Visit Channel

‘370’ ರದ್ದು ಭಾರತದ ಭದ್ರತೆಗೆ ಧಕ್ಕೆ ತಂದಿದೆ!: ಕೇಂದ್ರ ವಿರುದ್ಧ ಕಿಡಿಕಾರಿದ ರಾಹುಲ್ ಗಾಂಧಿ

1565076194-rahul_gandhi_cwc_meet

ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರು ಜಮ್ಮು ಮತ್ತು ಕಾಶ್ಮೀರ ಪುನರ್ ರಚನೆ ಮಸೂದೆಯನ್ನು ಮಂಗಳವಾರ ಲೋಕಸಭೆಯಲ್ಲಿ ಮಂಡಿಸಿದ ಬೆನ್ನಲ್ಲೇ ಮೊದಲ ಬಾರಿಗೆ ಕಾಂಗ್ರೆಸ್ ಮಾಜಿ ಅಧ್ಯಕ್ಷ ಹಾಗೂ ಸಂಸದ ರಾಹುಲ್ ಗಾಂಧಿ ಈ ಬಗ್ಗೆ ಪ್ರತಿಕ್ರಿಯಿಸಿದ್ದಾರೆ.

ಈ ಬಗ್ಗೆ ಟ್ವೀಟ್ ಮಾಡಿರುವ ರಾಹುಲ್, “ಜಮ್ಮು ಮತ್ತು ಕಾಶ್ಮೀರದಿಂದ 370 ನೇ ವಿಧಿಯನ್ನು ತೆಗೆದುಹಾಕುವ ಮೂಲಕ ಸರ್ಕಾರ ಉಲ್ಲಂಘಿಸಿದೆ” ಎಂದು ಕಿಡಿ ಕಾರಿದ್ದಾರೆ.

“ಜಮ್ಮು ಕಾಶ್ಮೀರವನ್ನು ಇಬ್ಭಾಗವಾಗಿಸೋದ್ರಿಂದ, ಜನಪ್ರತಿನಿಧಿಗಳನ್ನ ಬಂಧಿಸೋದ್ರಿಂದ ಹಾಗೂ ನಮ್ಮ ಸಂವಿಧಾನವನ್ನ ಉಲ್ಲಂಘಿಸೋದ್ರಿಂದ ರಾಷ್ಟ್ರದ ಏಕೀಕರಣ ಹೆಚ್ಚಾಗುವುದಿಲ್ಲ. ಈ ದೇಶ, ಜನರಿಂದ ನಿರ್ಮಿತವಾಗಿದೆಯೇ ಹೊರತು, ತುಂಡು ಭೂಮಿಗಳಿಂದ ಅಲ್ಲ”, ಎಂದು ರಾಹುಲ್​ ಗಾಂಧಿ ಟ್ವಿಟರ್​ನಲ್ಲಿ ಹರಿಹಾಯ್ದಿದ್ದಾರೆ. ‘ಅಧಿಕಾರ ದುರುಪಯೋಗದಿಂದ ನಮ್ಮ ರಾಷ್ಟ್ರದ ಭದ್ರತೆ ಮೇಲೆ ಗಂಭೀರ ಪರಿಣಾಮ ಬೀರುತ್ತದೆ’ ಎಂದು ಅವರು ಹೇಳಿದ್ದಾರೆ.

Latest News

Pakistan
ದೇಶ-ವಿದೇಶ

ಪಾಕಿಸ್ತಾನ : ಗರ್ಭಿಣಿ ಮಹಿಳೆ ಮೇಲೆ ಭದ್ರತಾ ಸಿಬ್ಬಂದಿ ಹಲ್ಲೆ ; ಭಾರೀ ಆಕ್ರೋಶ

ನೋಮನ್ ಗ್ರ್ಯಾಂಡ್ ಸಿಟಿ ಅಪಾರ್ಟ್ಮೆಂಟ್ ಕಟ್ಟಡದ ಹೊರಗೆ ಭದ್ರತಾ ಸಿಬ್ಬಂದಿ ಗರ್ಭಿಣಿ ಮಹಿಳೆಯನ್ನು ಥಳಿಸಿದ್ದಾರೆ ಎಂದು ಪಾಕ್ ಮೂಲದ ಜಿಯೋ ನ್ಯೂಸ್ ವರದಿ ಮಾಡಿದೆ.

Culprits
ಪ್ರಮುಖ ಸುದ್ದಿ

ಹಾಲಿನ ವ್ಯಾಪಾರದ ಸೋಗಿನಲ್ಲಿ ಖೋಟಾ ನೋಟು ದಂಧೆ ; ಬಿಜೆಪಿ ಮುಖಂಡ ಸೇರಿ ಮೂವರ ಬಂಧನ

ಆರೋಪಿಯನ್ನು ವಶಕ್ಕೆ ಪಡೆದು ವಿಚಾರಣೆ ನಡೆಸುತ್ತಿದ್ದಾರೆ. ಈ ಕುರಿತು ಪೊಲೀಸರು ತನಿಖೆ ಮುಂದುವರೆಸಿದ್ದು, ಕುಂದಗೋಳ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಿಸಿಕೊಳ್ಳಲಾಗಿದೆ.

rss
ರಾಜಕೀಯ

RSS ಭಾರತದಲ್ಲಿನ ತಾಲಿಬಾನ್ ಇದ್ದಂತೆ : ಕಾಂಗ್ರೆಸ್‌

ಆರ್‌ಎಸ್‌ಎಸ್‌ ಎಂದಿಗೂ ಭಾರತೀಯತೆಯನ್ನು ಒಪ್ಪಿಲ್ಲ, ಮುಂದೆಯೂ ಒಪ್ಪುವುದಿಲ್ಲ. ಪ್ರತ್ಯೇಕ ಐಡೆಂಟಿಟಿಯಲ್ಲಿ ಇರಲು ಭಯಸುವ ಆರ್‌ಎಸ್‌ಎಸ್‌, ಭಾರತದಲ್ಲಿನ ತಾಲಿಬಾನ್ ಇದ್ದಂತೆ.