Visit Channel

24ಗಂಟೆಯಲ್ಲಿ 3,847 ಮಂದಿ ಕೊರೋನಾದಿಂದ ಸಾವು: 2.11 ಲಕ್ಷ ಹೊಸ ಕೇಸ್

205534-covid191592517384

ನವದೆಹಲಿ, ಮೇ. 27: ದೇಶದಲ್ಲಿ ಕಳೆದ 24 ಗಂಟೆಗಳಲ್ಲಿ 2,11,298 ಹೊಸ ಕೊರೋನಾ ಪ್ರಕರಣಗಳನ್ನು ದಾಖಲಾಗಿದ್ದು, 3,847 ಮಂದಿ ಕೊರೋನಾದಿಂದ ಸಾವನ್ನಪ್ಪಿದ್ದಾರೆ. ಇನ್ನೂ ದೇಶದ ಸಕ್ರಿಯ ಪ್ರಕರಣಗಳು ಮತ್ತಷ್ಟು 75,684 ರಷ್ಟು ಇಳಿದು 24,199,07 ಕ್ಕೆ ತಲುಪಿದ್ದು, ಈಗ ಒಟ್ಟು ಸೋಂಕುಗಳ ಶೇಕಡಾ 9.79 ರಷ್ಟಿದೆ. ಚೇತರಿಕೆ ಪ್ರಮಾಣವು ಶೇಕಡಾ 90.01 ಕ್ಕೆ ಏರಿದೆ. ಕಳೆದ 24 ಗಂಟೆಗಳಲ್ಲಿ 2,83,135 ಜನರು ಚೇತರಿಸಿಕೊಂಡಿದ್ದು, ಸಾಂಕ್ರಾಮಿಕ ರೋಗ ಪ್ರಾರಂಭವಾದಾಗಿನಿಂದ ಒಟ್ಟು ಚೇತರಿಕೆಯ ಸಂಖ್ಯೆ 2,46,33,951 ಆಗಿದೆ.

ಕಳೆದ ೨೪ಗಂಟೆಯಲ್ಲಿ ತಮಿಳುನಾಡಿನಲ್ಲಿ 33,764 ಪ್ರಕರಣಗಳು ದಾಖಲಾಗಿದ್ದು ಕೇರಳದಲ್ಲಿ 28,798 ಪ್ರಕರಣಗಳು ದಾಖಲಾಗಿವೆ. ಜೊತೆಗೆ ಮಹಾರಾಷ್ಟ್ರದಲ್ಲಿ 1,013 ಸಾವು ಸಂಭವಿಸಿದ್ದು, ಕರ್ನಾಟಕದಲ್ಲಿ 530 ಮತ್ತು ತಮಿಳುನಾಡಿನಲ್ಲಿ 475 ಸಾವು ವರದಿ ಆಗಿದೆ.

ಭಾರತೀಯ ವೈದ್ಯಕೀಯ ಸಂಶೋಧನಾ ಮಂಡಳಿ (ಐಸಿಎಂಆರ್) ಮಾಹಿತಿ ಪ್ರಕಾರ ಮೇ 26ರವರೆಗೆ 33,69,69,352 ಮಾದರಿಗಳನ್ನು ಪರೀಕ್ಷಿಸಲಾಗಿದೆ. 21,57,857 ಮಾದರಿಗಳನ್ನು ಬುಧವಾರ ಪರೀಕ್ಷಿಸಲಾಗಿದೆ.

Latest News

BJP
ರಾಜಕೀಯ

ಬಿಜೆಪಿ ನಾಯಕರು ನಮಗೆ ದೇಶಪ್ರೇಮದ ಪಾಠ ಮಾಡುವುದು ಆತ್ಮವಂಚನೆಯಾಗುತ್ತದೆ : ಸಿದ್ದರಾಮಯ್ಯ

ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ(Basavaraj Bommai) ಅವರು ಕರಾವಳಿಯಲ್ಲಿ ಹತ್ಯೆಗೀಡಾದ ಪ್ರವೀಣ್ ನೆಟ್ಟಾರು(Praveen Nettaru) ಮನೆಗೆ ಮಾತ್ರ ಹೋಗಿ ಪರಿಹಾರ ಕೊಟ್ಟಿದ್ದಾರೆ.

Malyalam
ಮನರಂಜನೆ

ನಟನೆಯಲ್ಲಿ ಸೋಲನ್ನು ಕಂಡರೂ ಕುಗ್ಗದೆ, ಇಂದು ಭಾರತ ಚಿತ್ರರಂಗವೇ ತನ್ನತ್ತ ತಿರುಗಿ ನೋಡುವಂತೆ ಮಾಡಿದ ನಟ ಫಹಾದ್ ಫಾಸಿಲ್!

ಫಹಾದ್ ಸಿನಿಮಾಗಳು ತಕ್ಕಮಟ್ಟಿಗೆ ಹಿಟ್ ಎನಿಸಿದರೂ, ಇವರ ಈಗಿನ ಸಿನಿಮಾ ಪ್ರಸಿದ್ಧಿಗೆ ಹೋಲಿಸಿದರೆ ಹಿಂದಿನ ಸಿನಿಮಾಗಳು ಏನೇನೂ ಆಗಿರಲಿಲ್ಲ.

Kabbadi Player
ದೇಶ-ವಿದೇಶ

ಪಲ್ಟಿ ಹೊಡೆಯುವ ಯತ್ನದಲ್ಲಿ ಕುಸಿದು ಬಿದ್ದು ಕಬಡ್ಡಿ ಆಟಗಾರ ಸಾವು! ; ವೀಡಿಯೋ ವೈರಲ್

ಕಬಡ್ಡಿ(Kabbadi) ಆಟಗಾರರೊಬ್ಬ ಸೋಮರ್ ಸಾಲ್ಟ್ ಹೊಡೆಯುತ್ತಿದ್ದಾಗ ಕುಸಿದು ಬಿದ್ದು, ಚಿಕಿತ್ಸೆಗೆ ಸ್ಪಂದಿಸದೆ ಆಸ್ಪತ್ರೆಯಲ್ಲಿ(Hospital) ಮೃತಪಟ್ಟಿದ್ದಾರೆ.

China Ship
ದೇಶ-ವಿದೇಶ

ಶ್ರೀಲಂಕಾ ಬಂದರಿನಲ್ಲಿ ಚೀನಾದ ಹಡಗು ; ಭಾರತದ ಕಳವಳಕ್ಕೆ 5 ಕಾರಣಗಳು ಇಲ್ಲಿವೆ!

ಮೊದಲಿನಿಂದಲೂ ಈ ಹಡಗು ಶ್ರೀಲಂಕಾ ಬಂದರಿಗೆ ಬರುವುದನ್ನು ಭಾರತ ತೀವ್ರವಾಗಿ ವಿರೋಧಿಸಿತ್ತು. ಭಾರತದ ಕಳವಳಕ್ಕೆ ಪ್ರಮುಖ 5 ಕಾರಣಗಳೆಂದರೆ,