ದ್ವಿತೀಯ ಟೆಸ್ಟ್: ಆಂಗ್ಲರ ಆರ್ಭಟ ಅಡಗಿಸಿದ ಭಾರತ: ಕೊಹ್ಲಿ ಪಡೆಗೆ 317 ರನ್‌ಗಳ ಭರ್ಜರಿ ಜಯ

ಚೆನ್ನೈ, ಫೆ. 16: ಪ್ರವಾಸಿ ಇಂಗ್ಲೆಂಡ್ ವಿರುದ್ಧದ ಮೊದಲ ಟೆಸ್ಟ್ ಸೋಲಿನ ಬಳಿಕ ಬಲಿಷ್ಠ ಕಮ್ ಬ್ಯಾಕ್ ಮಾಡಿದ ಟೀಂ ಇಂಡಿಯಾ, ದ್ವಿತೀಯ ಟೆಸ್ಟ್‌ನಲ್ಲಿ ಭರ್ಜರಿ ಗೆಲುವು ಸಾಧಿಸುವ ಮೂಲಕ ಸರಣಿಯಲ್ಲಿ ಸಮಬಲ ಸಾಧಿಸಿದೆ.

ಇಲ್ಲಿನ ಎಂ. ಎ. ಚಿದಂಬರಂ ಮೈದಾನದಲ್ಲಿ ನಡೆದ ದ್ವಿತೀಯ ಟೆಸ್ಟ್‌ನಲ್ಲಿ ಟೀ ಇಂಡಿಯಾ ಆಟಗಾರರು ಅದ್ಭುತ ಪ್ರದರ್ಶನ ನೀಡಿದರು. ಭಾರತೀಯ ಆಟಗಾರರ ಅಬ್ಬರಕ್ಕೆ ಮಣಿದ ಜೋ ರೂಟ್ ಪಡೆ, 317 ರನ್‌ಗಳ ಹೀನಾಯ ಸೋಲು ಕಂಡಿತು. 2ನೇ ಇನ್ನಿಂಗ್ಸ್ ನಲ್ಲಿ ಟೀಂ ಇಂಡಿಯಾ ನೀಡಿದ್ದ 482 ರನ್​ಗಳ ಗುರಿ ಬೆನ್ನಟ್ಟಿದ ಇಂಗ್ಲೇಂಡ್  164 ರನ್​ಗಳಿಗೆ ಆಲ್ ಔಟ್ ಆಗಿ ಸೋಲನುಭವಿಸಿತು. ಮೊದಲ ಇನ್ನಿಂಗ್ಸ್ ಆರಂಭಿಸಿದ ಟೀಂ​ ಇಂಡಿಯಾ 329 ರನ್​ ಗಳಿಗೆ ಆಲ್ ಔಟ್ ಆಯಿತು. 

ಮೊದಲ ಇನ್ನಿಂಗ್ಸ್​ನಲ್ಲಿ ಟೀಂ ಇಂಡಿಯಾ ಆರಂಭಿಕ ಆಟಗಾರ ರೋಹಿತ್​ ಶರ್ಮಾ (161 ರನ್​) ರಹಾನೆ (67 ರನ್​) ಹಾಗೂ ರಿಶಭ್​ ಪಂತ್​ (58 ರನ್​) ಅಬ್ಬರದ ಬ್ಯಾಟಿಂಗ್​ ನೆರವಿನಿಂದ 329 ರನ್​ಗಳಿಗೆ ಮೊದಲ ಇನ್ನಿಂಗ್ಸ್ ಮುಗಿಸಿತ್ತು. ನಂತರ ಬ್ಯಾಟಿಂಗ್ ಆರಂಭಿಸಿದ ಇಂಗ್ಲೇಂಡ್  134 ರನ್ ಗೆ ಸರ್ವಪತನ ಕಂಡಿತು. ಮೊದಲ ಇನ್ನಿಂಗ್ಸ್ ನಲ್ಲಿ ಭಾರತದ ಪರ ಆರ್.ಅಶ್ವಿನ್ 5 ವಿಕೆಟ್ ಕಬಳಿಸಿ ಮಿಂಚಿದರು.

ನಂತರ 2ನೇ ಇನ್ನಿಂಗ್ಸ್ ಆರಂಭಿಸಿದ ಟೀಂ ಇಂಡಿಯಾ,  ಇಂಗ್ಲೆಂಡ್ ​ಗೆ  482 ರನ್​ಗಳ ಗುರಿ ನೀಡಿತು. ಈ ಗುರಿಯನ್ನು ಬೆನ್ನಟ್ಟಿದ ಇಂಗ್ಲೆಂಡ್ ತಂಡ 164 ರನ್​ಗಳಿಗೆ ತನ್ನೆಲ್ಲಾ ವಿಕೆಟ್​ ಕಳೆದುಕೊಂಡು ಸರ್ವಪತನಗೊಂಡಿತು. ಈ ಮೂಲಕ ಟೀಂ ಇಂಡಿಯಾ 317 ರನ್ ಗಳ ಜಯ ಸಾಧಿಸಿದೆ. ಈ ಗೆಲುವಿನ ಮೂಲಕ ಸರಣಿಯಲ್ಲಿ 1-1ರ ‌ಸಮಬಲ ಸಾಧಿಸುವಲ್ಲಿ ಟೀಂ ಇಂಡಿಯಾ ಯಶಸ್ವಿಯಾಯಿತು.

ಪಂದ್ಯದಲ್ಲಿ ಬ್ಯಾಟಿಂಗ್ ಹಾಗೂ ಬೌಲಿಂಗ್‌ನಲ್ಲಿ ಅದ್ಭುತ ಪ್ರದರ್ಶನ ನೀಡಿದ ರವಿಚಂದ್ರನ್ ಅಶ್ವಿನ್, ಪಂದ್ಯ ಪುರುಷೋತ್ತಮ ಪ್ರಶಸ್ತಿ ಪಡೆದರು. ಉಭಯ ತಂಡಗಳ‌ ನಡುವಿನ ನಾಲ್ಕು ಪಂದ್ಯಗಳ
ಸರಣಿಯ ಮೂರನೇ ಟೆಸ್ಟ್ ಪಂದ್ಯ ಫೆಬ್ರವರಿ 24ರಂದು ಅಹಮದಾಬಾದಿನ ಸರ್ದಾರ್ ಪಟೇಲ್ ಕ್ರೀಡಾಂಗಣದಲ್ಲಿ ನಡೆಯಲಿದೆ.

Exit mobile version