75 ಸಾಧಕ ಅರಣ್ಯ ಅಧಿಕಾರಿ-ಸಿಬ್ಬಂದಿಗಳಿಗೆ ಮುಖ್ಯಮಂತ್ರಿ ಪದಕ

ಬೆಂಗಳೂರು, ನ.10: ಕರ್ನಾಟಕ ಅರಣ್ಯ ಇಲಾಖೆಯಲ್ಲಿ ಅರಣ್ಯ ಸಂರಕ್ಷಣೆ, ಅಕ್ರಮ ಕಡಿತಲೆ, ವನ್ಯಜೀವಿ ಸಂರಕ್ಷಣೆ, ಅರಣ್ಯ ಪ್ರದೇಶವನ್ನು ಒತ್ತುವರಿದಾರರಿಂದ ತೆರವುಗೊಳಿಸುವುದು ಸೇರಿದಂತೆ ಇತರೆ ಕೆಲಸ ಕಾರ್ಯಗಳ ಮೂಲಕ ಸಾಧನೆ ಮಾಡಿದ  ಅಧಿಕಾರಿ-ಸಿಬ್ಬಂದಿಗಳನ್ನು ಆಯ್ಕೆ ಮಾಡುವಂತೆ 2017ರಲ್ಲಿ ಆದೇಶವನ್ನು ಜಾರಿಗೆ ತರಲಾಗಿತ್ತು.
ಅದರಂತೆ ಪ್ರತಿ ವರ್ಷ 25 ಅಧಿಕಾರಿ/ಸಿಬ್ಬಂದಿಗಳನ್ನೊಳಗೊಂಡಂತೆ 2017,2018,2019ರ ಸಾಲಿನಲ್ಲಿ 75 ಅಧಿಕಾರಿ ಸಿಬ್ಬಂದಿಗಳನ್ನು ಆಯ್ಕೆ ಮಾಡಲಾಗಿದ್ದು,  ಅವರಿಗೆ ನವೆಂಬರ್ 23 ರಂದು ವಿಧಾನಸೌಧದ ಬಾಂಕ್ವೆಟ್ ಹಾಲ್‍ನಲ್ಲಿ ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ಅವರು ಪ್ರಶಸ್ತಿ ಪ್ರದಾನ ಮಾಡಲಿದ್ದಾರೆ ಎಂದು ಪ್ರಧಾನ ಮುಖ್ಯ ಅರಣ್ಯ ಸಂರಕ್ಷಣಾಧಿಕಾರಿಗಳು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

Exit mobile version