71 ಲಕ್ಷ ಗಡಿದಾಟಿದ ಕೋವಿಡ್‌ ಸೋಂಕಿತರ ಸಂಖ್ಯೆ

ನವದೆಹಲಿ: ದೇಶದಲ್ಲಿ ಕೊರೋನಾ ಅಬ್ಬರ ದಿನದಿಂದ ದಿನಕ್ಕೆ ಇಳಿಯುತ್ತಿದ್ದು, ಕಳೆದ 24 ಗಂಟೆಗಳಲ್ಲಿ ದೇಶದಲ್ಲಿ 66,732 ಪ್ರಕರಣಗಳು ಪತ್ತೆಯಾಗಿದ್ದು, ಒಟ್ಟು ಸೋಂಕಿತರ ಸಂಖ್ಯೆ 71 ಲಕ್ಷ ಗಡಿದಾಟಿದೆ.

ದೇಶದಲ್ಲಿ ಒಟ್ಟಾರೆ ಸೋಂಕಿತರ ಸಂಖ್ಯೆ 71,20,539ಕ್ಕೆ ತಲುಪಿದ್ದು, ಈ ಪೈಕಿ 61,49,536 ಮಂದಿ ಸೋಂಕಿನಿಂದ ಗುಣಮುಖರಾಗಿ ಆಸ್ಪತ್ರೆಯಿಂದ ಬಿಡುಗಡೆಗೊಂಡಿದ್ದಾರೆ. ಇನ್ನೂ ಭಾರತದಲ್ಲಿ 8,61,853 ಸಕ್ರಿಯ ಪ್ರಕರಣಗಳು ವಿವಿಧ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ ಎಂದು ತಿಳಿದು ಬಂದಿದೆ.

ಇನ್ನು ಕಳೆದ 24 ಗಂಟೆಗಳಲ್ಲಿ 816 ಮಂದಿ ಮಹಾಮಾರಿ ವೈರಸ್‌ಗೆ ಬಲಿಯಾಗಿದ್ದು, ಇದರೊಂದಿಗೆ ದೇಶದಲ್ಲಿ ಸಾವಿನ ಸಂಖ್ಯೆ 1,09,150ಕ್ಕೆ ತಲುಪಿದೆ ಎಂದು ಕೇಂದ್ರ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಸಚಿವಾಲಯ ಮಾಹಿತಿ ನೀಡಿದೆ.

ಈ ನಡುವೆ ದೇಶದಲ್ಲಿ ಕಳೆದ 24 ಗಂಟೆಗಳಲ್ಲಿ 9,94,851 ಸ್ಯಾಂಪಲ್ಸ್ ಗಳನ್ನು ಪರೀಕ್ಷೆಗೆ ಒಳಪಡಿಸಲಾಗಿದೆ. ದೇಶದಲ್ಲಿ ಈ ವರೆಗೂ 8,78,72,093 ಕೋವಿಡ್-19 ಪರೀಕ್ಷೆಗಳನ್ನು ನಡೆಸಲಾಗಿದೆ ಎಂದು ಭಾರತೀಯ ವೈದ್ಯಕೀಯ ಸಂಶೋಧನಾ ಸಂಸ್ಥೆ (ಐಸಿಎಂಆರ್) ತಿಳಿಸಿದೆ.

Exit mobile version