24 ರಿಂದ 31 ರವರೆಗೆ ಅಂತರಾಷ್ಟೀಯ ಚಲನಚಿತ್ರೋತ್ಸವ….!

ಮುಖ್ಯ ಮಂತ್ರಿ ಯಡಿಯೂರಪ್ಪ ಅವರ ನೇತೃತ್ವದಲ್ಲಿ ಚಲನ ಚಿತ್ರೋತ್ಸವ ಸಂಘಟನಾ ಸಮಿತಿ ಸಭೆ ನಡೆಸಿ, ೨೪ ರಿಂದ ೩೧ರವರೆಗೆ ಚಲನ ಚಿತ್ರೋತ್ಸವಕ್ಕೆ ದಿನಾಂಕ ಘೋಷಣೆ ಮಾಡಿದ್ದಾರೆ.

ವಾರ್ತಾ ಮತ್ತ ಸಾರ್ವಜನಿಕ ಸಂಪರ್ಕ ಇಲಾಖೆ ಹಾಗೂ ಕರ್ನಾಟಕ ಚಲನಚಿತ್ರ ಅಕಾಡೆಮಿ ಇತ್ತಿಚಿಗೆ ನಡೆಸಿದ 13ನೇ ಬೆಂಗಳೂರು ಅಂತಾರಾಷ್ಟ್ರೀಯ ಚಿತ್ರೋತ್ಸವದ ದಿನಾಂಕವನ್ನು ಪ್ರಕಟನೆ ಮಾಡಿದ್ದಾರೆ. ಈ ಸಭೆಯಲ್ಲಿ ಮುಖ್ಯ ಮಂತ್ರಿ ಬಿ.ಎಸ್. ಯಡಿಯೂರಪ್ಪ ಸಭೆಯಲ್ಲಿ ಭಾಗವಹಿಸಿದ್ದರು.

ಬೆಂಗಳೂರಿನ ಓರಯನ್ ಮಾಲ್‌ನಲ್ಲಿ11 ಪರದೆಗಳಲ್ಲಿ ೫೦ಕ್ಕೂ ಹೆಚ್ಚು ೨೦೦ ಅತ್ಯುತ್ತಮ ಚಿತ್ರಗಳನ್ನು ಪ್ರದರ್ಶಿಸಲಾಗುವುದು. ಏಳು ದಿನಗಳ ಕಾಲ ನಡೆಯುವ ಚಿತ್ರೋತ್ಸವದಲ್ಲಿ ಮೂರು ಭಾಗವಾಗಿರುತ್ತದೆ. ಏಷಿಯನ್ ಸಿನಿಮಾ, ಭಾರತೀಯ ಸಿನಿಮಾ ಹಾಗೂ ಕನ್ನಡ ಸಿನಿಮಾ ವಿಭಾಗ.”ಭಾರತೀಯ ಪ್ರದರ್ಶನ ಕಲೆಗಳ ಮಹತ್ವ” ವಿಷಯದ ಮೇಲೆ ಈ ವರ್ಷ ಚಿತ್ರೋತ್ಸವ ಏರ್ಪಡಿಸಲಾಗಿದೆ.

Exit mobile version