ಕೇರಳದಲ್ಲಿ ಶಿಗೆಲ್ಲಾ ಸೋಂಕಿನ ಅಬ್ಬರ
ಆಸ್ಪತ್ರೆಗಳು, ಶಾಲೆಗಳಲ್ಲಿ ವಿಶೇಷ ನಿಗಾ; ಸಾರ್ವಜನಿಕರಿಗೆ ಎಚ್ಚರಿಕೆ ಸಂದೇಶ (443 killed due to Shigella in Kerala)
ಕೋಯಿಕ್ಕೋಡ್-ವಯನಾಡ್ ಜಿಲ್ಲೆಗಳಲ್ಲಿ ಸೋಂಕಿನ ಲಕ್ಷಣ ಹೆಚ್ಚಳ, ಅಧಿಕಾರಿಗಳಿಂದ ಮುಂಜಾಗ್ರತಾ ಕ್ರಮ
Kerala: ಕೇರಳ ರಾಜ್ಯದಲ್ಲಿ ಶಿಗೆಲ್ಲಾ (Shigella) ಸೋಂಕಿನ ಹರಡುವಿಕೆ ಆರೋಗ್ಯ ಇಲಾಖೆಗೆ ಹೊಸ ಸವಾಲಾಗಿ ಪರಿಣಮಿಸಿದೆ. (443 killed due to Shigella in Kerala)
ವಯನಾಡ್ (Wayanad) ಹಾಗೂ ಕೋಯಿಕ್ಕೋಡ್ (Kozhikode) ಜಿಲ್ಲೆಗಳಲ್ಲಿ ಸೋಂಕಿನ ಲಕ್ಷಣಗಳು ವೇಗವಾಗಿ ಕಾಣಿಸಿಕೊಳ್ಳುತ್ತಿರುವ ಹಿನ್ನೆಲೆ ಸರ್ಕಾರ ಹೈ ಅಲರ್ಟ್ ಘೋಷಿಸಿದೆ.

ಈಗಾಗಲೇ ನಾಲ್ಕು ವರ್ಷದ ಮಗು ಸೋಂಕಿನಿಂದ ಮೃತಪಟ್ಟಿರುವುದು ಆತಂಕವನ್ನು ಮತ್ತಷ್ಟು ಹೆಚ್ಚಿಸಿದೆ.
ವೈದ್ಯಕೀಯ ಮೂಲಗಳ ಪ್ರಕಾರ, 443ಕ್ಕೂ ಹೆಚ್ಚು ಮಂದಿಯಲ್ಲಿ ಸೋಂಕಿನ ಲಕ್ಷಣಗಳು ಕಂಡುಬಂದಿದ್ದು, ಅವರಿಗೆ ವಿವಿಧ ಆಸ್ಪತ್ರೆಗಳಲ್ಲಿ ಚಿಕಿತ್ಸೆ ನೀಡಲಾಗುತ್ತಿದೆ.
ಸೋಂಕಿನ ಮೂಲ ಮತ್ತು ಹರಡುವಿಕೆಯ ಪ್ರಮಾಣವನ್ನು ಪತ್ತೆಹಚ್ಚಲು ಆರೋಗ್ಯ ಇಲಾಖೆ ತೀವ್ರ ನಿಗಾ ವಹಿಸಿದೆ.
ವಯನಾಡ್ ಜಿಲ್ಲೆಯ ಸುಲ್ತಾನ್ ಬತ್ತೇರಿ (Sultan Batteri) ವ್ಯಾಪ್ತಿಯ ನೆನ್ಮೇನಿ ಪಂಚಾಯತ್ ಹಾಗೂ ಸುತ್ತಮುತ್ತಲಿನ ಪ್ರದೇಶಗಳಲ್ಲಿ ಸೋಂಕು ಹೆಚ್ಚು ವ್ಯಾಪಿಸಿದೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ.
ಕಳೆದ ವಾರ ಸ್ಥಳೀಯ ಶಾಲೆಯ ವಿದ್ಯಾರ್ಥಿಗಳಲ್ಲಿ ವಾಂತಿ, ಜ್ವರ ಹಾಗೂ ಭೇದಿ ಕಾಣಿಸಿಕೊಂಡ ನಂತರ ವೈದ್ಯಕೀಯ ಪರೀಕ್ಷೆ ನಡೆಸಲಾಗಿತ್ತು.
ಈ ವೇಳೆ ಇಬ್ಬರು ಮಕ್ಕಳಲ್ಲಿ ಶಿಗೆಲ್ಲಾ ಸೋಂಕು ದೃಢಪಟ್ಟಿತ್ತು.
ಬಳಿಕ ವಿದ್ಯಾರ್ಥಿಗಳು ಸೇರಿದಂತೆ ನೂರಾರು ಜನರಲ್ಲಿ ಇದೇ ರೀತಿಯ ಲಕ್ಷಣಗಳು ಕಂಡುಬಂದ ಕಾರಣ ತುರ್ತು ಕ್ರಮಗಳನ್ನು ಕೈಗೊಳ್ಳಲಾಯಿತು.
ಪ್ರಸ್ತುತ 68 ಮಂದಿ ವಿವಿಧ ಆಸ್ಪತ್ರೆಗಳಲ್ಲಿ ದಾಖಲಾಗಿದ್ದು, ಹಲವರು ಚಿಕಿತ್ಸೆ ಪಡೆದು ಚೇತರಿಸಿಕೊಳ್ಳುತ್ತಿದ್ದಾರೆ.
ಇನ್ನೂ 163 ಮಂದಿಯನ್ನು ಆರೋಗ್ಯ ಇಲಾಖೆ ನಿಗಾದಲ್ಲಿಟ್ಟಿದ್ದು, ಅವರ ಆರೋಗ್ಯ ಸ್ಥಿತಿಯನ್ನು ನಿರಂತರವಾಗಿ ಪರಿಶೀಲಿಸಲಾಗುತ್ತಿದೆ.
ಸೋಂಕು ಮತ್ತಷ್ಟು ವ್ಯಾಪಿಸದಂತೆ ತಡೆಯಲು ಜಿಲ್ಲಾಡಳಿತ ಮತ್ತು ಆರೋಗ್ಯ ಇಲಾಖೆ ಜಂಟಿಯಾಗಿ ಹಲವು ಮುಂಜಾಗ್ರತಾ ಕ್ರಮಗಳನ್ನು ಜಾರಿಗೆ ತಂದಿವೆ.
ಶಾಲೆಗಳು, ಆಸ್ಪತ್ರೆಗಳು ಹಾಗೂ ಸಾರ್ವಜನಿಕ ಸ್ಥಳಗಳಲ್ಲಿ ಕಟ್ಟುನಿಟ್ಟಿನ ಸ್ವಚ್ಛತಾ ನಿಯಮಗಳನ್ನು ಪಾಲಿಸಲು ಸೂಚನೆ ನೀಡಲಾಗಿದೆ.
ವಿಶೇಷವಾಗಿ ಕುಡಿಯುವ ನೀರಿನ ಮೂಲಗಳ ಮೇಲೆ ಹೆಚ್ಚಿನ ಗಮನ ಹರಿಸಲಾಗುತ್ತಿದೆ.
ಎಲ್ಲಾ ಶಾಲೆಗಳಿಂದ ನೀರಿನ ಮಾದರಿಗಳನ್ನು ಸಂಗ್ರಹಿಸಿ ಪರೀಕ್ಷೆಗೆ ಕಳುಹಿಸಲಾಗಿದ್ದು, ಬಾವಿಗಳು ಹಾಗೂ ಸಾರ್ವಜನಿಕ ನೀರಿನ ಮೂಲಗಳಿಗೆ ಕ್ಲೋರಿನೇಷನ್(Chlorination) ಮಾಡುವ ಕಾರ್ಯ ಆರಂಭಿಸಲಾಗಿದೆ.
ಸೋಂಕಿನ ಮೂಲ ನೀರು ಅಥವಾ ಆಹಾರವಾಗಿರುವ ಸಾಧ್ಯತೆಯನ್ನು ಪರಿಶೀಲಿಸಲಾಗುತ್ತಿದೆ.
ಆಹಾರ ಸುರಕ್ಷತಾ ಇಲಾಖೆ ಕೂಡ ಜಿಲ್ಲಾದ್ಯಂತ ವಿಶೇಷ ತಪಾಸಣೆ ಆರಂಭಿಸಿದೆ. (443 killed due to Shigella in Kerala)
ಸ್ವಚ್ಛತೆ ನಿಯಮಗಳನ್ನು ಉಲ್ಲಂಘಿಸುವ ಹೋಟೆಲ್‌ಗಳು, ರಸ್ತೆಬದಿಯ ಆಹಾರ ಮಳಿಗೆಗಳು ಹಾಗೂ ಆಹಾರ ಮಾರಾಟಗಾರರ ವಿರುದ್ಧ ಕಠಿಣ ಕ್ರಮ ಕೈಗೊಳ್ಳುವುದಾಗಿ ಅಧಿಕಾರಿಗಳು ಎಚ್ಚರಿಕೆ ನೀಡಿದ್ದಾರೆ.
ಆರೋಗ್ಯ ಕೇಂದ್ರಗಳಲ್ಲಿ ಅಗತ್ಯ ಔಷಧಿಗಳ ದಾಸ್ತಾನು ಹೆಚ್ಚಿಸಲಾಗಿದ್ದು, ಸೋಂಕಿತರಿಗೆ ತಕ್ಷಣ ಚಿಕಿತ್ಸೆ ದೊರೆಯುವಂತೆ ವ್ಯವಸ್ಥೆ ಮಾಡಲಾಗಿದೆ.
ಆಸ್ಪತ್ರೆಯಿಂದ ಬಿಡುಗಡೆಯಾದ ರೋಗಿಗಳ ಆರೋಗ್ಯ ಸ್ಥಿತಿಯ ಮೇಲೂ ನಿರಂತರ ನಿಗಾ ಇಡಲಾಗುತ್ತಿದೆ.
ಕೆಲವು ಮಕ್ಕಳಲ್ಲಿ ರೋಗಲಕ್ಷಣಗಳು ಮರುಕಳಿಸಿರುವ ಕಾರಣ ವೈದ್ಯರು ಹೆಚ್ಚಿನ ಎಚ್ಚರಿಕೆ ವಹಿಸಲು ಸೂಚಿಸಿದ್ದಾರೆ.
ಇದರ ನಡುವೆ ಕೋಯಿಕ್ಕೋಡ್ ಜಿಲ್ಲೆಯಲ್ಲಿ ನಾಲ್ಕು ವರ್ಷದ ಮಗುವೊಂದು ಶಿಗೆಲ್ಲಾ ಸೋಂಕಿನಿಂದ ಮೃತಪಟ್ಟಿರುವುದು ರಾಜ್ಯದ ಮೊದಲ ಸಾವು ಎಂದು ಆರೋಗ್ಯ ಸಚಿವರು ತಿಳಿಸಿದ್ದಾರೆ.
ಈ ಘಟನೆ ಸಾರ್ವಜನಿಕರಲ್ಲಿ ಆತಂಕ ಮೂಡಿಸಿದರೂ, ಪರಿಸ್ಥಿತಿ ನಿಯಂತ್ರಣದಲ್ಲಿದೆ ಎಂದು ಅಧಿಕಾರಿಗಳು ಸ್ಪಷ್ಟಪಡಿಸಿದ್ದಾರೆ. (443 killed due to Shigella in Kerala)
ಸಾರ್ವಜನಿಕರು ಶುದ್ಧ ಕುಡಿಯುವ ನೀರನ್ನು ಮಾತ್ರ ಬಳಸಬೇಕು, ಕೈಗಳನ್ನು ನಿಯಮಿತವಾಗಿ ತೊಳೆಯಬೇಕು
ಹಾಗೂ ಜ್ವರ, ವಾಂತಿ ಅಥವಾ ಭೇದಿ ಲಕ್ಷಣಗಳು ಕಂಡುಬಂದರೆ ತಕ್ಷಣ ವೈದ್ಯರನ್ನು ಸಂಪರ್ಕಿಸಬೇಕು ಎಂದು ಆರೋಗ್ಯ ಇಲಾಖೆ ಮನವಿ ಮಾಡಿದೆ.
ಮುಂಜಾಗ್ರತಾ ಕ್ರಮಗಳನ್ನು ಕಟ್ಟುನಿಟ್ಟಾಗಿ ಪಾಲಿಸಿದರೆ ಸೋಂಕಿನ ಹರಡುವಿಕೆಯನ್ನು ಪರಿಣಾಮಕಾರಿಯಾಗಿ ನಿಯಂತ್ರಿಸಬಹುದು ಎಂಬ ವಿಶ್ವಾಸವನ್ನು ಸರ್ಕಾರ ವ್ಯಕ್ತಪಡಿಸಿದೆ.
ಇದನ್ನು ಓದಿ: https://vijayatimes.com/no-entry-without-id-card-to-pub/