ಸಿಡ್ನಿ, ಜ. 06: ಆಸ್ಟ್ರೇಲಿಯಾ ವಿರುದ್ಧ ನಡೆಯುತ್ತಿರುವ ಟೆಸ್ಟ್ ಸರಣಿಯ 3ನೇ ಪಂದ್ಯಕ್ಕೆ ಟೀಂ ಇಂಡಿಯಾ ತಂಡವನ್ನು ಪ್ರಕಟಿಸಿದ್ದು, ನಿರೀಕ್ಷೆಯಂತೆ ರೋಹಿತ್ ಶರ್ಮಾ ತಂಡಕ್ಕೆ ಸೇರ್ಪಡೆಯಾಗಿದ್ದರೆ. ಯುವ ವೇಗದ ಬೌಲರ್ ನವದೀಪ್ ಸೈನಿ ತಂಡದಲ್ಲಿ ಸ್ಥಾನ ಪಡೆಯುವ ಮೂಲಕ ಚೊಚ್ಚಲ ಟೆಸ್ಟ್ ಪಂದ್ಯವಾಡಲು ಸಜ್ಜಾಗಿದ್ದಾರೆ.
ಉಭಯ ತಂಡಗಳ ನಡುವಿನ ಮೂರನೇ ಟೆಸ್ಟ್ ಪಂದ್ಯ ಸಿಡ್ನಿಯಲ್ಲಿ ಜ.7ರಿಂದ ಆರಂಭವಾಗಲಿದೆ. ಈ ಹಿನ್ನೆಲೆಯಲ್ಲಿ ಪ್ಲೇಯಿಂಗ್ ಇಲೆವೆನ್ ಪ್ರಕಟಿಸಿದ್ದು, ಅಜಿಂಕ್ಯಾ ರಹಾನೆ ನಾಯಕತ್ವದಲ್ಲಿ ಟೀಂ ಇಂಡಿಯಾ ಕಣಕ್ಕಿಳಿಯಲಿದ್ದು, ತಂಡಕ್ಕೆ ಸೇರ್ಪಡೆಯಾಗಿರುವ ರೋಹಿತ್ ಶರ್ಮಾಗೆ ಉಪ ನಾಯಕನ ಜವಾಬ್ದಾರಿ ನೀಡಲಾಗಿದೆ. ಮೊದಲೆರಡು ಟೆಸ್ಟ್‌ನಲ್ಲಿ ನಿರೀಕ್ಷಿತ ಪ್ರದರ್ಶನ ನೀಡುವಲ್ಲಿ ವಿಫಲವಾಗಿದ್ದ ಕನ್ನಡಿಗ ಮಯಾಂಕ್ ಅಗರ್ವಾಲ್ ಅವರನ್ನು ತಂಡದಿಂದ ಕೈಬಿಡಲಾಗಿದೆ.
ಬೌಲಿಂಗ್ ವಿಭಾಗದಲ್ಲಿ ಮತ್ತೆ ಬದಲಾವಣೆ ಮಾಡಲಾಗಿದ್ದು, ಕಳೆದ ಪಂದ್ಯದಲ್ಲಿ ಗಾಯಗೊಂಡು ತಂಡದಿಂದ ಹೊರಗುಳಿದಿರುವ ಉಮೇಶ್ ಯಾದವ್ ಸ್ಥಾನಕ್ಕೆ 28 ವರ್ಷದ ಯುವ ವೇಗಿ ನವದೀಪ್ ಸೈನಿ ಅವರಿಗೆ ಸ್ಥಾನ ನೀಡಲಾಗಿದೆ. ಇದರೊಂದಿಗೆ ನವದೀಪ್ ಸೈನಿ ಚೊಚ್ಚಲ ಅಂತಾರಾಷ್ಟ್ರೀಯ ಟೆಸ್ಟ್ ಪಂದ್ಯವಾಡಲಿದ್ದಾರೆ.
ಇನ್ನುಳಿದಂತೆ ಮೆಲ್ಬೋರ್ನ್ ನಲ್ಲಿ ನಡೆದ ದ್ವಿತೀಯ ಟೆಸ್ಟ್‌ನಲ್ಲಿ ಸ್ಥಾನ ಪಡೆಯುವ ಮೂಲಕ ಟೆಸ್ಟ್ ಕ್ರಿಕೆಟಿಗೆ ಪಾದಾರ್ಪಣೆ ಮಾಡಿದ್ದ ಶುಭ್ಮನ್ ಗಿಲ್ ಹಾಗೂ ಮೊಹಮ್ಮದ್ ಸಿರಾಜ್ ಅವರು ಈ ಪಂದ್ಯದಲ್ಲೂ ಆಡುವ ಅವಕಾಶ ಪಡೆದಿದ್ದಾರೆ.
ಭಾರತ ತಂಡ ಇಂತಿದೆ
ಅಜಿಂಕ್ಯಾ ರಹಾನೆ(ನಾಯಕ), ರೋಹಿತ್ ಶರ್ಮಾ, ಶುಭ್ಮನ್ ಗಿಲ್, ಚೇತೇಶ್ವರ್ ಪೂಜಾರ, ಹನುಮ ವಿಹಾರಿ, ರಿಷಭ್ ಪಂತ್, ರವೀಂದ್ರ ಜಡೇಜಾ, ರವಿಚಂದ್ರನ್ ಅಶ್ವಿನ್, ಜಸ್ಪ್ರೀತ್ ಬುಮ್ರಾ, ಮೊಹಮ್ಮದ್ ಸಿರಾಜ್, ನವದೀಪ್ ಸೈನಿ.
NEWS – #TeamIndia announce Playing XI for the 3rd Test against Australia at the SCG.
— BCCI (@BCCI) January 6, 2021
Navdeep Saini is all set to make his debut.#AUSvIND pic.twitter.com/lCZNGda8UD