ಮೈಸೂರು ಆ 27 : ನಗರದ ಹೆಲಿಪ್ಯಾಡ್ ಬಳಿಯ ವಾಟರ್ ಟ್ಯಾಂಕ್ನ ಗುಡ್ಡದ ಬಳಿ ಕಾಲೇಜು ವಿದ್ಯಾರ್ಥಿನಿ ಮೇಲೆ ಸಾಮೂಹಿಕ ಅತ್ಯಾಚಾರ ನಡೆದಿದ್ದು. ಉತ್ತರ ಭಾರತ ಮೂಲದ ಯುವತಿ ನಗರದ ಕಾಲೇಜೊಂದರಲ್ಲಿ ಎಂಬಿಎ ವ್ಯಾಸಾಂಗ ಮಾಡುತ್ತಿದ್ದು ನಿನ್ನೆ ಸೇಹಿತನ ಜೊತೆಗೆ ವಾಟರ್ ಟ್ಯಾಂಕ್ನ ಗುಡ್ಡದ ಬಳಿ ಕುಳಿತಿದ್ದ ಸಂದರ್ಭದಲ್ಲಿ ಸುಮಾರು 5 ಜನ ಕಾಮುಕರು ಆಗಮಿಸಿ ಯುವಕ ತಲೆಗೆ ಕಲ್ಲಿನಿಂದ ಜಜ್ಜಿ ಹಲ್ಲೆ ಮಾಡಿ ನಂತರ ಕಾಮುಕರು ವಿದ್ಯಾರ್ಥಿನಿಯ ಮೇಲೆ ಅತ್ಯಾಚಾರ ಎಸಗಿದ್ದಾರೆ. ಸದ್ಯ ಯುವತಿ ಖಾಸಗಿ ಆಸ್ಪತ್ರೆಗೆ ದಾಖಲಾಗಿದ್ದಾರೆ.
ವಿದ್ಯಾರ್ಥಿನಿಯನ್ನು ರೇಪ್ ಮಾಡಿದ ಕಾಮುಕರು ಆಕೆಯ ಬಳಿ ಹಣಕ್ಕೆ ಬೇಡಿಕೆ ಇಟ್ಟಿದ್ದರು ಎಂಬ ಮತ್ತೊಂದು ಅಂಶ ಬೆಳಕಿಗೆ ಬಂದಿದೆ. ಸುಮಾರು 3 ಲಕ್ಷ ರೂಪಾಯಿ ಹಣಕ್ಕೆ ಡಿಮ್ಯಾಂಡ್ ಮಾಡಿದ್ದರು. ಇದಕ್ಕೆ ಸಂತ್ರಸ್ಥೆ ಹಾಗೂ ಆಕೆಯ ಗೆಳೆಯ ಕೂಡ ಒಪ್ಪಿದ್ದರು. ಆದರೆ ಹಣ ಕೇಳಿ 2 ಗಂಟೆಯಾದರೂ ಸಂತ್ರಸ್ಥೆ ಹಣ ಕೊಡಲು ಸಾಧ್ಯವಾಗದಿದ್ದಾಗ, ಕಾಮುಕರು ಆಕೆಯ ಸ್ನೇಹಿತನ ಮೇಲೆ ಹಲ್ಲೆ ಮಾಡಿದ್ದಾರೆ. ಜೊತೆಗೆ ಕಲ್ಲಿನಿಂದ ಹೊಡೆದು ಇಬ್ಬರ ಮೊಬೈಲ್ ಕಿತ್ತುಕೊಂಡು ಹೋಗಿದ್ದಾರೆ ಎಂದು ಪೊಲೀಸ್ ಮೂಲಗಳಿಂದ ಮಾಹಿತಿ ಲಭ್ಯವಾಗಿದೆ.
ಕೃತ್ಯ ನಡೆಸಿದ ಆರೋಪಿಗಳು ದೂರು ಕೊಡದಂತೆ ಆಕೆಗೆ ಬೆದರಿಕೆ ಹಾಕಿದ್ದರು ಎನ್ನಲಾಗುತ್ತಿದೆ. ರೇಪ್ ಮಾಡಿ ವಿಡಿಯೋ ಮಾಡಿಕೊಂಡಿದ್ದ ಆರೋಪಿಗಳು, ಪೊಲೀಸರಿಗೆ ದೂರು ಕೊಟ್ಟರೆ ರೇಪ್ ವಿಡಿಯೋವನ್ನು ಸಾಮಾಜಿಕ ಜಾಲತಾಣದಲ್ಲಿ ಹಾಕುವುದಾಗಿ ಬೆದರಿಕೆ ಹಾಕಿದ್ದರು ಎಂಬ ಅಂಶವೂ ಬೆಳಕಿಗೆ ಬಂದಿದೆ.