ನವದೆಹಲಿ,ಜೂ.19: ಕೊರೊನಾ 2ನೇ ಅಲೆ ಇಳಿಕೆ ಕಾಣುತ್ತಿದ್ದು, ಕಳೆದ 24 ಗಂಟೆಯಲ್ಲಿ 60,753 ಹೊಸ ಕೊರೊನಾ ಕೇಸ್ಗಳು ದಾಖಲಾಗಿವೆ ಹಾಗೂ 1647 ಮಂದಿ ಸೋಂಕಿನಿಂದ ಮೃತಪಟ್ಟಿದ್ದಾರೆ ಎಂದು ಕೇಂದ್ರ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ ಮಾಹಿತಿ ನೀಡಿದೆ. ಒಂದೇ ದಿನದಲ್ಲಿ 97,743 ಜನರು ಕೊರೊನಾದಿಂದ ಚೇತರಿಸಿಕೊಂಡು ಆಸ್ಪತ್ರೆಗಳಿಂದ ಡಿಸ್ಚಾರ್ಜ್ ಆಗಿದ್ದಾರೆ. ಅಲ್ಲಿಗೆ ಇದುವರೆಗೆ ಗುಣಮುಖರಾದವರ ಸಂಖ್ಯೆ 2,86,78,390ಕ್ಕೆ ಏರಿಕೆಯಾಗಿದೆ. ಸದ್ಯ ದೇಶದಲ್ಲಿ ಕೊರೊನಾ ಚೇತರಿಕೆ ಪ್ರಮಾಣ ಶೇ.96.16ರಷ್ಟಿದೆ.
ಹಾಗೇ, ಒಂದೇ ದಿನದಲ್ಲಿ 1647 ಮಂದಿ ಸೋಂಕಿನಿಂದ ಮೃತಪಟ್ಟಿದ್ದು, ಅದರಲ್ಲಿ 648 ಸಾವು ಮಹಾರಾಷ್ಟ್ರದಿಂದ ಮತ್ತು 287 ತಮಿಳುನಾಡಿನಿಂದ ವರದಿಯಾಗಿದೆ. ಮತ್ತೊಂದೆಡೆ ಕೊರೊನಾ ಲಸಿಕೆ ಅಭಿಯಾನ ಕೂಡ ಭರದಿಂದ ಸಾಗುತ್ತಿದೆ. ಇದುವರೆಗೆ 27,23,88,783 ಮಂದಿಗೆ ಕೊರೊನಾ ಲಸಿಕೆ ನೀಡಲಾಗಿದೆ.