Visit Channel

ಆರ್ಥಿಕವಾಗಿ ಹಿಂದುಳಿದ ವರ್ಗಗಳ ಮಹಿಳೆಯರಿಗೆ ಶೇ 33.3ರಷ್ಟು ಮೀಸಲಾತಿ: ತೆಲಂಗಾಣ ಸರ್ಕಾರ

PC-PTI-2

ತೆಲಂಗಾಣ, ಆ. 25: ಆರ್ಥಿಕವಾಗಿ ಹಿಂದುಳಿದ ವರ್ಗಗಳ (ಇ.ಡಬ್ಲ್ಯೂ.ಎಸ್‌) ಕೋಟಾದಡಿದಲ್ಲಿ ಸರ್ಕಾರಿ ಹುದ್ದೆ ಮತ್ತು ಸೇವೆಗಳಲ್ಲಿ ಮಹಿಳೆಯರಿಗೆ ಶೇ 33.3ರಷ್ಟು ಮೀಸಲಾತಿ ನೀಡಲು ತೆಲಂಗಾಣ ಸರ್ಕಾರ ನಿರ್ಧರಿಸಿದೆ. ಈ ಕುರಿತು ಸರ್ಕಾರ ಹೊಸ ಮಾರ್ಗಸೂಚಿಗಳನ್ನು ಹೊರಡಿಸಿದೆ.

‘ಆರ್ಥಿಕವಾಗಿ ಹಿಂದುಳಿದ ವರ್ಗಗಳ (ಇ.ಡಬ್ಲ್ಯೂ.ಎಸ್‌) ಕೋಟಾದಡಿಯಲ್ಲಿ ಮೀಸಲಾಗಿರುವ ಹುದ್ದೆಗಳು ಮತ್ತು ಸೇವೆಗಳ ಆರಂಭಿಕ ನೇಮಕಾತಿಯಲ್ಲಿ ಶೇ 33.3 ರಷ್ಟು ಮಹಿಳೆಯರಿಗೆ ಹಂಚಿಕೆಯಾಗಬೇಕು’ ಎಂದು ಮುಖ್ಯ ಕಾರ್ಯದರ್ಶಿ ಸೋಮೇಶ್ ಕುಮಾರ್ ತಿಳಿಸಿದ್ದಾರೆ.

ಆರ್ಥಿಕವಾಗಿ ಹಿಂದುಳಿದ ಮೇಲ್ಜಾತಿಯವರಿಗೆ ಕೇಂದ್ರ ಸರ್ಕಾರವು ಶಿಕ್ಷಣ ಮತ್ತು ಉದ್ಯೋಗದಲ್ಲಿ ಶೇ 10ರಷ್ಟು ಮೀಸಲಾತಿ ಕಲ್ಪಿಸಿದೆ. ಆದರಂತೆ ತೆಲಂಗಾಣ ಸರ್ಕಾರವೂ ಕೂಡ ಮೀಸಲಾತಿಯನ್ನು ಜಾರಿಗೆ ತಂದಿದೆ. ಇದರಿಂದ ವೈದ್ಯಕೀಯ ಕಾಲೇಜುಗಳಲ್ಲಿ ಪ್ರವೇಶಕ್ಕಾಗಿ ಒಬಿಸಿ ಮತ್ತು ಆರ್ಥಿಕವಾಗಿ ದುರ್ಬಲ ಮತ್ತು ಸಾಮಾನ್ಯ ವರ್ಗದ ವಿದ್ಯಾರ್ಥಿಗಳಿಗೆ ಹೆಚ್ಚು ಅನುಕೂಲವಾಗಲಿದೆ ಎಂದು ಸೋಮೇಶ್ ಕುಮಾರ್ ಹೇಳಿದ್ದಾರೆ.

Latest News

E-Shram Card
ಪ್ರಮುಖ ಸುದ್ದಿ

ಇ-ಶ್ರಮ ಕಾರ್ಡ್ ಉಪಯೋಗದ ಬಗ್ಗೆ ನಿಮಗೆ ತಿಳಿದಿಲ್ಲವೆ ?  

ಅಸಂಘಟಿತ ವಲಯದ ಕಾರ್ಮಿಕರಿಗೆ  ಸಂಪೂರ್ಣವಾಗಿ  ವೃತ್ತಿ ಮಾಹಿತಿ  ಮತ್ತು   ಸರ್ಕಾರದ  ಯೋಜನೆಗಳು  ಕಾರ್ಮಿಕರಿಗೆ ನೇರವಾಗಿ ತಲುಪಿಸುವ ,ಹಾಗೂ ದತ್ತಾಂಶ ಸಂಗ್ರಹಿಸುವ ಉದ್ದೇಶದಿಂದ 26  ಆಗಸ್ಟ್‌  2021 ರಂದು  ಕೇಂದ್ರ ಸರ್ಕಾರವು ಈ ಯೋಜನೆಯನ್ನು  ಜಾರಿಗೊಳಿಸಿದೆ. 

inflation
ದೇಶ-ವಿದೇಶ

ಅಗತ್ಯ ವಸ್ತುಗಳ ಬೆಲೆ ತಗ್ಗಿದ ಪರಿಣಾಮ: ಜುಲೈನಲ್ಲಿ ಚಿಲ್ಲರೆ ಹಣದುಬ್ಬರ ಶೇ.6.7 ಇಳಿಕೆ ನಿರೀಕ್ಷೆ

ಅಂದು 100 ರೂಪಾಯಿಗೆ ಖರೀದಿಸುವ ಸಾಮಾನು ಈಗ 500 ಕೊಟ್ಟರು ಬರುವುದಿಲ್ಲ. ಕಾರಣ ಹಣದ ಮೌಲ್ಯ ಕಡಿಮೆಯಾಗಿದೆ, ಈ ಹಣದ ಮೌಲ್ಯ ಕಡಿಮೆಯಾಗಿರುವುದನ್ನೇ ನಾವು ಹಣದುಬ್ಬರ ಎನ್ನುತ್ತೇವೆ.