- ಬೆಂಗಳೂರು ಜಿಬಿಎ ಚುನಾವಣೆ: ಕಾಂಗ್ರೆಸ್‌ನಲ್ಲಿ (369 wards gba election) ಟಿಕೆಟ್‌ಗೆ ಭರ್ಜರಿ ಪೈಪೋಟಿ
- 369 ವಾರ್ಡ್‌ಗಳಿಗೆ 1,800ಕ್ಕೂ ಹೆಚ್ಚು ಆಕಾಂಕ್ಷಿಗಳಿಂದ ಅರ್ಜಿ ಸಲ್ಲಿಕೆ
- ಒಂದೊಂದು ವಾರ್ಡ್‌ಗೆ ನಾಲ್ಕು–ಐದು ಆಕಾಂಕ್ಷಿಗಳ ಸ್ಪರ್ಧೆ
Bengaluru: ಗ್ರೇಟರ್ ಬೆಂಗಳೂರು (Greater Bangalore) ಆಡಳಿತ ಮಂಡಳಿ (ಜಿಬಿಎ) ಚುನಾವಣೆಗೆ ಸಂಬಂಧಿಸಿದಂತೆ (369 wards gba election) ರಾಜ್ಯ ರಾಜಕಾರಣದಲ್ಲಿ ಚಟುವಟಿಕೆಗಳು ದಿನದಿಂದ ದಿನಕ್ಕೆ ಜೋರಾಗುತ್ತಿವೆ.
ಸುಪ್ರೀಂ ಕೋರ್ಟ್ (Supreme Court) ನೀಡಿರುವ ಆದೇಶದಂತೆ ಜೂನ್ 30ರ ಒಳಗೆ ಜಿಬಿಎ ಚುನಾವಣೆ ನಡೆಸಲೇಬೇಕು ಎಂಬ ಕಟ್ಟುನಿಟ್ಟಿನ ಸೂಚನೆಯ ಹಿನ್ನೆಲೆ ಎಲ್ಲ ರಾಜಕೀಯ ಪಕ್ಷಗಳು ಸಿದ್ಧತೆ ಆರಂಭಿಸಿವೆ.
ಈ ನಡುವೆಯೇ ಕಾಂಗ್ರೆಸ್ ಪಕ್ಷದಲ್ಲಿ ಜಿಬಿಎ ಚುನಾವಣೆಗೆ ಭಾರೀ ಉತ್ಸಾಹ ಕಂಡುಬಂದಿದ್ದು, 369 ವಾರ್ಡ್‌ಗಳಿಗೆ ಸುಮಾರು 1,800ಕ್ಕೂ ಹೆಚ್ಚು ಮಂದಿ ಆಕಾಂಕ್ಷಿಗಳು ಈಗಾಗಲೇ ಅರ್ಜಿ ಸಲ್ಲಿಸಿರುವುದು ರಾಜಕೀಯ ವಲಯದಲ್ಲಿ ಕುತೂಹಲಕ್ಕೆ ಕಾರಣವಾಗಿದೆ.
ಜಿಬಿಎ ಚುನಾವಣೆ ಪ್ರಕ್ರಿಯೆ ಆರಂಭವಾದ ಬೆನ್ನಲ್ಲೇ ಕಾಂಗ್ರೆಸ್ ಪಕ್ಷವು ಸಂಘಟನಾತ್ಮಕವಾಗಿ ಚುರುಕಾಗಿ ಕಾರ್ಯನಿರ್ವಹಿಸುತ್ತಿದೆ.

ಪಕ್ಷದ ನಾಯಕತ್ವ ಚುನಾವಣೆಗೆ ತಯಾರಿ ನಡೆಸುತ್ತಿರುವುದರ ಜೊತೆಗೆ, ಆಕಾಂಕ್ಷಿಗಳಿಗೆ (369 wards gba election) ಅಧಿಕೃತವಾಗಿ ಅರ್ಜಿ ಸಲ್ಲಿಸಲು ಅವಕಾಶ ನೀಡಲಾಗಿದೆ.
ಕೆಪಿಸಿಸಿ ಭಾರತ್ ಜೋಡೋ ಕಚೇರಿಯಲ್ಲಿ ಅರ್ಜಿ ಸ್ವೀಕಾರ ಪ್ರಕ್ರಿಯೆ ನಡೆಯುತ್ತಿದ್ದು, ಈ ತಿಂಗಳ 30ರವರೆಗೂ ಅರ್ಜಿ ಸಲ್ಲಿಸಲು ಅವಕಾಶ ಕಲ್ಪಿಸಲಾಗಿದೆ.
ಈಗಾಗಲೇ ಬಂದಿರುವ ಅರ್ಜಿಗಳ ಸಂಖ್ಯೆ ನೋಡಿದರೆ ಮುಂದಿನ ದಿನಗಳಲ್ಲಿ ಆಕಾಂಕ್ಷಿಗಳ ಪಟ್ಟಿ ಇನ್ನಷ್ಟು ಹೆಚ್ಚಾಗುವ ಸಾಧ್ಯತೆ ಇದೆ ಎಂದು ಪಕ್ಷದ ಮೂಲಗಳು ತಿಳಿಸಿವೆ.
ಕಾಂಗ್ರೆಸ್‌ನಲ್ಲಿ ಈ ಬಾರಿ ಜಿಬಿಎ ಚುನಾವಣೆಗೆ ಭಾರೀ ಪೈಪೋಟಿ ಏರ್ಪಟ್ಟಿರುವುದು ಸ್ಪಷ್ಟವಾಗಿ ಗೋಚರಿಸುತ್ತಿದೆ.
369 ವಾರ್ಡ್‌ಗಳಿಗೆ ಸರಾಸರಿ ಪ್ರತಿ ವಾರ್ಡ್‌ಗೆ ನಾಲ್ಕು ರಿಂದ ಐದು ಮಂದಿ ಆಕಾಂಕ್ಷಿಗಳು ಸ್ಪರ್ಧೆಗೆ ಮುಂದಾಗಿರುವುದು ಪಕ್ಷದೊಳಗಿನ ಸ್ಪರ್ಧೆಯ ತೀವ್ರತೆಯನ್ನು ತೋರಿಸುತ್ತದೆ.
ಪಕ್ಷದ ಟಿಕೆಟ್ ಪಡೆಯಲು ಅನುಭವ, ಜನಸಂಪರ್ಕ, ಸಂಘಟನೆ ಹಾಗೂ ಸಾಮಾಜಿಕ ಹಿನ್ನಲೆ ಪ್ರಮುಖ ಅಂಶಗಳಾಗಲಿವೆ ಎಂದು ಹೇಳಲಾಗುತ್ತಿದೆ.
ಅರ್ಜಿ ಸಲ್ಲಿಕೆ ವೇಳೆ ಪುರುಷ ಆಕಾಂಕ್ಷಿಗಳು 50 ಸಾವಿರ ರೂಪಾಯಿ ಶುಲ್ಕವನ್ನು ಪಾವತಿಸಬೇಕಾಗಿದ್ದು, ಮಹಿಳಾ ಆಕಾಂಕ್ಷಿಗಳಿಗೆ 25 ಸಾವಿರ ರೂಪಾಯಿ ಶುಲ್ಕ ನಿಗದಿಪಡಿಸಲಾಗಿದೆ.
ಇದೀಗ ಅರ್ಜಿ ಸಲ್ಲಿಕೆ ಮುಗಿದ ಬಳಿಕ ಅಭ್ಯರ್ಥಿಗಳ ಆಯ್ಕೆ ಪ್ರಕ್ರಿಯೆ ಕಾಂಗ್ರೆಸ್‌ಗೆ (Congress) ದೊಡ್ಡ ಸವಾಲಾಗಿ ಪರಿಣಮಿಸುವ ಸಾಧ್ಯತೆ ಇದೆ.
ಒಂದೇ ವಾರ್ಡ್‌ಗೆ ಹೆಚ್ಚಿನ ಆಕಾಂಕ್ಷಿಗಳು ಇದ್ದರೆ ಯಾರಿಗೆ ಟಿಕೆಟ್ ನೀಡಬೇಕು ಎಂಬ ಪ್ರಶ್ನೆ ಪಕ್ಷದೊಳಗೆ ಚರ್ಚೆಗೆ ಬರಲಿದೆ.
ಸ್ಥಳೀಯ ನಾಯಕರ ಅಭಿಪ್ರಾಯ, ಸಮೀಕ್ಷಾ ವರದಿಗಳು ಹಾಗೂ ಪಕ್ಷದ ಹೈಕಮಾಂಡ್ ಸೂಚನೆಗಳ ಆಧಾರದಲ್ಲಿ ಅಭ್ಯರ್ಥಿಗಳ ಅಂತಿಮ ಪಟ್ಟಿ ಸಿದ್ಧಗೊಳ್ಳಲಿದೆ ಎಂದು ನಿರೀಕ್ಷಿಸಲಾಗಿದೆ.
ಈ ಪ್ರಕ್ರಿಯೆಯಲ್ಲಿ ಅಸಮಾಧಾನಗೊಂಡ ಆಕಾಂಕ್ಷಿಗಳನ್ನು ಸಮಾಧಾನಪಡಿಸುವುದು ಕೂಡ ಪಕ್ಷಕ್ಕೆ ಪ್ರಮುಖ ಹೊಣೆಗಾರಿಕೆಯಾಗಿದೆ.
ಒಟ್ಟಾರೆ ಜಿಬಿಎ ಚುನಾವಣೆಯ ಅಧಿಕೃತ ಅಧಿಸೂಚನೆ ಹೊರಬರುವುದರೊಂದಿಗೆ ರಾಜಕೀಯ ಚಟುವಟಿಕೆಗಳು ಇನ್ನಷ್ಟು ತೀವ್ರಗೊಳ್ಳಲಿವೆ. ವಾರ್ಡ್ ಮೀಸಲಾತಿಯ ಕರಡು ಪಟ್ಟಿ ಈಗಾಗಲೇ ಬಿಡುಗಡೆ ಆಗಿದ್ದು,
ಅಂತಿಮ ಅಧಿಸೂಚನೆಯ ನಂತರ ಜೆಡಿಎಸ್ ಹಾಗೂ ಬಿಜೆಪಿ (BJP)ಸೇರಿದಂತೆ ಇತರ ಪಕ್ಷಗಳ ತಂತ್ರಗಾರಿಕೆಗಳು ಸ್ಪಷ್ಟವಾಗಲಿವೆ.
ಬೆಂಗಳೂರಿನ ಆಡಳಿತದ ದಿಕ್ಕು ನಿರ್ಧರಿಸುವ ಈ ಚುನಾವಣೆಗೆ ಕಾಂಗ್ರೆಸ್ ಯಾವ ರೀತಿ ತಯಾರಿ ನಡೆಸುತ್ತದೆ, ಟಿಕೆಟ್ ಹಂಚಿಕೆಯಲ್ಲಿ ಯಾರಿಗೆ ಅವಕಾಶ ಸಿಗುತ್ತದೆ ಎಂಬುದನ್ನು ನೋಡಲು ರಾಜಕೀಯ ವಲಯ ಕಾದು ನೋಡುತ್ತಿದೆ.
ಇದನ್ನು ಓದಿ:https://vijayatimes.com/high-court-allows-bike-taxi-service/