯಾರಂಟಿ ಬಿಂಬಿಸುವ ಸ್ತಬ್ಧಚಿತ್ರ: ಕಾಂಗ್ರೆಸ್ ಸರ್ಕಾರದ ಐದು ಗ್ಯಾರಂಟಿಗಳನ್ನು ಬಿಂಬಿಸುವ ಸ್ತಬ್ದಚಿತ್ರಗಳು ಈ ಬಾರಿಯ ದಸರಾದಲ್ಲಿ ಕಾಣಿಸಿಕೊಳ್ಳಲಿವೆ. ರಾಜ್ಯದ ಪರಂಪರೆ, ಜಿಲ್ಲಾ ವೈಶಿಷ್ಟ್ಯತೆ ಗಳ
ಜೊತೆಗೆ 5 ಗ್ಯಾರಂಟಿಗಳನ್ನು ಬಿಂಬಿಸಿ ಜನರಿಗೆ ಸಂದೇಶವನ್ನು ನೀಡುವಂತಿರಬೇಕು ಎನ್ನಲಾಗಿದೆ.
ಮಹೇಶ್