vijaya times advertisements
Visit Channel

7 ರಿಂದ 9ನೇ ತರಗತಿಯವರೆಗೆ ಪರೀಕ್ಷೆಯಿಲ್ಲದೆ ಪಾಸ್ : ಸುರೇಶ್ ಕುಮಾರ್ ಸ್ಪಷ್ಟನೆ

file78xhi50zwtsgiu25drm-1580167460

7 ರಿಂದ 9ನೇ ತರಗತಿವರೆಗೆ ಪರೀಕ್ಷೆಯಿಲ್ಲದೇ ವಿದ್ಯಾರ್ಥಿಗಳನ್ನು ಉತ್ತೀರ್ಣಗೊಳಿಸಲಾಗುವುದು. ಏಪ್ರಿಲ್ 14 ರ ನಂತರ ಎಸ್‌ಎಸ್‌ಎಲ್‌ಸಿ ಹಾಗೂ ಪಿಯುಸಿ ಇಂಗ್ಲೀಷ್ ಪರೀಕ್ಷೆ ನಡೆಸಲಾಗುತ್ತಿದ್ದು, ಆದಷ್ಟು ಬೇಗ ದಿನಾಂಕ ಪ್ರಕಟಿಸಲಾಗುವುದು ಎಂದು ಪ್ರಾಥಮಿಕ ಮತ್ತು ಪ್ರೌಢ ಶಾಲಾ ಶಿಕ್ಷಣ ಸಚಿವ ಸುರೇಶ್ ಕುಮಾರ್ ಸ್ಪಷ್ಟಪಡಿಸಿದ್ದಾರೆ.

ಎಸ್‌ಎಸ್‌ಎಲ್‌ಸಿ ಪರೀಕ್ಷಾ ವೇಳಾಪಟ್ಟಿ ಶೀಘ್ರದಲ್ಲಿಯೇ ಪ್ರಕಟಿಸಲಾಗುವುದು. ಎಸ್.ಎಸ್.ಎಲ್.ಸಿ ಪರೀಕ್ಷೆ ನಡೆಸಲಾಗುವುದು. ಏಪ್ರಿಲ್ 14ರ ನಂತರ ಎಸ್.ಎಸ್.ಎಲ್.ಸಿ ಪರೀಕ್ಷಾ ವೇಳಾಪಟ್ಟಿ ಪ್ರಕಟಿಸಲಾಗುವುದು. 7 ರಿಂದ 9ರವರೆಗೆ ಪರೀಕ್ಷೆಯಿಲ್ಲದೇ ವಿದ್ಯಾರ್ಥಿಗಳನ್ನು ಉತ್ತೀರ್ಣಗೊಳಿಸಲಾಗುವುದು. ಹಿಂದಿನ ಪರೀಕ್ಷೆಯ ಅಂಕಗಳ‌ನ್ನು ಪರೀಕ್ಷಿಸಿ ಪ್ರಥಮ ಪಿಯುಸಿ ವಿದ್ಯಾರ್ಥಿಗಳನ್ನು ಪಾಸ್ ಮಾಡಲಾಗುವುದು ಎಂದರು.

ಕೊರೊನಾ ಸೋಂಕಿನ ವಿರುದ್ಧ ಹೋರಾಡುವುದೂ ಒಂದು ಪರೀಕ್ಷೆಯಾಗಿದೆ. ಯಾರೂ ಮನೆಯಿಂದ ಹೊರಬರಬಾರದು. ಪ್ರತಿನಿತ್ಯ ಇನ್ನಷ್ಟು ಪುಸ್ತಕಗಳನ್ನು ಓದಿ ಹೆಚ್ಚಿನ ಜ್ಞಾನವನ್ನು ಪಡೆದುಕೊಳ್ಳಬೇಕು. ಮಕ್ಕಳ ಆತಂಕದ ಬಗ್ಗೆ ತಿಳಿದಿದ್ದು, ಸರ್ಕಾರ ಅವರ ಜೊತೆ ಯಾವಾಗಲೂ ಇರುವುದಾಗಿ ಸುರೇಶ್ ಕುಮಾರ್ ಭರವಸೆ ನೀಡಿದರು

7-9 ತರಗತಿಗಳಿಗೆ ಪರೀಕ್ಷೆ ನಡೆಸದೇ ಮುಂದಿನ ತರಗತಿಗೆ ತೇರ್ಗಡೆ ಮಾಡಲು‌ ನಿರ್ಧರಿಸಲಾಗಿದೆ. ಸಿಬಿಎಸ್‌ಸಿಗೆ , 7-9 ತರಗತಿಯವರೆಗೂ ಪರೀಕ್ಷೆಯಿಲ್ಲದೇ ವಿದ್ಯಾರ್ಥಿಗಳನ್ನು ಪಾಸ್ ಮಾಡಲಾಗುವುದು. ಯಾವುದೇ‌ ಷರತ್ತು ಇಲ್ಲದೇ ಉತ್ತೀರ್ಣಗೊಳಿಸಲಾಗುವುದು. 9ನೇ ತರಗತಿ ವಿದ್ಯಾರ್ಥಿಗಳು ಆಂತರಿಕ ಪರೀಕ್ಷೆಯ ಆಧಾರದ ಮೇಲೆ 10ನೇ ತರಗತಿಗೆ ತೇರ್ಗಡೆಗೊಳಿಸಲಾಗುವುದು. ಕಲಿಕೆಯಲ್ಲಿ ಹಿಂದಿರುವ ವಿದ್ಯಾರ್ಥಿಗಳು ರಜಾ ದಿನದಲ್ಲಿ ಓದಬೇಕು. ಶಾಲೆ ಆರಂಭವಾದಾಗ ಮತ್ತೆ ಪರೀಕ್ಷೆ ನಡೆಸಿ ಕಲಿಕಾ ಮಟ್ಟ ಪರೀಶೀಲಿಸಲು ನಿರ್ಧರಿಸಲಾಗಿದೆ ಎಂದರು.

Latest News

ಪ್ರಮುಖ ಸುದ್ದಿ

ದೆಹಲಿ ಮಹಾನಗರ ಪಾಲಿಕೆ ಚುನಾವಣೆ: ಜಯದ ಹಾದಿಯಲ್ಲಿ ಆಪ್

ಆಕ್ಸಿಸ್ ಮೈ ಇಂಡಿಯಾ ಎಕ್ಸಿಟ್ ಪೋಲೋ ಪ್ರಕಾರ ಬಿಜೆಪಿ 69 ರಿಂದ 91 ವಾರ್ಡ್ ಗಳಲ್ಲಿ ಗೆಲುವು ಸಾಧ್ಯತೆ ಹಾಗೂ ಕಾಂಗ್ರೆಸ್ 3 ರಿಂದ 7 ವಾರ್ಡ್ ಗಳಲ್ಲಿ ಗೆಲ್ಲುತ್ತದೆ ಎಂದು ಸಮೀಕ್ಷೆ ತಿಳಿಸಿದೆ

ಪ್ರಮುಖ ಸುದ್ದಿ

ಬೆಳಗಾವಿಯಲ್ಲಿ ಕಲ್ಲು ತೂರಾಟ ; ಪುಣೆಯಲ್ಲಿ ಕರ್ನಾಟಕ ಬಸ್‌ಗಳಿಗೆ ಮಸಿ ಬಳಿದ ಶಿವಸೇನಾ!

ಕರ್ನಾಟಕ-ಮಹಾರಾಷ್ಟ್ರ ಮುಖ್ಯಮಂತ್ರಿಗಳ ನಡುವಿನ ವಾಗ್ಸಮರ ಗಡಿ ಭಾಗದಲ್ಲಿ ಘರ್ಷಣಗೆ ಪ್ರಮುಖವಾಗಿದೆ. ಎಂ.ಇ.ಎಸ್ (M.E.S) ಪುಂಡರ ಹಾವಳಿ ಹೆಚ್ಚಾಗಿದ್ದು, ಕರ್ನಾಟಕ ರಾಜ್ಯದ ಬಸ್‌ಗಳನ್ನು ಅಡಗಟ್ಟಿ ಮಸಿ ಹಚ್ಚಿ ಆಕ್ರೋಶ ಹೊರಹಾಕಿದ್ದರು

ರಾಜಕೀಯ

ಬೆಳಗಾವಿಯಲ್ಲಿ ಭಾರೀ ಬಿಗಿ ಭದ್ರತೆ ಮಹಾರಾಷ್ಟ್ರ ಸಚಿವರ ಪ್ರವೇಶಕ್ಕೆ ನಿಷೇಧ

ಸರ್ಕಾರದ ಇಬ್ಬರು ಸಚಿವರು ಇಂದು ಬೆಳಗಾವಿಗೆ ಭೇಟಿ ನೀಡುವುದಾಗಿ ಹೇಳಿಕೆ ನೀಡಿರುವ ಕಾರಣ, ಮಹಾರಾಷ್ಟ್ರದ ಇಬ್ಬರು ಸಚಿವರು ಮತ್ತು ಒರ್ವ ಸಂಸದನಿಗೆ ಬೆಳಗಾವಿ ಪ್ರವೇಶಕ್ಕೆ ನಿಷೇಧ ಹೇರಲಾಗಿದೆ.