ಕುಡಿದ ಮತ್ತಿನಲ್ಲಿ ಹೋಟೆಲ್ ಸಿಬ್ಬಂದಿ ಮೇಲೆ ಹಲ್ಲೆಗೈದ 5 ದುಷ್ಕರ್ಮಿಗಳನ್ನು ಬಂಧಿಸಿದ ಬೆಂಗಳೂರು ಪೊಲೀಸ್!

Electronic City : ಬೆಂಗಳೂರು ನಗರದ ಎಲೆಕ್ಟ್ರಾನಿಕ್ ಸಿಟಿಯ(Electronic City) ರೆಸ್ಟೋರೆಂಟ್‌ಗೆ ನುಗ್ಗಿ ಹೋಟೆಲ್ ಸಿಬ್ಬಂದಿಯೊಂದಿಗೆ ಗಲಾಟೆ ನಡೆಸಿದ ಐವರು ದುಷ್ಕರ್ಮಿಗಳನ್ನು ಇಂದು ಬೆಂಗಳೂರು ಪೊಲೀಸರು(5 Drunk Created Brawl) ಬಂಧಿಸಿದ್ದಾರೆ.

ನವೆಂಬರ್ 30ರ ಬುಧವಾರ ರಾತ್ರಿ ಈ ಘಟನೆ ನಡೆದಿದ್ದು, ಘಟನೆ ನಡೆಯುವ ಸ್ಥಳದಲ್ಲಿದ್ದ ಅನಾಮಧೇಯ ವ್ಯಕ್ತಿ ಇಡೀ ಗಲಾಟೆಯ ಸಂದರ್ಭವನ್ನು ಮೊಬೈಲ್ ನಲ್ಲಿ ಸೆರೆಹಿಡಿದು ಟ್ವೀಟರ್ ನಲ್ಲಿ ಹಂಚಿಕೊಂಡಿದ್ದಾರೆ.

ಈ ಒಂದು ವೀಡಿಯೋ ಸಾಮಾಜಿಕ ಜಾಲತಾಣದಲ್ಲಿ ಭಾರಿ ವೈರಲ್(5 Drunk Created Brawl) ಆಗಿದೆ.

ಬೆಂಗಳೂರಿನ ಎಲೆಕ್ಟ್ರಾನಿಕ್ ಸಿಟಿಯಲ್ಲಿರುವ ವಿಲೇಜ್ ರೆಸ್ಟೋರೆಂಟ್ ಹೆಸರಿನ ಹೋಟೆಲ್‌ನಲ್ಲಿ ಬುಧವಾರ ರಾತ್ರಿ 11.30ರ ಸುಮಾರಿಗೆ ಈ ಘಟನೆ ಸಂಭವಿಸಿದೆ ಎನ್ನಲಾಗಿದೆ.

ರಾತ್ರಿ 11.20ಕ್ಕೆ ಹೋಟೆಲ್‌ಗೆ ನುಗ್ಗಿದ ಗ್ಯಾಂಗ್, ತಮಗೆ ಊಟ ನೀಡುವಂತೆ ಒತ್ತಾಯಿಸಿದ್ದಾರೆ.

ಇದನ್ನೂ ಓದಿ : https://vijayatimes.com/jds-is-hope-says-hdk/

ಆದ್ರೆ, ಅಲ್ಲಿ ಕೆಲಸ ಮಾಡುವ ಸಿಬ್ಬಂದಿ ಆಹಾರ ನೀಡಲು ಸಮಯ ಮುಗಿದಿದೆ, ಹೀಗಾಗಿ ನಾವು ಆಹಾರ ಒದಗಿಸಲು ಅಸಾಧ್ಯ ಎಂದು ಹೇಳಿದ್ದಾರೆ.

ಆಹಾರ ಕೊಡಲು ಇಲ್ಲ ಎಂದು ಹೇಳಿದರು ಎಂಬ ಒಂದೇ ಕಾರಣಕ್ಕೆ ಹೋಟೆಲ್ ಸಿಬ್ಬಂದಿ ಮೇಲೆ ಮನಬಂದಂತೆ ಗ್ಯಾಂಗ್ ನಲ್ಲಿದ್ದ ಐವರು ಏಕಾಏಕಿ ಹಲ್ಲೆಗೈದಿದ್ದಾರೆ.

ಕುಪಿತಗೊಂಡ ಐವರು ದುಷ್ಕರ್ಮಿಗಳು ಹೋಟೆಲ್ ಸಿಬ್ಬಂದಿಯವರೊಡನೆ ವಾಗ್ವಾದ ನಡೆಸಿದ್ದಾರೆ. ಈ ಗಲಾಟೆಯೂ ಕುಡಿದ ಮತ್ತಿನಲ್ಲಿದ್ದ ಗ್ಯಾಂಗ್ ಮತ್ತು ಹೋಟೆಲ್ ಸಿಬ್ಬಂದಿಗಳ ನಡುವೆ ತೀವ್ರ ಹೊಡೆದಾಟಕ್ಕೆ ತಿರುಗಿದೆ.

ಗಲಾಟೆ ಉಲ್ಬಣಗೊಂಡ ಬೆನ್ನಲ್ಲೇ ಸ್ಥಳದಲ್ಲಿದ್ದ ಹಲವರು ತಮ್ಮ ಮೊಬೈಲ್ ಫೋನ್‌ಗಳಲ್ಲಿ ಘಟನೆಯನ್ನು ಚಿತ್ರೀಕರಿಸಲು ಪ್ರಾರಂಭಿಸಿದ್ದಾರೆ.

https://fb.watch/h7-_VdCbqp/

ಕುಡಿದ ಮತ್ತಿನಲ್ಲಿ ಮನಬಂದಂತೆ ವರ್ತಿಸಿ, ಹೋಟೆಲ್ ಸಿಬ್ಬಂದಿಯನ್ನು ಹಲ್ಲೆಗೈದ ಐವರನ್ನು ಪೊಲೀಸ್ ಅಧಿಕಾರಿಗಳು ಇಂದು ಬಂಧಿಸಿದ್ದಾರೆ.

ಆಗ್ನೇಯ ಬೆಂಗಳೂರಿನ ಉಪ ಪೊಲೀಸ್ ಆಯುಕ್ತರ ವರದಿಯ ಪ್ರಕಾರ, “ಹಲ್ಲೆಗೈದ ದುಷ್ಕರ್ಮಿಗಳ ವಿರುದ್ಧ ಕಠಿಣ ಕ್ರಮ ಮತ್ತು ವಿಲೇಜ್ ರೆಸ್ಟೋರೆಂಟ್‌ಗೆ ನುಗ್ಗಿದ ಅಪರಿಚಿತ ದುಷ್ಕರ್ಮಿಗಳ ವಿರುದ್ಧ ಎಫ್‌ಐಆರ್ ಕೂಡ ದಾಖಲಿಸಲಾಗಿದೆ.

ಇದನ್ನೂ ಓದಿ : https://vijayatimes.com/priyank-questions-bjp-govt/

ತನಿಖೆಯ ಆಧಾರದ ಮೇಲೆ ನಾವು ದುಷ್ಕರ್ಮಿಗಳನ್ನು ಗುರುತಿಸುವಲ್ಲಿ ಯಶಸ್ವಿಯಾಗಿದ್ದೇವೆ ಮತ್ತು ಅವರಲ್ಲಿ ಐವರನ್ನು ಬಂಧಿಸಿದ್ದೇವೆ. ತನಿಖೆ ಇನ್ನೂ ಮುಂದುವರೆದಿದೆ ಎಂದು ಮಾಹಿತಿ ನೀಡಿದ್ದಾರೆ.

Exit mobile version