ಜಮ್ಮು ಮತ್ತು ಕಾಶ್ಮೀರಕ್ಕೆ ವಿಶೇಷ ಸ್ಥಾನಮಾನ ನೀಡುವ ಸಂವಿಧಾನದ 370 ನೇ ವಿಧಿಯನ್ನು ರದ್ದು ಮಾಡಿದ್ದಕ್ಕೆ ಅಜ್ಮೇರ್ ಶರೀಫ್ ದರ್ಗಾದ ಮುಖ್ಯಸ್ಥ ಝೈನುಲ್ ಅಬೆದಿನ್ ಅಲಿ ಖಾನ್ ಅವರು ಪ್ರಧಾನಮಂತ್ರಿ ನರೇಂದ್ರ ಮೋದಿ ಮತ್ತು ಗೃಹ ಸಚಿವ ಅಮಿತ್ ಶಾ ಅವರಿಗೆ ಅಭಿನಂದನೆ ಸಲ್ಲಿಸಿದ್ದಾರೆ.
ಇದೇ ವೇಳೆ, ಯಾವುದೇ ಕಾರಣಕ್ಕೂ ಪ್ರತ್ಯೇಕತಾವಾದಿಗಳು ಮತ್ತು ಸ್ಥಳೀಯ ರಾಜಕೀಯ ಪಕ್ಷಗಳಿಂದ ತಪ್ಪು ದಾರಿ ತುಳಿಯಬೇಡಿ ಎಂದು ಜಮ್ಮು ಮತ್ತು ಕಾಶ್ಮೀರದ ಜನತೆಗೆ ಮನವಿ ಮಾಡಿದ್ದಾರೆ. ಇನ್ನು ಮುಂದಾದರೂ ಸಮಾಜದ ಮುಖ್ಯವಾಹಿನಿಗೆ ಬಂದು ನಿಮ್ಮ ನಿಮ್ಮ ಕುಟುಂಬಗಳ, ಸಮಾಜದ ಮತ್ತು ದೇಶದ ಏಳ್ಗೆ ಕಡೆಗೆ ಗಮನಹರಿಸಿ ಎಂದು ಕಿವಿಮಾತು ಹೇಳಿದ್ದಾರೆ.
“ದೇಶ ಸುವರ್ಣಾಕ್ಷರಗಳಲ್ಲಿ ಬರೆದಿಡುವ ಇದೊಂದು ಐತಿಹಾಸಿಕ ದಿನವಾಗಿದೆ. ಈ ನಿರ್ಧಾರ ತೆಗೆದುಕೊಂಡಿರುವ ಸಂಸದರಿಗೆ, ಪ್ರಧಾನಮಂತ್ರಿ ಮತ್ತು ಗೃಹಸಚಿವರನ್ನು ನಾನು ಅಭಿನಂದಿಸುತ್ತೇನೆ. ಇದೀಗ ಪಾಕ್ ಆಕ್ರಮಿತ ಕಾಶ್ಮೀರದ ಬಗ್ಗೆ ಮಾತುಕತೆಗಳು ನಡೆಯಬೇಕಿದೆ’’ ಎಂದು ಹೇಳಿಕೆಯಲ್ಲಿ ಖಾನ್ ತಿಳಿಸಿದ್ದಾರೆ.