Karnataka : ಚರ್ಮ ರೋಗದಿಂದ ಜಾನುವಾರುಗಳು ಸಾವನ್ನಪ್ಪಿದ ಪ್ರಕರಣದಲ್ಲಿ ಮಾಲೀಕರಿಗೆ ಪರಿಹಾರ ನೀಡಲು 30 ಕೋಟಿ ಅನುದಾನ ಬಿಡುಗಡೆ ಮಾಡಲಾಗಿದೆ ಎಂದು ರಾಜ್ಯ(30 crores for dead cows) ಪಶುಸಂಗೋಪನಾ ಸಚಿವ ಪ್ರಭು ಬಿ.ಚವ್ಹಾಣ(Prabhu B. Chauhan) ತಿಳಿಸಿದ್ದಾರೆ.

ಈ ಕುರಿತು ಮಾಧ್ಯಮ(30 crores for dead cows) ಪ್ರಕಟಣೆ ಹೊರಡಿಸಿರುವ ಅವರು, ‘ಚರ್ಮ ಅಥವಾ ಗಂಟು ರೋಗದಿಂದ ಮೃತಪಟ್ಟ ಜಾನುವಾರುಗಳ ಮಾಲೀಕರು ಹಾಗೂ ರೈತರಿಗೆ ಆರ್ಥಿಕ ನಷ್ಟವಾಗುವುದನ್ನು ತಪ್ಪಿಸಲು ಸತ್ತ ಹಸುಗಳಿಗೆ ಪರಿಹಾರ ನೀಡಲು 30 ಕೋಟಿ ರೂ.ಅನುದಾನ ಬಿಡುಗಡೆ ಮಾಡಲಾಗಿದೆ.
ಈ ಹಿಂದೆ 2 ಕೋಟಿ ಅನುದಾನ ನೀಡಲಾಗಿತ್ತು. ಚರ್ಮ ರೋಗ ನಿಯಂತ್ರಣಕ್ಕೆ ಬರುತ್ತಿದ್ದರೂ ರಾಜ್ಯದಲ್ಲಿ 17,000 ಜಾನುವಾರುಗಳು ಸಾವನ್ನಪ್ಪಿವೆ.
ಸತ್ತ ಜಾನುವಾರುಗಳ ಮಾಲೀಕರ ಆರ್ಥಿಕ ಸ್ಥಿತಿಯನ್ನು ಗಮನಿಸಿ, ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ(Basavaraj Bommai) ಅವರು ತುರ್ತಾಗಿ 30ಕೋಟಿ ಬಿಡುಗಡೆ ಮಾಡಲು ಸೂಚಿಸಿದ್ದಾರೆ.
ಇದನ್ನೂ ಓದಿ : https://vijayatimes.com/congress-leader-pateria-arrested/
ನಮ್ಮ ಸರ್ಕಾರ ಸದಾ ಜನಹಿತಕ್ಕಾಗಿ ಶ್ರಮಿಸುತ್ತದೆ. ಜಾನುವಾರುಗಳ ಆರೋಗ್ಯ ರಕ್ಷಣೆಯಲ್ಲಿ ಸರ್ಕಾರ ಸಕ್ರಿಯವಾಗಿದೆ ಎಂದು ಪ್ರಭು ಬಿ.ಚವ್ಹಾಣ ತಿಳಿಸಿದ್ದಾರೆ.
ಚರ್ಮದ ಗಂಟು ರೋಗವು ನೇರವಾಗಿ ಜಾನುವಾರುಗಳ ಉತ್ಪಾದಕತೆಯನ್ನು ಕುಂಠಿತಗೊಳಿಸುವುದರಿಂದ ರೈತರು ಮತ್ತು ಜಾನುವಾರು ಮಾಲೀಕರ ಆರ್ಥಿಕ ಸ್ಥಿತಿಯ ಮೇಲೆ ಪರಿಣಾಮ ಬೀರುವುದನ್ನು ತಡೆಯಲು ಪರಿಹಾರಗಳನ್ನು ಒದಗಿಸಲಾಗುತ್ತಿದೆ.
ಪ್ರತಿ ಹೈನು ರಾಸುಗಳಿಗೆ(ದನಗಳಿಗೆ) ಗರಿಷ್ಠ ₹20,000 ಹಾಗೂ ಎತ್ತುಗಳಿಗೆ ₹30,000 ಹಾಗೂ ಕರುಗಳಿಗೆ ₹5,000 ಗರಿಷ್ಠ ಪರಿಹಾರ ನೀಡಲಾಗುವುದು ಎಂದು ಸಚಿವ ಪ್ರಭು ಚವ್ಹಾಣ ವಿವರಿಸಿದರು.
ರಾಜ್ಯದಲ್ಲಿ ಜಾನುವಾರುಗಳ ಚರ್ಮದ ಗಂಟು ರೋಗ ನಿಯಂತ್ರಣಕ್ಕಾಗಿ, ರಾಜ್ಯಾದ್ಯಂತ 53 ಲಕ್ಷಕ್ಕೂ ಹೆಚ್ಚು ಹಸುಗಳಿಗೆ ಲಸಿಕೆ ಹಾಕಲಾಗಿದ್ದು,

ಲಭ್ಯವಿರುವ ಲಸಿಕೆಯಲ್ಲಿ 40 ಲಕ್ಷ ಡೋಸ್ ಜಾನುವಾರುಗಳಿಗೆ ನೀಡಲಾಗುತ್ತಿದೆ. ಚರ್ಮದ ಗಂಟು ರೋಗವನ್ನು ನಿಯಂತ್ರಿಸಲು ಔಷಧಗಳು ಮತ್ತು ಚಿಕಿತ್ಸೆಗಳನ್ನು ನೀಡಲಾಗುತ್ತಿದೆ.
ರೈತರು ಆತಂಕಕ್ಕೆ ಒಳಗಾಗದೆ ಸರಕಾರದೊಂದಿಗೆ(Government) ಸಹಕರಿಸಬೇಕು ಎಂದು ಪ್ರಭು ಚವ್ಹಾಣ ಮನವಿ ಮಾಡಿದರು.
ಇದನ್ನೂ ಓದಿ : https://vijayatimes.com/zika-virus-in-karnataka/
ಸರ್ಕಾರದ ಅಧಿಕೃತ ಹೇಳಿಕೆಯ ಪ್ರಕಾರ, ರಾಜ್ಯದಲ್ಲಿ ಇದುವರೆಗೆ 2 ಲಕ್ಷ ಹಸುಗಳು ಚರ್ಮದ ಗಂಟು ರೋಗದಿಂದ ಬಳಲುತ್ತಿದ್ದು, ಈ ಪೈಕಿ 1.50 ಲಕ್ಷ ಹಸುಗಳು ಚೇತರಿಸಿಕೊಂಡಿವೆ.
ಉಳಿದ ರಾಸುಗಳಿಗೆ ಸರಕಾರದಿಂದ ಸೂಕ್ತ ಚಿಕಿತ್ಸೆ ನೀಡಲಾಗುತ್ತಿದೆ. ಸತ್ತ ಜಾನುವಾರುಗಳ ಮಾಲೀಕರಿಗೆ ನೇರವಾಗಿ ಅವರ ಬ್ಯಾಂಕ್ ಖಾತೆಗೆ ಪರಿಹಾರ ಧನ ವಿತರಿಸಲಾಗುತ್ತಿದೆ ಎಂದು ಪ್ರಭು ಚವ್ಹಾಣ ಮಾಹಿತಿ ನೀಡಿದ್ದಾರೆ.
- ಮಹೇಶ್.ಪಿ.ಎಚ್