ಕೊರೊನಾ ಕೊಂಚ ಏರಿಕೆ ;ಕಳೆದ 24 ಗಂಟೆಗಳಲ್ಲಿ 35,178 ಹೊಸ ಕೇಸ್

ನವದೆಹಲಿ, ಆ. 18: ದೇಶದಲ್ಲಿ ಕಳೆದ 24 ಗಂಟೆಗಳ ಅವಧಿಯಲ್ಲಿ 35,178 ಹೊಸ ಕೋವಿಡ್‌ ಪ್ರಕರಣಗಳು ದೃಢಪಟ್ಟಿದ್ದು, 440 ಮಂದಿ ಸೋಂಕಿತರು ಮೃತಪಟ್ಟಿದ್ದಾರೆ ಎಂದು ಕೇಂದ್ರ ಆರೋಗ್ಯ ಸಚಿವಾಲಯ ತಿಳಿಸಿದೆ.

ಇದರೊಂದಿಗೆ ಸೋಂಕಿತರ ಸಂಖ್ಯೆ 3,22,85,857ಕ್ಕೆ ಏರಿಕೆಯಾಗಿದ್ದು, ಆ ಪೈಕಿ 4,32,519 ಮಂದಿ ಸಾವಿಗೀಡಾಗಿದ್ದಾರೆ. ಇದುವರೆಗೆ 3,14,85,923 ಮಂದಿ ಗುಣಮುಖರಾಗಿದ್ದಾರೆ. ಸದ್ಯ ದೇಶದಲ್ಲಿ 3,67,415 ಸಕ್ರಿಯ ಪ್ರಕರಣಗಳಿವೆ.

ಕೇರಳದಲ್ಲಿ 1,75,695, ಮಹಾರಾಷ್ಟ್ರದಲ್ಲಿ 64,790, ಕರ್ನಾಟಕದಲ್ಲಿ 21,507, ತಮಿಳುನಾಡಿನಲ್ಲಿ 20,225, ಆಂಧ್ರಪ್ರದೇಶ 16,341 ಸಕ್ರಿಯ ಪ್ರಕರಣಗಳಿವೆ. ದೇಶದಾದ್ಯಂತ ಈವರೆಗೆ 56,06,52,030 ಡೋಸ್ ಲಸಿಕೆ ಹಾಕಲಾಗಿದೆ ಎಂದು ಆರೋಗ್ಯ ಸಚಿವಾಲಯ ತಿಳಿಸಿದೆ.

Exit mobile version