Visit Channel

30:30:40 ಸೂತ್ರ ಅಳವಡಿಸಿ ಸಿಬಿಎಸ್ಸಿ ಫಲಿತಾಂಶ

979061-967494-cbse-curriculam

ನವದೆಹಲಿ,ಜೂ.17: 10, 11 ಮತ್ತು 12 ತರಗತಿಗಳ ಫಲಿತಾಂಶವನ್ನು ಆಧರಿಸಿ, 30:30:40 ಸೂತ್ರವನ್ನು ಅಳವಡಿಸಿಕೊಂಡು, ‌12ನೇ ತರಗತಿಯ ಫಲಿತಾಂಶವನ್ನು ಪ್ರಕಟಿಸಲಾಗುವುದು ಎಂದು ಕೇಂದ್ರ ಪ್ರೌಢಶಿಕ್ಷಣ ಮಂಡಳಿಯು (ಸಿಬಿಎಸ್‌ಇ) ಗುರುವಾರ ಸುಪ್ರೀಂ ಕೋರ್ಟ್‌ಗೆ ತಿಳಿಸಿದೆ.

10 ಮತ್ತು 11ನೇ ತರಗತಿಯಲ್ಲಿ ಗಳಿಸಿರುವ ಅಂಕಗಳಿಂದ ತಲಾ ಶೇ 30 ಹಾಗೂ 12ನೇ ತರಗತಿಯ ಆಂತರಿಕ ಪರೀಕ್ಷೆಗಳಲ್ಲಿ ಗಳಿಸಿರುವ ಅಂಕಗಳಿಂದ ಶೇ 40ರಷ್ಟು ಅಂಕಗಳನ್ನು ಗಣನೆಗೆ ತೆಗೆದುಕೊಂಡು, 12ನೇ ತರಗತಿಯ ಫಲಿತಾಂಶವನ್ನು ನಿರ್ಧರಿಸಲಾಗುತ್ತದೆ. ಈ ಸೂತ್ರದ ಮೌಲ್ಯಮಾಪನದಿಂದ ತೃಪ್ತರಾಗದ ವಿದ್ಯಾರ್ಥಿಗಳಿಗೆ ಈ ಸಾಂಕ್ರಾಮಿಕ ರೋಗದ ತೀವ್ರತೆ ಕಡಿಮೆಯಾದ ನಂತರ 12ನೇ ತರಗತಿ ಪರೀಕ್ಷೆ ಬರೆಯಲು ಅವಕಾಶ ನೀಡಲಾಗುತ್ತದೆ ಎಂದು ಅಟಾರ್ನಿ ಜನರಲ್ ಕೆ.ಕೆ.ವೇಣುಗೋಪಾಲ್ ಅವರು, ನ್ಯಾಯಮೂರ್ತಿಗಳಾದ ಎ.ಎಂ.ಖಾನ್ವಿಲ್ಕರ್‌ ಮತ್ತು ದಿನೇಶ್‌ ಮಹೇಶ್ವರಿ ಅವರನ್ನೊಳಗೊಂಡ ಪೀಠಕ್ಕೆ ತಿಳಿಸಿದರು.

ವಿದ್ಯಾರ್ಥಿಗಳ ಕಾಳಜಿಗೆ ಸಂಬಂಧಿಸಿದಂತೆ, ಅವರಲ್ಲಿ ಯಾವುದೇ ರೀತಿಯ ಸಮಸ್ಯೆಗಳಿದ್ದರೂ ಅದನ್ನು ಪರಿಹರಿಸಲು ಸಮಿತಿ ರಚಿಸಲಾಗುವುದು ಎಂದು ವೇಣುಗೋಪಾಲ್ ನ್ಯಾಯಪೀಠಕ್ಕೆ ಭರವಸೆ ನೀಡಿದರು.

Latest News

bsy
ರಾಜಕೀಯ

ಬಿಜೆಪಿಯ ಸಂಸದೀಯ ಮಂಡಳಿಗೆ ಯಡಿಯೂರಪ್ಪ ; ರಾಜಕೀಯವಾಗಿ ಮತ್ತಷ್ಟು ಬಲಗೊಂಡ ಬಿಎಸ್‌ವೈ

ಇನ್ನು ಸಂಸದೀಯ ಮಂಡಳಿಯಲ್ಲಿ ಉತ್ತರಪ್ರದೇಶ(UttarPradesh) ಮುಖ್ಯಮಂತ್ರಿ ಯೋಗಿ ಆದಿತ್ಯನಾಥ್‌(Yogi Adityanath) ಅವರಿಗೆ ಸ್ಥಾನ ನೀಡಲಾಗುತ್ತದೆ ಎನ್ನಲಾಗಿತ್ತು. ಆದರೆ ಅವರಿಗೆ ಸ್ಥಾನ ಲಭಿಸಿಲ್ಲ.

bjp
ರಾಜಕೀಯ

ಡಿಕೆಶಿ ಸ್ವಾತಂತ್ರ್ಯದ ನಡಿಗೆಯ ಉದ್ದೇಶ, ಸಿದ್ದರಾಮಯ್ಯ ಕಿರುಕುಳದಿಂದ ಸ್ವಾತಂತ್ರ್ಯ ಪಡೆಯುವುದೋ? : ಬಿಜೆಪಿ

ಸಿದ್ದರಾಮಯ್ಯ(Siddaramaiah) ಕಿರುಕುಳದಿಂದ ಸ್ವಾತಂತ್ರ್ಯ ಪಡೆಯುವುದೋ ಅಥವಾ ಕಾಂಗ್ರೆಸ್(Congress) ಹಿರಿಯ ನಾಯಕರು ಡಿಕೆಶಿ(DKS) ಸುತ್ತ ಹೆಣೆದಿರುವ ಜಾಲದಿಂದ ಸ್ವಾತಂತ್ರ್ಯ ಪಡೆಯುವುದೋ?

Ghee
ಆರೋಗ್ಯ

ತುಪ್ಪದ ಬಗ್ಗೆ ತಪ್ಪು ಕಲ್ಪನೆ ಬೇಡ! ; ತಪ್ಪದೇ ತುಪ್ಪ ಸೇವಿಸಿ, ಈ ಆರು ಪ್ರಯೋಜನಗಳನ್ನು ಪಡೆದುಕೊಳ್ಳಿ

ತುಪ್ಪವು ರೋಗನಿರೋಧಕ ಶಕ್ತಿಯನ್ನು ವೃದ್ದಿಸುತ್ತದೆ, ಮೂಳೆಯ ಆರೋಗ್ಯವನ್ನು ಉತ್ತೇಜಿಸುತ್ತದೆ, ಜೀರ್ಣಾಂಗ ವ್ಯವಸ್ಥೆಯನ್ನು ಸುಧಾರಿಸುತ್ತದೆ.

Assam
ದೇಶ-ವಿದೇಶ

500 ರೂ. ಬೆಟ್ಟಿಂಗ್ ಸೋಲಿಗೆ ಸ್ನೇಹಿತನ ಶಿರಚ್ಛೇದ ; 25 ಕಿ.ಮೀ ದೂರದ ಪೊಲೀಸ್ ಠಾಣೆಗೆ ಹೋಗಿ ಶರಣು!

ಆತನ ತಲೆಯನ್ನು ಹಿಡಿದುಕೊಂಡು ರಾತ್ರಿಯ ವೇಳೆ 25 ಕಿ.ಮೀ ದೂರವಿರುವ ಪೊಲೀಸ್ ಠಾಣೆಗೆ(Police Station) ನಡೆದು ಶರಣಾಗಿದ್ದಾನೆ ಎಂದು ಪೊಲೀಸ್ ಅಧಿಕಾರಿಗಳು ಮಾಹಿತಿ ನೀಡಿದ್ದಾರೆ.