ಬ್ರಿಸ್ಬೇನ್, ಜ. 16: ಅತಿಥೇಯ ಆಸ್ಟ್ರೇಲಿಯಾ ಹಾಗೂ ಪ್ರವಾಸಿ ಭಾರತ ನಡುವಿನ ನಾಲ್ಕನೇ ಟೆಸ್ಟ್ನ ಎರಡನೇ ದಿನದಾಟಕ್ಕೆ ಮಳೆ ಅಡ್ಡಿಯಾಯಿತು.
ಬ್ರಿಸ್ಬೇನ್ನ ಗಬ್ಬಾ ಅಂಗಳದಲ್ಲಿ 2ನೇ ದಿನದಾಟ ಆರಂಭಿಸಿದ ಆಸೀಸ್ 369 ರನ್ಗಳ ಮೊದಲ ಇನ್ನಿಂಗ್ಸ್ನಲ್ಲಿ ಆಲೌಟ್ ಆಯಿತು. ನಂತರ ಮೊದಲ ಇನ್ನಿಂಗ್ಸ್ ಆರಂಭಿಸಿದ
ಭಾರತ, ದಿನದಂತ್ಯಕ್ಕೆ 62 ರನ್ಗಳಿಗೆ 2 ವಿಕೆಟ್ ಕಳೆದುಕೊಂಡಿದೆ.
ಭಾರತದ ಪರ ಇನ್ನಿಂಗ್ಸ್ ಆರಂಭಿಸಿದ ಶುಭ್ಮನ್ ಗಿಲ್(7) ಬಹುಬೇಗನೆ ನಿರ್ಮಿಸಿದರು. ಆದರೆ ರೋಹಿತ್ ಶರ್ಮಾ(44) ಉತ್ತಮ ಬ್ಯಾಟಿಂಗ್ ಪ್ರದರ್ಶಿಸಿದರೂ, ಅರ್ಧಶತಕದ ಹೊಸ್ತಿಲಲ್ಲಿ ಎಡವಿದರು. ದಿನದ ಅಂತ್ಯಕ್ಕೆ ನಾಯಕ ರಹಾನೆ(2) ಹಾಗೂ ಪೂಜಾರ(7) ಬ್ಯಾಟಿಂಗ್ ಮುಂದುವರಿಸಿದರು. ಆದರೆ ಚಹಾ ವಿರಾಮದ ವೇಳೆಗೆ ಸುರಿದ ಮಳೆಯಿಂದಾಗಿ ದಿನದಾಟವನ್ನು ಅಂತ್ಯಗೊಳಿಸಲಾಯಿತು.
ಇದಕ್ಕೂ ಮುನ್ನ ದಿನದಾಟ ಆರಂಭಿಸಿದ ಆಸ್ಟ್ರೇಲಿಯಾ, 369 ರನ್ಗಳಿಗೆ ಆಲೌಟ್ ಆಯಿತು. ಭಾರತದ ಬೌಲರ್ಗಳ ಪೈಕಿ ವೇಗಿ ನಟರಾಜನ್, ಶಾರ್ದೂಲ್ ಠಾಕೂರ್ ಹಾಗೂ ಸ್ಪಿನ್ನರ್ ವಾಷಿಂಗ್ಟನ್ ಸುಂದರ್ ತಲಾ 3 ವಿಕೆಟ್ ಪಡೆದು ಮಿಂಚಿದರು.