New Delhi: ಕಾವೇರಿ ನೀರು ನಿರ್ವಹಣಾ ಪ್ರಾಧಿಕಾರ ಸಭೆಯಲ್ಲಿ ಮೇಕೆದಾಟು (24 TMC Kaveri water to BLR) ವಿಚಾರವನ್ನು ಪ್ರಸ್ತಾಪಿಸಲಾಗಿದ್ದು, ಸುಪ್ರಿಂಕೋರ್ಟ್ ಆದೇಶದಂತೆ
ಬೆಂಗಳೂರಿಗೆ (Bengaluru) 24 ಟಿಎಂಸಿ ಕಾವೇರಿ (Kaveri) ನೀರು ಮೀಸಲು ಇಡಬೇಕು. ನೀರು ಮೀಸಲಿಡುವ ಬಗ್ಗೆ ಸರ್ಕಾರದಿಂದ ಆದೇಶ ಹೊರಡಿಸಲಾಗಿದೆ ಎಂದು ಉಪಮುಖ್ಯಮಂತ್ರಿ
ಡಿ.ಕೆ.ಶಿವಕುಮಾರ್ (D K Shivakumar) ಹೇಳಿದರು.

ಪ್ರತಿವರ್ಷ 24 ಟಿಎಂಸಿ (TMC) ನೀರು ಮೀಸಲಿಟ್ಟು ಆದೇಶ ಹೊರಡಿಸಿದ್ದೇವೆ. ಸುಪ್ರೀಂ ಕೋರ್ಟ್ (Supreme Court) ಅನುಮತಿ ಪಡೆದು 24 ಟಿಎಂಸಿ ನೀರು ಮೀಸಲಿಟ್ಟಿದ್ದೇವೆ. ಮುಂದಿನವಾರ
ಮೇಕೆದಾಟು ಯೋಜನೆ ವಿಚಾರ ಚರ್ಚೆಗೆ ಬರಲಿದೆ. ಆಪರೇಷನ್ ಕಮಲದ ಬಗ್ಗೆ ಮಾತನಾಡಲ್ಲ. ಬಿಜೆಪಿಯವರು (BJP) ನಮ್ಮ ಶಾಸಕರನ್ನೂ ಕರೆದುಕೊಳ್ಳಲು ಆಗಲ್ಲ. ಬಿಜೆಪಿಯಲ್ಲಿ ನಾಯಕತ್ವದ
ಬಗ್ಗೆಯೇ ತೀರ್ಮಾನ ಮಾಡಲು ಆಗಿಲ್ಲ. ಬಿಜೆಪಿಯವರು ಗೊಂದಲ ಸೃಷ್ಟಿಸಲು ಪ್ರಯತ್ನ(24 TMC Kaveri water to BLR) ಮಾಡುತ್ತಿದ್ದಾರೆ.
ಬಿಜೆಪಿಯಲ್ಲೇ ಸಾಕಷ್ಟು ಸಮಸ್ಯೆ ಇದ್ದು, ಮಾರ್ಕೆಟ್ನಲ್ಲಿ ಇರುವುದಕ್ಕೆ ಇಂತಹ ಪ್ರಯತ್ನ ಮಾಡುತ್ತಿದ್ದಾರೆ. ಮಹಾರಾಷ್ಟ್ರದಲ್ಲಿ (Maharashtra) ಸಭೆ ಆಗಿರುವ ಬಗ್ಗೆ ನಾನು ಮಾತನಾಡಲ್ಲ.
ಎಲ್ಲಾ ಕ್ಷಣಗಳು ಗೊತ್ತಿದೆ, ನಿರುದ್ಯೋಗಿಗಳು ಚಪಲಕ್ಕೆ ಮಾಡುತ್ತಿದ್ದಾರೆ ಎಂದು ಡಿಸಿಎಂ ಡಿಕೆ ಶಿವಕುಮಾರ್ ವಾಗ್ದಾಳಿ ಮಾಡಿದರು.

ನವದೆಹಲಿಯಲ್ಲಿ (New Delhi) ನಡೆಸಿದ ಸುದ್ದಿಗೋಷ್ಠಿಯಲ್ಲಿ ಆಪರೇಷನ್ ಕಮಲ ವಿಚಾರದ ಕುರಿತಾದ ಮಾಧ್ಯಮ ಪ್ರತಿನಿಧಿಗಳ ಪ್ರಶ್ನೆಗೆ ಉತ್ತರಿಸಿದ ಅವರು ಆಪರೇಷನ್ ಕಮಲದ ಬಗ್ಗೆ
ಮಾತನಾಡಲ್ಲ ಎಂದರು. ಸಂಪುಟ ಪುನಾರಚನೆ ವಿಚಾರವಾಗಿ ಮಾತನಾಡಿದ ಅವರು ಅದೇಲ್ಲ ಸುಳ್ಳು ಯಾರನ್ನು ಬಿಡುವ ಪ್ರಶ್ನೆ ಇಲ್ಲ. ಸದ್ಯ ಆ ಥರದ ಯಾವ ಆಲೋಚನೆಗಳಿಲ್ಲಿ ಎಂದು ಹೇಳಿದರು.
ಬಿಜೆಪಿ ಹಾಗೂ ಜೆಡಿಎಸ್ (JDS) ನಾಯಕರು ನಮ್ಮ ಸಂಪರ್ಕದಲ್ಲಿದ್ದಾರೆ. ನವೆಂಬರ್ (November) 15ರಂದು ಮತ್ತಷ್ಟು ನಾಯಕರು ನಮ್ಮ ಪಕ್ಷಕ್ಕೆ ಸೇರುತ್ತಾರೆ ಎಂದು ಅಚ್ಚರಿ ಹೇಳಿಕೆ ನೀಡಿದರು.
ರಾಜ್ಯ ಸರ್ಕಾರದ ಕುರಿತು ಪ್ರಧಾನಿ ನರೇಂದ್ರ ಮೋದಿ (Narendra Modi) ಟೀಕೆ ವಿಚಾರವಾಗಿ ಮಾತನಾಡಿದ ಅವರು ಪ್ರಧಾನಿಗಳು ನಮ್ಮನ್ನು ನೆನಪಿಸಿಕೊಳ್ಳುತ್ತಾರೆ ಅದೇ ಸಂತೋಷ. ನಮ್ಮ
ಗ್ಯಾರಂಟಿ (Guarantee), ನಮ್ಮ ಒಗ್ಗಟ್ಟು, ಜನರ ತೀರ್ಮಾನ ಅವರ ನಿದ್ದೆ ಕೆಡಿಸಿದೆ. ಅದಕ್ಕೆ ನೆನಪಿಸಿಕೊಳ್ಳುತ್ತಾರೆ ಎಂದು ಕಾಲೆಳೆದರು.
ಸಚಿವ ಸತೀಶ್ ಜಾರಕಿಹೊಳಿ (Satish Jarkiholi) ಭೇಟಿ ವಿಚಾರವಾಗಿ ಮಾತನಾಡಿದ ಅವರು ಪಕ್ಷದ ಅಧ್ಯಕ್ಷನಾಗಿ ನಾನು ಸತೀಶ್ ಜೊತೆಗೆ ಮಾತನಾಡಿದ್ದೇನೆ. ಸತೀಶ್ ಮಾತ್ರ ಅಲ್ಲ ಬಹಳಷ್ಟು
ನಾಯಕರ ಮನೆಗೆ ಹೋಗಿದ್ದೇನೆ. ಜಾರಕಿಹೊಳಿ ಭೇಟಿಯಲ್ಲಿ ಯಾವ ವಿಶೇಷ ಇಲ್ಲ. ನಮ್ಮ ನಿವಾಸದಲ್ಲಿ ಸಭೆ ನಡೆಸಲು ಸಾಧ್ಯವಾಗುವುದಿಲ್ಲ. ಹೀಗಾಗಿ ಸತೀಶ್ ಜಾರಕಿಹೊಳಿ ಮನೆಯಲ್ಲಿ ಸಭೆ
ಮಾಡಿದ್ದೇನೆ ಎಂದು ಸ್ಪಷ್ಟಪಡಿಸಿದರು.
ಇದನ್ನು ಓದಿ: ಹಾಸನದ ರೆಸಾರ್ಟ್ನಲ್ಲಿ ಶಾಸಕರ ರಕ್ಷಣೆಗೆ ಕಾರ್ಯತಂತ್ರ: ದಳಪತಿಗಳಿಗೆ ಆಪರೇಷನ್ ಹಸ್ತದ ಭಯ
- ಭವ್ಯಶ್ರೀ ಆರ್.ಜೆ