ಭಾರತೀಯ ನೌಕಾಪಡೆಯ 8 ಮಾಜಿ ಸಿಬ್ಬಂದಿಗಳನ್ನು ಕತಾರ್ನಲ್ಲಿ (8Ex-Indian Navy Personnel Released) ಗೂಢಚರ್ಯೆ ಆರೋಪದ ಪ್ರಕರಣಕ್ಕೆ ಸಂಬಂಧಿಸಿದಂತೆ
ಬಂಧಿತರಾಗಿದ್ದ ಕತಾರ್ ನ್ಯಾಯಾಲಯವು ಬಿಡುಗಡೆ ಮಾಡಿದ್ದು, ಈ ಪೈಕಿ 7 ಮಂದಿ ಭಾರತಕ್ಕೆ ಮರಳಿದ್ದಾರೆ ಎಂದು ವಿದೇಶಾಂಗ ವ್ಯವಹಾರಗಳ ಸಚಿವಾಲಯ ತಿಳಿಸಿದೆ.
ಈ ಕುರಿತು ವಿದೇಶಾಂಗ ಸಚಿವಾಲಯವು ಅಧಿಕೃತ ಹೇಳಿಕೆಯನ್ನು ಹೊರಡಿಸಿದ್ದು, ಭಾರತೀಯ ನೌಕಾಪಡೆಯ ಮಾಜಿ ಸೈನಿಕರನ್ನು ಬಿಡುಗಡೆ ಮಾಡುವ ಕತಾರ್ ನ್ಯಾಯಾಲಯದ
ನಿರ್ಧಾರವನ್ನು ವಿದೇಶಾಂಗ (8Ex-Indian Navy Personnel Released) ಸಚಿವಾಲಯವು ಸ್ವಾಗತಿಸಿದೆ.
ವಿದೇಶಾಂಗ ಸಚಿವಾಲಯವು, ಈ ಹಿಂದೆ ಕತಾರ್ನಲ್ಲಿ ಮರಣದಂಡನೆ ಶಿಕ್ಷೆಗೆ (Death Penalty) ಗುರಿಯಾದ ಭಾರತೀಯ ನೌಕಾಪಡೆಯ ಮಾಜಿ ಸಿಬ್ಬಂದಿಗಳನ್ನು ಬಿಡುಗಡೆ ಮಾಡುವ
ಕತಾರ್ ನ್ಯಾಯಾಲಯದ ನಿರ್ಧಾರವನ್ನು ಸ್ವಾಗತಿಸುತ್ತೇವೆ. ಎಂಟು ಮಂದಿಯಲ್ಲಿ 7 ಮಂದಿ ಭಾರತಕ್ಕೆ ಮರಳಿದ್ದಾರೆ. ಈ ಪ್ರಜೆಗಳ ಬಿಡುಗಡೆ ಮತ್ತು ಮನೆಗೆ ಕಳುಹಿಸಲು ಕ್ರಮವಹಿಸಿದ
ಕತಾರ್ ರಾಜ್ಯದ ಅಮೀರ್ (Ameer) ಅವರ ನಿರ್ಧಾರವನ್ನು ನಾವು ಪ್ರಶಂಸಿಸುತ್ತೇವೆ ಎಂದು ತಿಳಿಸಿದೆ.
ಕತಾರ್ನಲ್ಲಿ ಸೆರೆಯಾಗಿದ್ದ ಒಟ್ಟು ಎಂಟು ಮಾಜಿ ಭಾರತೀಯ ನೌಕಾಪಡೆಯ ಅಧಿಕಾರಿಗಳ ಪೈಕಿ ಏಳು ಮಂದಿ ಭಾರತಕ್ಕೆ ಮರಳಿದ್ದಾರೆ. ಕೊನೆಯದಾಗಿ ಬಿಡುಗಡೆಯಾದ ಯೋಧನನ್ನು
ಮನೆಗೆ ಕರೆತರಲು ವ್ಯವಸ್ಥೆ ಮಾಡಲಾಗುತ್ತಿದೆ ಎಂದು ಸಚಿವಾಲಯ ತಿಳಿಸಿದೆ.
ಕತಾರ್ನ ಸಶಸ್ತ್ರ ಪಡೆಗಳು ಮತ್ತು ಭದ್ರತಾ ಏಜೆನ್ಸಿಗಳಿಗೆ (Agency) ತರಬೇತಿ ನೀಡುವ ಖಾಸಗಿ ಸಂಸ್ಥೆಯಾದ ಅಲ್ ದಹ್ರಾ ಗ್ಲೋಬಲ್ ಟೆಕ್ನಾಲಜೀಸ್ (Al Dahra Global
Technologies) ಮತ್ತು ಕನ್ಸಲ್ಟೆನ್ಸಿ ಸರ್ವಿಸಸ್ಗಾಗಿ ಕೆಲಸ ಮಾಡುತ್ತಿದ್ದ 8 ಮಂದಿ ಭಾರತೀಯ ನೌಕಾಪಡೆಯ ಮಾಜಿ ಅಧಿಕಾರಿಗಳನ್ನು ಕಳೆದ ವರ್ಷದ ಆಗಸ್ಟ್ನಲ್ಲಿ ಕತಾರ್
ಪೊಲೀಸರು ಬಂಧಿಸಿದ್ದರು.
ಇದನ್ನು ಓದಿ: ಪುದುಚೇರಿಯಲ್ಲಿ ಮಕ್ಕಳ ನೆಚ್ಚಿನ ‘ಬಾಂಬೆ ಮಿಠಾಯಿ’ ಬ್ಯಾನ್ !