ಬಾಕಿ ಇರುವ ಶೇ.60 ರಷ್ಟು ಕನ್ನಡ ನಾಮಫಲಕ ಅಳವಡಿಕೆಗೆ 2 ವಾರ ಗಡುವು ವಿಸ್ತರಣೆ: ಡಿಸಿಎಂ ಡಿಕೆ ಶಿವಕುಮಾರ್

Bengaluru: ಕರ್ನಾಟಕ (2Week Deadline-Kannada Nameplate) ರಾಜ್ಯದಲ್ಲಿ ಕನ್ನಡದಲ್ಲಿಯೇ ಬೋರ್ಡ್ಗಳಿಲ್ಲ ಎಂದು ಈಗಾಗಲೇ ಹಲವಾರು ದೂರುಗಳು ಕೇಳಿ

ಬಂದಿತ್ತು. ಈ ಹಿನ್ನೆಲೆಯಲ್ಲಿ ರಾಜ್ಯದ ಎಲ್ಲಾ ಮಳಿಗೆಗಳಿಗೆ ಅಳವಡಿಸುವ ಬೋರ್ಡ್​ಗಳಲ್ಲಿ (sign board) ಶೇ.60 ರಷ್ಟು ಕನ್ನಡ ಇರಬೇಕು ಎಂಬ ನಿಯಮ ಜಾರಿಯಾಗಿದೆ.

ಅದರಂತೆ, ಬೋರ್ಡ್​ಗಳ ಬದಲಾವಣೆಗೆ ನೀಡಲಾಗಿದ್ದ ಗಡುವು ನಿನ್ನೆಗೆ ಮುಕ್ತಾಯಗೊಂಡಿದೆ. ಈ ನಡುವೆ ಒಂದಷ್ಟು ವ್ಯಾಪಾರಸ್ತರು ಹಾಗೂ ಕಂಪನಿಗಳು ನಿಯಮಾನುಸಾರ

ಬೋರ್ಡ್ ಅಳವಡಿಕೆಗೆ ಮತ್ತಷ್ಟು ಸಮಯಾವಕಾಶ ಕೇಳಿದ್ದರು. ಹೀಗಾಗಿ ಶೇ.60 ರಷ್ಟು ಕನ್ನಡದಲ್ಲಿ ನಾಮಫಲಕ ಅಳವಡಿಕೆಗೆ ಎರಡು ವಾರಗಳ ಕಾಲವಕಾಶ ನೀಡಲಾಗಿದೆ.

ಈ ಕುರಿತಂತೆ ಉಪ ಮುಖ್ಯಮಂತ್ರಿ ಡಿಕೆ ಶಿವಕುಮಾರ್ (D K Shivakumar) ಸಾಮಾಜಿಕ ಜಾಲತಾಣ ಎಕ್ಸ್ ನಲ್ಲಿ ಮಾಹಿತಿಯನ್ನು ಹಂಚಿಕೊಂಡಿದ್ದು, ಬೆಂಗಳೂರಿನ

ಎಲ್ಲಾ ಅಂಗಡಿ ಮುಂಗಟ್ಟುಗಳು, ವಾಣಿಜ್ಯ ಮಳಿಗೆಗಳು ಮೊದಲಾದಕಡೆ ಶೇ.60ರಷ್ಟು‌ ಕನ್ನಡ ನಾಮಫಲಕಗಳನ್ನು ಅಳವಡಿಸಲು ಹೆಚ್ಚಿನ ಸಮಯ ಬೇಕೆಂಬುದನ್ನು ಪರಿಗಣಿಸಿ,

ಈಗಾಗಲೇ ನೀಡಲಾಗಿದ್ದ ಗಡುವನ್ನು 2 ವಾರಗಳ‌ (2Week Deadline-Kannada Nameplate) ಕಾಲ ವಿಸ್ತರಿಸಲಾಗಿದೆ.

ಕನ್ನಡ ನಾಡಿನಲ್ಲಿ ಕನ್ನಡವೇ ಸಾರ್ವಭೌಮ, ಹಾಗಾಗಿ ನಮ್ಮ ಹೃದಯದ ಭಾಷೆಯನ್ನು ಎತ್ತಿ‌ಹಿಡಿಯುವುದು ಅತಿ ಮುಖ್ಯ. 2 ವಾರಗಳ‌ ನಂತರ ಎಲ್ಲರೂ ಕಾನೂನು ಪಾಲನೆ ಮಾಡುತ್ತಾರೆ‌

ಎಂದು ನಿರೀಕ್ಷಿಸಿದ್ದೇನೆ ಎಂದು ತಿಳಿಸಿದ್ದಾರೆ. ಕನ್ನಡ ನಾಮಫಲಕ (Kannada Name Board) ಹಾಕದಿದ್ದರೆ ಅಂಗಡಿಗಳನ್ನು ಬಂದ್ ಮಾಡುತ್ತೇವೆ. ಈಗಾಗಲೇ ಶೇಕಡಾ 90ರಷ್ಟು

ಕನ್ನಡ ನಾಮಫಲಕ ಹಾಕಲಾಗಿದೆ. ಇನ್ನು ಉಳಿದಿರುವುದು 3 ಸಾವಿರ ನಾಮಫಲಕ ಮಾತ್ರ​.

ಮತ್ತಷ್ಟು ಸಮಯ ನೀಡುವಂತೆ ಅಂತಾರಾಷ್ಟ್ರೀಯ ಕಂಪನಿಗಳು, SBI, ಕೆನರಾ ಬ್ಯಾಂಕ್ (Canara Bank) ಮನವಿ ನೀಡಿವೆ. ಹಾಗಾಗಿ 2 ವಾರಗಳ ಸಮಯ ನೀಡಲಾಗಿದೆ.

ಡೆಡ್​ಲೈನ್ (Deadline) ಮುಕ್ತಾಯದ ನಂತರ ನಾಮಫಲಕ ಪರಿಶೀಲನೆ ನಡೆಸುತ್ತೇವೆ ಎಂದು ಬಿಬಿಎಂಪಿ (BBMP) ಮುಖ್ಯ ಆಯುಕ್ತ ತುಷಾರ್ ಗಿರಿನಾಥ್​ ಹೇಳಿದ್ದಾರೆ.

ಇದನ್ನು ಓದಿ: ಬಾಕಿ ಇರುವ ಶೇ.60 ರಷ್ಟು ಕನ್ನಡ ನಾಮಫಲಕ ಅಳವಡಿಕೆಗೆ 2 ವಾರ ಗಡುವು ವಿಸ್ತರಣೆ: ಡಿಸಿಎಂ ಡಿಕೆ ಶಿವಕುಮಾರ್

Exit mobile version