Agra: ಇತ್ತೀಚಿನ ದಿನಗಳಲ್ಲಿ ಅತ್ಯಾಚಾರದ ಪ್ರಕರಣಗಳು ಹೆಚ್ಚಾಗುತ್ತಿರುವ ಹಿನ್ನೆಲೆ ಕಠಿಣ ಕಾನೂನು ಕ್ರಮ ಜಾರಿಯಲ್ಲಿದ್ದರೂ ಪ್ರಕರಣಗಳ ಸಂಖ್ಯೆ ಮಾತ್ರ ಇಳಿಮುಖವಾಗಿಲ್ಲ. ಇದೀಗ ಆರು ವರ್ಷದ ಬಾಲಕಿಯ ಮೇಲೆ 11 ವರ್ಷದ ಬಾಲಕ ಅತ್ಯಾಚಾರವೆಸಗಿರುವ ಘಟನೆ ಉತ್ತರ ಪ್ರದೇಶದ (Uttar Pradesh) ಆಗ್ರಾದಲ್ಲಿ ನಡೆದಿದೆ.
ಬಾಲಕಿಯ ತಂದೆಯ ದೂರಿನ ಆಧಾರದ ಮೇಲೆ ಎಫ್ಐಆರ್ (FIR) ದಾಖಲಿಸಿ 4ನೇ ತರಗತಿ ವಿದ್ಯಾರ್ಥಿಯಾಗಿರುವ ಬಾಲಕನನ್ನು ಪೊಲೀಸರು ಕಸ್ಟಡಿಗೆ ತೆಗೆದುಕೊಂಡಿದ್ದಾರೆ. ಇನ್ನು ಬಾಲಕಿ ಸ್ಥಿತಿ ಚಿಂತಾಜನಕವಾಗಿದ್ದು, ಸ್ಥಳೀಯ ಆಸ್ಪತ್ರೆಯಲ್ಲಿ ಹೆಚ್ಚಿನ ಚಿಕಿತ್ಸೆ ನೀಡಲಾಗುತ್ತಿದೆ.
ಅಷ್ಟಕ್ಕೂ ಈ ಘಟನೆ ಏಪ್ರಿಲ್ (April) 8 ರಂದು ರಾತ್ರಿ 7:30 ರ ಸುಮಾರಿಗೆ ನಡೆದಿದ್ದು ಬಾಲಕಿ ಟ್ಯೂಷನ್ ಕ್ಲಾಸ್ ಮುಗಿಸಿ ಬರುವ ವೇಳೆಗೆ ಏನೂ ಅರಿಯದ ಆರು ವರ್ಷದ ಬಾಲಕಿಗೆ ಚಾಕಲೇಟ್ (Chocolate) ಆಸೆ ತೋರಿಸಿ ಬಾಲಕ ತನ್ನೊಂದಿಗೆ ನಿರ್ಜನ ಪ್ರದೇಶಕ್ಕೆ ಕರೆದೊಯ್ಯದು ಅತ್ಯಾಚಾರ (Rape) ವೆಸಗಿರುವುದು ತನಿಖೆಯ ವೇಳೆ ತಿಳಿದುಬಂದಿದೆ.
ಇನ್ನು ಬಾಲಕಿ ಮನೆಗೆ ಬರುವಷ್ಟರಲ್ಲಿ ಬಟ್ಟೆಯಲ್ಲಿ ರಕ್ತಸ್ರಾವ ಕಂಡು ಪೋಷಕರಿಗೆ ಅನುಮಾನ ಹುಟ್ಟಿಕೊಂಡಿದ್ದು, ವಿಚಾರಿಸಿದ ವೇಳೆ ಏನಾಯ್ತು ಎಂಬುದನ್ನು ಆಕೆ ಪೋಷಕರಿಗೆ ತಿಳಿಸಿದ್ದಾಳೆ. ಪರಿಚಯಸ್ಥ ಬಾಲಕನೇ ಆಗಿರುವ ಕಾರಣ ಪೋಷಕರು ಬಾಲಕನನ್ನು ಪೊಲೀಸರಿಗೆ ಒಪ್ಪಿಸಿದ್ದಾರೆ .ಘಟನೆ ಕುರಿತು ಮಾತನಾಡಿದ ಉಪ ಪೊಲೀಸ್ ಆಯುಕ್ತ (DCP) ಸುಕನ್ಯಾ ಶರ್ಮಾ ಬಾಲಕಿಯ ಸ್ಥಿತಿ ಚಿಂತಾಜನಕವಾಗಿದ್ದು, ಆರೋಪಿಯು ಪೊಲೀಸ್ ಠಾಣೆಯಲ್ಲಿದ್ದಾನೆ.
ಬಾಲಾಪರಾಧಿಯನ್ನು (Juvenile Delinquent) ಆದಷ್ಟು ಬೇಗ ನ್ಯಾಯಾಲಯಕ್ಕೆ ಹಾಜರುಪಡಿಸಲಾಗುವುದು. ವೈದ್ಯಕೀಯ ಪರೀಕ್ಷೆಯ ವೇಳೆ ಅತ್ಯಾಚಾರ ದೃಢಪಟ್ಟಿದ್ದು, ಲೈಂಗಿಕ ಅಪರಾಧಗಳಿಂದ ಮಕ್ಕಳ ರಕ್ಷಣೆ ಕಾಯ್ದೆಯಡಿ ಸೇರಿದಂತೆ ಕಾನೂನಿನ ವಿವಿಧ ಸೆಕ್ಷನ್ಗಳ ಅಡಿಯಲ್ಲಿ ಬಾಲಕನ ಮೇಲೆ ಕೇಸು ದಾಖಲಾಗಿದೆ. ನ್ಯಾಯಾಲಯಕ್ಕೆ ಹಾಜರುಪಡಿಸಿದ ನಂತರ ಆತನನ್ನು ಬಾಲಾಪರಾಧಿ ಗೃಹಕ್ಕೆ ಕಳುಹಿಸಲಾಗುವುದು ಎಂದಿದ್ದಾರೆ.