- 2025-26ನೇ ಶೈಕ್ಷಣಿಕ ವರ್ಷಕ್ಕೆ 51 ಸಾವಿರ ಅತಿಥಿ ಶಿಕ್ಷಕರ ನೇಮಕಕ್ಕೆ ಸರ್ಕಾರ ಒಪ್ಪಿಗೆ (51000 guest teachers for govt school)
- ಪ್ರಾಥಮಿಕ ಶಾಲೆಗಳಿಗೆ 40 ಸಾವಿರ, ಪ್ರೌಢಶಾಲೆಗಳಿಗೆ 11 ಸಾವಿರ ಅತಿಥಿ ಶಿಕ್ಷಕರನ್ನು ನೇಮಿಸಿಕೊಳ್ಳಲು ಸೂಚನೆ
- ಮಕ್ಕಳು ಗುಣಮಟ್ಟದ ಶಿಕ್ಷಣ ಪಡೆದುಕೊಳ್ಳುವಂತೆ ನೋಡಿಕೊಳ್ಳುವುದು ನಮ್ಮ ಆದ್ಯತೆ ಎಂದ ಸಚಿವ ಮಧು ಬಂಗಾರಪ್ಪ
Bengaluru: ಸರ್ಕಾರಿ ಶಾಲೆಗಳಲ್ಲಿ (Government Schools) ಶಿಕ್ಷಕರ ಕೊರತೆ ನೀಗಿಸಲು ರಾಜ್ಯದ ಸರ್ಕಾರಿ (State Govt) ಪ್ರಾಥಮಿಕ ಹಾಗೂ ಪ್ರೌಢಶಾಲೆಗಳಿಗೆ ತಾತ್ಕಾಲಿಕವಾಗಿ ಅತಿಥಿ ಶಿಕ್ಷಕರ (Guest Lecture) ನೇಮಕಕ್ಕೆ ಸರ್ಕಾರ ಆದೇಶ ಹೊರಡಿಸಿದೆ.ಪ್ರಾಥಮಿಕ ಶಾಲೆಗಳಿಗೆ 40 ಸಾವಿರ, ಪ್ರೌಢಶಾಲೆಗಳಿಗೆ (High School) 11 ಸಾವಿರ ಅತಿಥಿ ಶಿಕ್ಷಕರನ್ನು (Guest teachers) ನೇಮಿಸಿಕೊಳ್ಳಲು ನಿರ್ಧರಿಸಲಾಗಿದೆ.
ಮೇ 29 ರಂದು ಹೊಸ ಶೈಕ್ಷಣಿಕ ವರ್ಷ (Academic year) ಪ್ರಾರಂಭವಾದಾಗುತ್ತಿರುವ ಹಿನ್ನೆಲೆಯಲ್ಲಿ ಸರ್ಕಾರಿ ಪ್ರಾಥಮಿಕ ಮತ್ತು ಪ್ರೌಢಶಾಲೆಗಳು ನಿಗದಿತ ಸಮಯಕ್ಕೆ ಪುನರಾರಂಭವಾಗುವಂತೆ ಮತ್ತು ಸುಗಮವಾಗಿ ಕಾರ್ಯನಿರ್ವಹಿಸುವಂತೆ ನೋಡಿಕೊಳ್ಳುವ ಉದ್ದೇಶದಿಂದ ಸರ್ಕಾರ ನೇಮಕಕ್ಕೆ (Govt Recruitment) ಮುಂದಾಗಿದೆ.

ಈ ಹಂಚಿಕೆಯು ರಾಜ್ಯದ ಮೂಲಭೂತ (Basic) ಮತ್ತು ಮಾಧ್ಯಮಿಕ ಶಿಕ್ಷಣದ (Secondary education) ಹಂತಗಳನ್ನು ಬಲಪಡಿಸುವ ಉದ್ದೇಶ ಹೊಂದಿದೆ. ನೇಮಕಾತಿಗಳು ತಾತ್ಕಾಲಿಕ (Temporary) ಸ್ವರೂಪದ್ದಾಗಿರುತ್ತವೆ, ನಿಯಮಿತ ಶಿಕ್ಷಕರನ್ನು ನೇಮಕ ಮಾಡಿಕೊಳ್ಳುವವರೆಗೆ ಅಥವಾ ಶೈಕ್ಷಣಿಕ ವರ್ಷದ (Academic year) ಅಂತ್ಯದವರೆಗೆ ಇರುತ್ತದೆ.
ಬೋಧನಾ ಸಿಬ್ಬಂದಿಯಲ್ಲಿನ ತಕ್ಷಣದ ಅಂತರವನ್ನು ಕಡಿಮೆ ಮಾಡಲು ಮತ್ತು ಶಿಕ್ಷಕರ ಕೊರತೆಯಿಂದಾಗಿ (Due to lack of teachers) ನಮ್ಮ ವಿದ್ಯಾರ್ಥಿಗಳು ತೊಂದರೆ ಅನುಭವಿಸದಂತೆ ನೋಡಿಕೊಳ್ಳಲು ಈ ನಿರ್ಧಾರವು ನಿರ್ಣಾಯಕವಾಗಿದೆ ಎಂದು ಕರ್ನಾಟಕ ಶಾಲಾ ಶಿಕ್ಷಣ (Karnataka School Education) ಮತ್ತು ಸಾಕ್ಷರತಾ ಸಚಿವ ಮಧು ಬಂಗಾರಪ್ಪ (Madhu Bangarappa) ಹೇಳಿದ್ದಾರೆ.
ಹೊಸ ಶೈಕ್ಷಣಿಕ ವರ್ಷದ (New academic year) ಮೊದಲ ದಿನದಿಂದಲೇ ಮಕ್ಕಳು ಗುಣಮಟ್ಟದ ಶಿಕ್ಷಣ ಪಡೆದುಕೊಳ್ಳುವಂತೆ ನೋಡಿಕೊಳ್ಳುವುದು ನಮ್ಮ ಆದ್ಯತೆಯಾಗಿದೆ (Preferred) ಎಂದು ಅವರು ಹೇಳಿದರು. ಈ 51,000 ಅತಿಥಿ ಶಿಕ್ಷಕರುಗಳ ಗೌರವಧನ ಪಾವತಿಗಾಗಿ ಅಗತ್ಯವಿರುವ ಅನುದಾನದ (Grant required) ವಿವರ ಹಾಗೂ ಅತಿಥಿ ಉಪನ್ಯಾಸಕರ ಜಿಲ್ಲಾ/ತಾಲೂಕುವಾರು ವಿವರಗಳ ಪ್ರಸ್ತಾವನೆಯನ್ನು ಸರ್ಕಾರಕ್ಕೆ (Government) ಸಲ್ಲಿಸುವಂತೆ ಇಲಾಖಾ ಆಯುಕ್ತರು, ಅಪರ ಆಯುಕ್ತರು ಮತ್ತು ನಿರ್ದೇಶಕರುಗಳಿಗೆ ಸೂಚಿಸಲಾಗಿದೆ.
ಇದನ್ನು ಓದಿ : http://ಹಾರ್ವರ್ಡ್ ವಿಶ್ವವಿದ್ಯಾಲಯಕ್ಕೆ ವಿದೇಶಿ ವಿದ್ಯಾರ್ಥಿಗಳ ಪ್ರವೇಶ ನಿಷೇಧ: ಸಾವಿರಾರು ವಿದ್ಯಾರ್ಥಿಗಳಿಗೆ ಸಂಕಷ್ಟ
ಸರ್ಕಾರಿ ಶಾಲೆಗಳಲ್ಲಿನ (Government schools) ಗುಣಮಟ್ಟ ಹೆಚ್ಚಿಸುವುದು ಹಾಗೂ ಎಲ್ಲರಿಗೂ ಶಿಕ್ಷಣ ಲಭ್ಯವಾಗುವುದು (51000 guest teachers for govt school) ನಮ್ಮ ಮೊದಲ ಆದ್ಯತೆ ಎಂದು ಶಾಲಾ ಶಿಕ್ಷಣ (School education) ಮತ್ತು ಸಾಕ್ಷರತಾ ಸಚಿವ ಮಧು ಬಂಗಾರಪ್ಪ ತಿಳಿಸಿದ್ದಾರೆ