• ಹೋಮ್
  • ವಿಜಯ ಟೈಮ್ಸ್‌
    • ಪ್ರಮುಖ ಸುದ್ದಿ
    • ರಾಜ್ಯ
    • ದೇಶ-ವಿದೇಶ
    • ರಾಜಕೀಯ
  • ಕವರ್‌ ಸ್ಟೋರಿ
  • ಲೈಫ್ ಸ್ಟೈಲ್
  • ಆರೋಗ್ಯ
  • ಕ್ರೀಡೆ
  • ಮನರಂಜನೆ
    • ವೈರಲ್ ಸುದ್ದಿ
Menu
  • ಹೋಮ್
  • ವಿಜಯ ಟೈಮ್ಸ್‌
    • ಪ್ರಮುಖ ಸುದ್ದಿ
    • ರಾಜ್ಯ
    • ದೇಶ-ವಿದೇಶ
    • ರಾಜಕೀಯ
  • ಕವರ್‌ ಸ್ಟೋರಿ
  • ಲೈಫ್ ಸ್ಟೈಲ್
  • ಆರೋಗ್ಯ
  • ಕ್ರೀಡೆ
  • ಮನರಂಜನೆ
    • ವೈರಲ್ ಸುದ್ದಿ
Vijaya Times logo
  • ಹೋಮ್
  • ವಿಜಯ ಟೈಮ್ಸ್‌
    • ಪ್ರಮುಖ ಸುದ್ದಿ
    • ರಾಜ್ಯ
    • ದೇಶ-ವಿದೇಶ
    • ರಾಜಕೀಯ
  • ಕವರ್‌ ಸ್ಟೋರಿ
  • ಲೈಫ್ ಸ್ಟೈಲ್
  • ಆರೋಗ್ಯ
  • ಕ್ರೀಡೆ
  • ಮನರಂಜನೆ
    • ವೈರಲ್ ಸುದ್ದಿ
Menu
  • ಹೋಮ್
  • ವಿಜಯ ಟೈಮ್ಸ್‌
    • ಪ್ರಮುಖ ಸುದ್ದಿ
    • ರಾಜ್ಯ
    • ದೇಶ-ವಿದೇಶ
    • ರಾಜಕೀಯ
  • ಕವರ್‌ ಸ್ಟೋರಿ
  • ಲೈಫ್ ಸ್ಟೈಲ್
  • ಆರೋಗ್ಯ
  • ಕ್ರೀಡೆ
  • ಮನರಂಜನೆ
    • ವೈರಲ್ ಸುದ್ದಿ
Visit Channel
Home ಪ್ರಮುಖ ಸುದ್ದಿ

ಕಬ್ಬನ್ ಪಾರ್ಕ್ ಅಭಿವೃದ್ಧಿಗೆ ಡಿಕೆ ಶಿವಕುಮಾರ್ 5 ಕೋಟಿ ರೂ. ಅನುದಾನ ಘೋಷಣೆ: ಹಸಿರು ಉಳಿವಿಗೆ ಬರಲಿದೆ ಹೊಸ ಯೋಜನೆಗಳು

Shwetha Mohan by Shwetha Mohan
in ಪ್ರಮುಖ ಸುದ್ದಿ, ರಾಜಕೀಯ, ರಾಜ್ಯ
ಕಬ್ಬನ್ ಪಾರ್ಕ್ ಅಭಿವೃದ್ಧಿಗೆ ಡಿಕೆ ಶಿವಕುಮಾರ್ 5 ಕೋಟಿ ರೂ. ಅನುದಾನ ಘೋಷಣೆ: ಹಸಿರು ಉಳಿವಿಗೆ ಬರಲಿದೆ ಹೊಸ ಯೋಜನೆಗಳು
0
SHARES
17
VIEWS
Share on FacebookShare on Twitter
  • ಕಬ್ಬನ್ ಪಾರ್ಕ್ ಅಭಿವೃದ್ಧಿಗೆ 5 ಕೋಟಿ ರೂ
  • ಯಾವುದೇ ಹೊಸ ನಿರ್ಮಾಣವಿಲ್ಲ ಹಸಿರು ಉಳಿಸುವತ್ತ, ಜನಸಾಮಾನ್ಯರ ಪಾಲ್ಗೊಳ್ಳುವತ್ತ ಸರ್ಕಾರದ ನೋಟ
  • ಸಿಸಿಟಿವಿ ಅಳವಡಿಕೆ, ಸಾಂಸ್ಕೃತಿಕ ವೇದಿಕೆ ನಿರ್ಮಾಣ ಮತ್ತು ಮರಗಳ ಸಂರಕ್ಷಣೆ ಪ್ರಥಮ ಆದ್ಯತೆ
ಕಬ್ಬನ್ ಪಾರ್ಕ್ ವ್ಯಾಪ್ತಿಯಲ್ಲಿ ಯಾವುದೇ ಹೊಸ ಕಟ್ಟಡ ನಿರ್ಮಾಣಕ್ಕೆ ಅವಕಾಶ ಇಲ್ಲ ಡಿಸಿಎಂ ಶಿವಕುಮಾರ್.

Bengaluru: ಬೆಂಗಳೂರು ನಗರದ ಹೃದಯಭಾಗದಲ್ಲಿರುವ ಪ್ರಸಿದ್ಧ ಕಬ್ಬನ್ ಪಾರ್ಕ್(Cubbon Park)ಪುನಶ್ಚೇತನಕ್ಕಾಗಿ ಉಪ ಮುಖ್ಯಮಂತ್ರಿ ಹಾಗೂ ಬೆಂಗಳೂರು ಅಭಿವೃದ್ಧಿ ಸಚಿವ ಡಿ.ಕೆ. ಶಿವಕುಮಾರ್ (D.K. Shivakumar)ಭರ್ಜರಿ ಘೋಷಣೆ ಮಾಡಿದ್ದಾರೆ. (5 crore for development of Cubbon Park)

ಭಾನುವಾರ ಸಾರ್ವಜನಿಕರೊಂದಿಗೆ ಸಂವಾದ ನಡೆಸಿದ ವೇಳೆ, ಕಬ್ಬನ್ ಪಾರ್ಕ್ ಅಭಿವೃದ್ಧಿಗೆ 5 ಕೋಟಿ ರೂ.

ಅನುದಾನವನ್ನು ನೀಡುವುದಾಗಿ ಅವರು ಪ್ರಕಟಿಸಿದರು.ಶಿವಕುಮಾರ್ ಅವರು ಕಬ್ಬನ್ ಪಾರ್ಕ್ ಹಾಗೂ ಲಾಲ್‌ಬಾಗ್ (Lalbagh) ಎರಡನ್ನೂ “ಬೆಂಗಳೂರಿನ ಅವಳಿ ಶ್ವಾಸಕೋಶಗಳು” ಎಂದು ವರ್ಣಿಸಿ, ನಗರದಲ್ಲಿ ಹಸಿರು ಉಳಿಸುವುದು ಸರ್ಕಾರದ ಪ್ರಮುಖ ಗುರಿಯಾಗಿದೆ ಎಂದು ಹೇಳಿದರು.

ಕಬ್ಬನ್ ಪಾರ್ಕ್‌ನ ನೈಸರ್ಗಿಕ ಸೌಂದರ್ಯ, ಪರಿಸರ ಸಮತೋಲನ ಹಾಗೂ ಸಾರ್ವಜನಿಕರಿಗೆ ವಿಶ್ರಾಂತಿಯ ಸ್ಥಳ ಎಂಬ ಅಂಶಗಳನ್ನು ಕಾಪಾಡಿಕೊಂಡೇ ಅಭಿವೃದ್ಧಿ ಕ್ರಮ ಕೈಗೊಳ್ಳಲಾಗುವುದು ಎಂದು ಭರವಸೆ ನೀಡಿದರು.

ಇನ್ನು ಈ ಸಂದರ್ಭದಲ್ಲಿ ಮುಂದಿನ ದಿನಗಳಲ್ಲಿ ಕಬ್ಬನ್ ಪಾರ್ಕ್ ವ್ಯಾಪ್ತಿಯಲ್ಲಿ ಯಾವುದೇ ಹೊಸ ಕಟ್ಟಡ ನಿರ್ಮಾಣಕ್ಕೆ ಅವಕಾಶ ನೀಡುವುದಿಲ್ಲ ಎಂದು ಡಿಕೆ ಶಿವಕುಮಾರ್ ಸ್ಪಷ್ಟಪಡಿಸಿದ್ದಾರೆ.

ಈ ಪ್ರದೇಶದ ಮೂಲ ಹಸಿರು ಸ್ವರೂಪಕ್ಕೆ ಯಾವುದೇ ಹಾನಿಯಾಗಬಾರದು. ಉದ್ಯಾನವನದ ಆಕರ್ಷಕತೆ ಮತ್ತು ಪರಿಸರದ ಸಮತೋಲನ ಉಳಿಸಿಕೊಳ್ಳುವುದು ನಮ್ಮ ಮೊದಲ ಆದ್ಯತೆ ಎಂದು ಹೇಳಿದ್ದಾರೆ.(5 crore for development of Cubbon Park)

ಅವರು ತೋಟಗಾರಿಕೆ ಇಲಾಖೆ ಮತ್ತು ಬೆಂಗಳೂರು ಅಭಿವೃದ್ಧಿ ಪ್ರಾಧಿಕಾರ (ಬಿಡಿಎ)(BDA) ಸಹಯೋಗದೊಂದಿಗೆ ಪಾರ್ಕ್ ಅಭಿವೃದ್ಧಿ ಕೈಗೊಳ್ಳಲಾಗುವುದು ಎಂದು ತಿಳಿಸಿದರು.

ಅಲ್ಲದೆ, ಕಬ್ಬನ್ ಪಾರ್ಕ್ ಮತ್ತು ಲಾಲ್‌ಬಾಗ್ ಮಾದರಿಯಲ್ಲಿ ನಗರದ ಇತರ ಭಾಗಗಳಲ್ಲಿಯೂ “ಟ್ರೀ ಪಾರ್ಕ್‌”ಗಳನ್ನು ಸ್ಥಾಪಿಸುವ ಯೋಜನೆಯನ್ನೂ ಪ್ರಕಟಿಸಿದರು.

ಹಸಿರು ಪ್ರದೇಶಗಳನ್ನು ವಿಸ್ತರಿಸಲು ಮರಗಳನ್ನು ಕಡಿಯುವ ಅಗತ್ಯವಿಲ್ಲ, ಬದಲಿಗೆ ನವೀಕರಿಸಿದ ರೀತಿಯಲ್ಲಿ ವಿಸ್ತರಣೆ ಮಾಡಬಹುದು, ಎಂದು ಹೇಳಿದ್ದಾರೆ.

ಮುಂದಿನ ದಿನಗಳಲ್ಲಿ ಉದ್ಯಾನವನದ ಸುರಕ್ಷತೆ ಮತ್ತು ಶಿಸ್ತಿನ ದೃಷ್ಟಿಯಿಂದ ಕಬ್ಬನ್ ಪಾರ್ಕ್‌ನಾದ್ಯಂತ ಸಿಸಿಟಿವಿ ಕ್ಯಾಮೆರಾ (CCTV Camera)ಗಳನ್ನು ಅಳವಡಿಸಲಾಗುವುದು ಎಂದು ಶಿವಕುಮಾರ್ ಘೋಷಿಸಿದರು.

ಈ ಕ್ಯಾಮೆರಾಗಳನ್ನು ನೇರವಾಗಿ ಆಯುಕ್ತರ ಕಚೇರಿಯ ನಿಗಾವ್ಯವಸ್ಥೆಗೆ ಸಂಪರ್ಕಿಸಲಾಗುವುದು. ಅದರಿಂದಾಗಿ ರಿಯಲ್‌ ಟೈಮ್ ಮಾನಿಟರಿಂಗ್ ವ್ಯವಸ್ಥೆಯಿಂದ ಸುರಕ್ಷತೆ ಸುಧಾರಣೆಯಾಗುತ್ತದೆ.

330 ಎಕರೆಯಷ್ಟು ವ್ಯಾಪ್ತಿಯಿದ್ದ ಕಬ್ಬನ್ ಪಾರ್ಕ್ ಈಗ 196 ಎಕರೆಯಷ್ಟೇ ಉಳಿದಿದೆ. ಅತಿಕ್ರಮಣ ಮತ್ತು ಸುತ್ತಮುತ್ತಲಿನ ಅಭಿವೃದ್ಧಿ ಚಟುವಟಿಕೆಗಳಿಂದ ಉದ್ಯಾನವನದ ಪ್ರದೇಶ ಸೀಮಿತವಾಗುತ್ತಿದೆ ಈ ಸಮಸ್ಯೆಗೆ ಶಾಶ್ವತ ಪರಿಹಾರ ಕಂಡುಕೊಳ್ಳಲು ಕ್ರಮ ಕೈಗೊಳ್ಳಲಾಗುವುದೆಂದು ಅವರು ಭರವಸೆ ನೀಡಿದರು.

ಕಬ್ಬನ್ ಪಾರ್ಕ್ ಆವರಣದಲ್ಲಿರುವ ಕರ್ನಾಟಕ ಹೈಕೋರ್ಟ್(High Court of Karnataka) ಕಟ್ಟಡ ಸ್ಥಳಾಂತರದ ಕುರಿತು ನಡೆಯುತ್ತಿರುವ ಚರ್ಚೆಯನ್ನೂ ಡಿಕೆ ಶಿವಕುಮಾರ್ ಪ್ರಸ್ತಾಪಿಸಿ ಹೈಕೋರ್ಟ್ ಕಟ್ಟಡವನ್ನು ರೇಸ್ ಕೋರ್ಸ್ ಪ್ರದೇಶಕ್ಕೆ ಸ್ಥಳಾಂತರಿಸಲು ಕೆಲವರಿಂದ ಸಲಹೆ ಬಂದಿದೆ.

ಆದರೆ ಇದು ಕಾನೂನು ಮತ್ತು ಆಡಳಿತಾತ್ಮಕ ಅಡಚಣೆಗಳೊಂದಿಗೆ ಬರುವ ವಿಷಯವಾಗಿದೆ. ಹೈಕೋರ್ಟ್ ಐತಿಹಾಸಿಕ ಕಟ್ಟಡವಾಗಿರುವುದರಿಂದ, ಯಾವುದೇ ನಿರ್ಧಾರ ಕೈಗೊಳ್ಳುವ ಮೊದಲು ನ್ಯಾಯಾಂಗದೊಂದಿಗೆ ಸಮಾಲೋಚನೆ ಅಗತ್ಯ ಎಂದು ಹೇಳಿದ್ದಾರೆ.

Tags: congreesCubbon parkDCM DK shivakumardevelopment

Related News

ಸ್ಕ್ವಾಷ್ ವಿಶ್ವಕಪ್; ಹಾಂಗ್‌ಕಾಂಗ್‌ ವಿರುದ್ಧ ಗೆದ್ದು ಬೀಗಿದ ಭಾರತ
Sports

ಸ್ಕ್ವಾಷ್ ವಿಶ್ವಕಪ್; ಹಾಂಗ್‌ಕಾಂಗ್‌ ವಿರುದ್ಧ ಗೆದ್ದು ಬೀಗಿದ ಭಾರತ

December 15, 2025
ಬೆಂಗಳೂರು ಜನತೆಗೆ ಜಲಮಂಡಳಿಯಿಂದ ಗುಡ್ ನ್ಯೂಸ್: ಜನವರಿಯಿಂದ ಒನ್ ಟೈಮ್ ಸೆಟಲ್‌ಮೆಂಟ್ ಜಾರಿ, ಫೈನ್ ಸಂಪೂರ್ಣ ಮನ್ನಾ
ಪ್ರಮುಖ ಸುದ್ದಿ

ಬೆಂಗಳೂರು ಜನತೆಗೆ ಜಲಮಂಡಳಿಯಿಂದ ಗುಡ್ ನ್ಯೂಸ್: ಜನವರಿಯಿಂದ ಒನ್ ಟೈಮ್ ಸೆಟಲ್‌ಮೆಂಟ್ ಜಾರಿ, ಫೈನ್ ಸಂಪೂರ್ಣ ಮನ್ನಾ

December 15, 2025
ಕೋಲ್ಕತ್ತಾ ಸ್ಟೇಡಿಯಂನಲ್ಲಿ ಮೆಸ್ಸಿ ಫ್ಯಾನ್ಸ್ ದಾಂಧಲೆ:ಮೆಸ್ಸಿ ಮೇನಿಯಾ ಅವ್ಯವಸ್ಥೆಯಿಂದ ಅಂತ್ಯ
ದೇಶ-ವಿದೇಶ

ಕೋಲ್ಕತ್ತಾ ಸ್ಟೇಡಿಯಂನಲ್ಲಿ ಮೆಸ್ಸಿ ಫ್ಯಾನ್ಸ್ ದಾಂಧಲೆ:ಮೆಸ್ಸಿ ಮೇನಿಯಾ ಅವ್ಯವಸ್ಥೆಯಿಂದ ಅಂತ್ಯ

December 13, 2025
ಪ್ರತಿ ತಿಂಗಳು ಹೂಡಿಕೆ ಮಾಡುವ SIP ನ ಅಸಲಿ ಸತ್ಯ
ಪ್ರಮುಖ ಸುದ್ದಿ

ಪ್ರತಿ ತಿಂಗಳು ಹೂಡಿಕೆ ಮಾಡುವ SIP ನ ಅಸಲಿ ಸತ್ಯ

December 13, 2025

ವಿಜಯ ಟೈಮ್ಸ್‌ - ಬದಲಾವಣೆಯ ಹಾದಿ

Vijaya Times logo

ವಿಜಯ ಟೈಮ್ಸ್‌

  • ಪ್ರಮುಖ ಸುದ್ದಿ
  • ರಾಜಕೀಯ
  • ದೇಶ-ವಿದೇಶ
  • ಮನರಂಜನೆ
  • ಪ್ರಮುಖ ಸುದ್ದಿ
  • ರಾಜಕೀಯ
  • ದೇಶ-ವಿದೇಶ
  • ಮನರಂಜನೆ

Quick Links

  • About Us
  • Contact Us
  • For Advertisement
  • Privacy policy
  • About Us
  • Contact Us
  • For Advertisement
  • Privacy policy

Follow Us

Facebook Twitter Instagram Youtube

Download Vijaya Times App

Android
© 2022 Vijaya Times. All rights reserved.
No Result
View All Result
  • ಹೋಮ್
  • ವಿಜಯ ಟೈಮ್ಸ್‌
    • ಪ್ರಮುಖ ಸುದ್ದಿ
    • ರಾಜ್ಯ
    • ದೇಶ-ವಿದೇಶ
    • ರಾಜಕೀಯ
  • ಕವರ್‌ ಸ್ಟೋರಿ
  • ಲೈಫ್ ಸ್ಟೈಲ್
  • ಆರೋಗ್ಯ
  • ಕ್ರೀಡೆ
  • ಮನರಂಜನೆ
    • ವೈರಲ್ ಸುದ್ದಿ

© 2022 Vijaya Times. All Rights Reserved.