ಕಳೆದ 24 ಗಂಟೆಗಳಲ್ಲಿ 42,766 ಹೊಸ ಕೋವಿಡ್ ಪ್ರಕರಣ

ನವದೆಹಲಿ, ಜು. 10: ದೇಶದಲ್ಲಿ ಕಳೆದ 24 ಗಂಟೆಗಳಲ್ಲಿ 42,766 ಹೊಸ ಕೋವಿಡ್‌ ಪ್ರಕರಣಗಳು ವರದಿಯಾಗಿದ್ದು, ಈ ಮೂಲಕ ದೇಶದ ಒಟ್ಟು ಪ್ರಕರಣಗಳ ಸಂಖ್ಯೆ 3,07,95,716ಕ್ಕೆ ಏರಿಕೆಯಾಗಿದೆ. ಇದೇ ವೇಳೆ ಸಕ್ರಿಯ ಪ್ರಕರಣಗಳು 4,55,033ಕ್ಕೆ ಇಳಿಕೆಯಾಗಿದೆ ಎಂದು ಕೇಂದ್ರ ಆರೋಗ್ಯ ಸಚಿವಾಲಯವು ಶನಿವಾರ ತಿಳಿಸಿದೆ.

ಕಳೆದ 24 ಗಂಟೆಗಳಲ್ಲಿ 1,206 ಮಂದಿ ಮೃತಪಟ್ಟಿದ್ದಾರೆ. ಈ ಮೂಲಕ ಒಟ್ಟು ಮೃತರ ಸಂಖ್ಯೆ 4,07,145ಕ್ಕೆ ಹೆಚ್ಚಿದೆ. ಶುಕ್ರವಾರ 19,55,225 ಕೋವಿಡ್‌ ಪರೀಕ್ಷೆಗಳನ್ನು ನಡೆಸಲಾಗಿದ್ದು, ಈವರೆಗೆ 42,90,41,970 ಮಂದಿಯನ್ನು ಪರೀಕ್ಷಿಸಲಾಗಿದೆ. ದೇಶದಲ್ಲಿ ಪಾಸಿಟಿವಿಟಿ ದರವು ಶೇಕಡ 2.19ಕ್ಕೆ ಇಳಿಕೆಯಾಗಿದೆ. 2,99,33,538 ಮಂದಿ ಸೋಂಕಿನಿಂದ ಚೇತರಿಸಿಕೊಂಡಿದ್ದಾರೆ. ಮರಣ ದರವು ಶೇಕಡ 1.32ರಷ್ಟಿದೆ ಎಂದು ಸಚಿವಾಲಯವು ಹೇಳಿದೆ.

ದೇಶದಲ್ಲಿ ಈವರೆಗೆ 37.21 ಕೋಟಿ ಲಸಿಕೆಯ ಡೋಸ್‌ಗಳನ್ನು ವಿತರಿಸಲಾಗಿದೆ.

Exit mobile version