Visit Channel

ಇಸ್ರೇಲ್ ನ ಧಾರ್ಮಿಕ ಉತ್ಸವದ ಕಾಲ್ತುಳಿತದಲ್ಲಿ ೪೪ ಮಂದಿ ಸಾವು

israel

ಇಸ್ರೇಲ್, ಮೇ. 01: ಇಲ್ಲಿ ನಡೆದ ಧಾರ್ಮಿಕ ಉತ್ಸವದಲ್ಲಿ ಕಾಲ್ತುಳಿತದಿಂದ 44ಕ್ಕೂ ಹೆಚ್ಚು ಜನರು ಸಾವನ್ನಪ್ಪಿದ್ದು, ಈ ಬಗ್ಗೆ ಅಲ್ಲಿನ ಮಾಧ್ಯಮಗಳು ವರದಿ ಮಾಡಿವೆ. ಇಸ್ರೇಲ್​ನಲ್ಲಿ ನಡೆಯುತ್ತಿದ್ದ ಬೋನ್​ಫೈರ್ ಫೆಸ್ಟಿವಲ್​ನಲ್ಲಿ ಕಾಲ್ತುಳಿತದಿಂದ 44ಕ್ಕೂ ಅಧಿಕ ಜನರು ಸಾವನ್ನಪ್ಪಿರುವುದು ದೊಡ್ಡ ದುರಂತ ಎಂದು ಇಸ್ರೇಲ್ ಪ್ರಧಾನಿ ಬೆಂಜಮಿನ್ ನೆಟನ್ಯಹು ಸಂತಾಪ ಸೂಚಿಸಿದ್ದಾರೆ.

ಇಸ್ರೇಲ್​ನ ಹಾರೆಟ್ಜ್ ಪತ್ರಿಕೆಯ ವರದಿ ಪ್ರಕಾರ, ಈ ದುರಂತದಲ್ಲಿ 44ಕ್ಕೂ ಹೆಚ್ಚು ಜನರು ಸಾವನ್ನಪ್ಪಿದ್ದು, ನೂರಾರು ಮಂದಿ ಗಾಯಗೊಂಡಿದ್ದಾರೆ. ಗಾಯಗೊಂಡವರನ್ನು ಆಸ್ಪತ್ರೆಗೆ ದಾಖಲಿಸಲಾಗಿದೆ. ಧಾರ್ಮಿಕ ಉತ್ಸವ ನಡೆದ ಸ್ಥಳದಲ್ಲಿ 38 ಜನರು ಗಂಭೀರವಾಗಿ ಗಾಯಗೊಂಡಿದ್ದಾರೆ ಎಂದಿದೆ.

ಆ್ಯಂಬುಲೆನ್ಸ್​ ಮತ್ತು ಹೆಲಿಕಾಪ್ಟರ್ ಮೂಲಕ ಗಾಯಗೊಂಡವರನ್ನು ನಹಾರಿಯಾದಲ್ಲಿರುವ ಗಾಲಿಲಿ ಮೆಡಿಕಲ್ ಸೆಂಟರ್ ಹಾಗೂ ಸಫೆಸ್​ನಲ್ಲಿರುವ ಜೀವ್ ಆಸ್ಪತ್ರೆಗೆ ದಾಖಲಿಸಲಾಗಿದೆ.

Latest News

E-Shram Card
ಪ್ರಮುಖ ಸುದ್ದಿ

ಇ-ಶ್ರಮ ಕಾರ್ಡ್ ಉಪಯೋಗದ ಬಗ್ಗೆ ನಿಮಗೆ ತಿಳಿದಿಲ್ಲವೆ ?  

ಅಸಂಘಟಿತ ವಲಯದ ಕಾರ್ಮಿಕರಿಗೆ  ಸಂಪೂರ್ಣವಾಗಿ  ವೃತ್ತಿ ಮಾಹಿತಿ  ಮತ್ತು   ಸರ್ಕಾರದ  ಯೋಜನೆಗಳು  ಕಾರ್ಮಿಕರಿಗೆ ನೇರವಾಗಿ ತಲುಪಿಸುವ ,ಹಾಗೂ ದತ್ತಾಂಶ ಸಂಗ್ರಹಿಸುವ ಉದ್ದೇಶದಿಂದ 26  ಆಗಸ್ಟ್‌  2021 ರಂದು  ಕೇಂದ್ರ ಸರ್ಕಾರವು ಈ ಯೋಜನೆಯನ್ನು  ಜಾರಿಗೊಳಿಸಿದೆ. 

inflation
ದೇಶ-ವಿದೇಶ

ಅಗತ್ಯ ವಸ್ತುಗಳ ಬೆಲೆ ತಗ್ಗಿದ ಪರಿಣಾಮ: ಜುಲೈನಲ್ಲಿ ಚಿಲ್ಲರೆ ಹಣದುಬ್ಬರ ಶೇ.6.7 ಇಳಿಕೆ ನಿರೀಕ್ಷೆ

ಅಂದು 100 ರೂಪಾಯಿಗೆ ಖರೀದಿಸುವ ಸಾಮಾನು ಈಗ 500 ಕೊಟ್ಟರು ಬರುವುದಿಲ್ಲ. ಕಾರಣ ಹಣದ ಮೌಲ್ಯ ಕಡಿಮೆಯಾಗಿದೆ, ಈ ಹಣದ ಮೌಲ್ಯ ಕಡಿಮೆಯಾಗಿರುವುದನ್ನೇ ನಾವು ಹಣದುಬ್ಬರ ಎನ್ನುತ್ತೇವೆ.