ಮೆಕ್ಕಾಗೆ ಹಜ್ (Hajj to Mecca) ಯಾತ್ರೆಗೆಂದು ತೆರಳಿದ್ದವರ ಪೈಕಿ 550 ಮಂದಿ ಸಾವನ್ನಪ್ಪಿದ್ದಾರೆ ಎನ್ನುವ ಮಾಹಿತಿ ದೊರೆತಿದ್ದು, ಗರಿಷ್ಠ ಉಷ್ಣಾಂಶ (Maximum temperature) 50 ಡಿಗ್ರಿ ಸೆಲ್ಸಿಯಸ್ ದಾಟಿರುವುದರಿಂದ ತಾಪಮಾನ ಏರಿಕೆಯಿಂದಾಗಿ ಈ ಘಟನೆ ಸಂಭವಿಸಿದೆ. ಮೃತರಲ್ಲಿ ಬಹುತೇಕರು ಈಜಿಪ್ಟಿಯನ್ ಪ್ರಜೆಗಳು ಎಂದು ಹೇಳಲಾಗಿದೆ.
ಮುಸ್ಲಿಮರ ಪವಿತ್ರ ಯಾತ್ರಾ (Holy Pilgrimage of Muslims) ಸ್ಥಳ ಎಂದರೆ ಅದು ಮೆಕ್ಕಾ, (Mecca) ಸೌದಿ ಅರೇಬಿಯಾದ ಈ ನಗರ ಮೆಕ್ಕಾಗೆ ಹಜ್ ಯಾತ್ರೆ ಭಾಗವಾಗಿ ಸುಮಾರು 20 ಲಕ್ಷಕ್ಕೂ ಹೆಚ್ಚು ಮುಸ್ಲಿಮರು ವರ್ಷ ಭೇಟಿ ನೀಡುತ್ತಾರೆ. ಮೆಕ್ಕಾದಲ್ಲಿ ಗರಿಷ್ಠ ತಾಪಮಾನವು 50 ಡಿಗ್ರಿ ಸೆಲ್ಸಿಯಸ್ ತಲುಪಿದ್ದು, ಹಜ್ (Hajj) ಯಾತ್ರೆಗೆ ತೆರಳಿದ್ದ 550 ಮಂದಿ ಸಾವನ್ನಪ್ಪಿರುವ ಘಟನೆ ವರದಿಯಾಗಿದೆ. ಮುಸ್ಲಿಮರ ಪವಿತ್ರ ಯಾತ್ರೆ ಎಂದೇ ಕರೆಸಿಕೊಳ್ಳುವ ಹಜ್ ಯಾತ್ರೆ ಜೂನ್ 14ರಿಂದ ಪ್ರಾರಂಭವಾಗಿತ್ತು.

ವಿಶ್ವದ ಅತಿದೊಡ್ಡ ಧಾರ್ಮಿಕ ಕ್ಷೇತ್ರಗಳಲ್ಲಿ (religious fields) ಮೆಕ್ಕಾವೂ ಒಂದು. ಎಲ್ಲ ಮುಸ್ಲಿಮರು ಜೀವನದಲ್ಲಿ ಒಮ್ಮೆಯಾದರೂ ಮೆಕ್ಕಾ ಯಾತ್ರೆ ಕೈಗೊಳ್ಳಬೇಕು ಎಂಬ ಮಹದಾಸೆ ಹೊಂದಿರುತ್ತಾರೆ. ಮೃತಪಟ್ಟವರಲ್ಲಿ ಸಾಕಷ್ಟು ಮಂದಿ ಈಜಿಪ್ಟ್ ನಾಗರಿಕರು (Citizens of Egypt) ಎನ್ನಲಾಗಿದೆ, ಜೋರ್ಡಾನ್‌ನ ಕನಿಷ್ಠ 60 ಯಾತ್ರಿಕರು ಬಿಸಿಲಿನ ತಾಪದಿಂದ ಸಾವನ್ನಪ್ಪಿದ್ದಾರೆ. ಪ್ರತಿ ವರ್ಷವೂ ಹಜ್ ಯಾತ್ರೆಯ ಸಮಯದಲ್ಲಿ ತಾಪಮಾನವು 40 ಡಿಗ್ರಿ ಸೆಲ್ಸಿಯೆಸ್ನಷ್ಟಿರುತ್ತಿತ್ತು ಈ ಬಾರಿ ಭಾರಿ ಏರಿಕೆ ಕಂಡಿದೆ.
ಸೌದಿ ರಾಷ್ಟ್ರೀಯ (Saudi national) ಹವಾಮಾನ ಕೇಂದ್ರವು ಸೋಮವಾರ ಮೆಕ್ಕಾದ ಗ್ರ್ಯಾಂಡ್ ಮಸೀದಿಯಲ್ಲಿ ತಾಪಮಾನವು 51.8 ಡಿಗ್ರಿ ಸೆಲ್ಸಿಯಸ್ (125 ಫ್ಯಾರನ್‌ಹೀಟ್) ತಲುಪಿದೆ ಎಂದು ಹೇಳಿದೆ. ಇಲ್ಲಿನ ಮೂಲಸೌಕರ್ಯ ಅಭಿವೃದ್ಧಿಪಡಿಸಲು ಶತಕೋಟಿ ಡಾಲರ್‌ಗಳನ್ನು(Dollars) ಹೂಡಿಕೆ ಮಾಡಲಾಗಿದೆ. ಯಾತ್ರಾರ್ಥಿಗಳ ಯೋಗಕ್ಷೇಮಕ್ಕಾಗಿ ಸೌದಿ ಸರ್ಕಾರ ಎಲ್ಲ ಕ್ರಮಗಳನ್ನು ಕೈಗೊಂಡಿದೆ. ಆದರೂ 2015 ರಲ್ಲಿ ಇಲ್ಲಿ ಉಂಟಾದ ಕಾಲ್ತುಳಿತಕ್ಕೆ ಸುಮಾರು 2,400 ಕ್ಕೂ ಹೆಚ್ಚು ಯಾತ್ರಾರ್ಥಿಗಳು ಸಾವನ್ನಪ್ಪಿದ್ದರು.