ಆಗಸ್ಟ್‌ 23 ರಿಂದ 9 ರಿಂದ 12ನೇ ತರಗತಿಗಳು ಆರಂಭ!

ಬೆಂಗಳೂರು, ಆ. 13: ರಾಜ್ಯದಲ್ಲಿ 9 ರಿಂದ 12ನೇ ತರಗತಿವರೆಗಿನ ಭೌತಿಕ ತರಗತಿಗಳನ್ನು ತೆರೆಯಲು ಇಗಾಗಲೇ ಸಜ್ಜುಗೊಂಡಿದೆ ಎಂದು ಪ್ರಾಥಮಿಕ ಮತ್ತು ಪ್ರೌಢ ಶಿಕ್ಷಣ ಸಚಿವ ಬಿ. ಸಿ. ನಾಗೇಶ್ ತಿಳಿಸಿದ್ದಾರೆ.

ಈ ಬಗ್ಗೆ ಮಾತನಾಡಿದ ಅವರು ಕಳೆದ ಒಂದುವರೆ ವರ್ಷದಿಂದ ಕೊರೊನಾ ಸೊಂಕಿನಿಂದಾಗಿ ಶಾಲೆ ಮತ್ತು ಕಾಲೇಜುಗಳನ್ನು ತೆರೆಯಲು ಸಾಧ್ಯವಾಗಿರಲಿಲ್ಲ. ಆದರೆ ಇದೀಗ 23 ರಿಂದ 9 ರಿಂದ 12ನೇ ತರಗತಿವರೆಗಿನ ಭೌತಿಕ ತರಗತಿಗಳನ್ನು ತೆರೆಯಲು ಇಗಾಗಲೇ ತಜ್ಞರೊಂದಿಗೆ ಚರ್ಚಿಸಲಾಗಿದ್ದು ಮುಖ್ಯಮಂತ್ರಿಗಳು ಕೂಡ ಇದಕ್ಕೆ ಒಪ್ಪಿಗೆ ಸೂಚಿಸಿದ್ದಾರೆ ಎಂದು ತಿಳಿಸಿದರು.

ಈ ಕುರಿತು ಶಿಘ್ರದಲ್ಲೇ ಶಿಕ್ಷಣ ಇಲಾಖೆಯಿಂದ ಅಧಿಕೃತ ಪ್ರಕಟಣೆ ಹೊರಡಿಸಲಾಗುವುದು. ಇದರ ಜೊತೆ ಹಂತ ಹಂತವಾಗಿ ಪ್ರಾಥಮಿಕ ಶಾಲೆಗಳನ್ನು ಕೂಡ ಪ್ರಾರಂಭಿಸುವ  ಬಗ್ಗೆ ಚರ್ಚಿಸಲಾಗುವುದು ಎಂದು ಅವರು ಹೇಳಿದರು. ಹಾಗೆ ವಿದ್ಯಾರ್ಥಿಗಳು ಕೂಡ ಸಾಮಜಿಕ ಅಂತರ ಕಾಯ್ದುಕೊಂಡು ಮಾಸ್ಕ ಧರಿಸುವುದು ಕಡ್ಡಾಯವಾಗಿದೆ ಜೊತೆಗೆ ಶಾಲೆಗಳು ಕೂಡ ಕೊರೊನಾ ಮಾರ್ಗಸೂಚಿಗಳನ್ನು ಪಾಲಿಸಬೇಕು ಎಂದು ತಿಳಿಸಿದರು..

ಮಕ್ಕಳಲ್ಲೂ ಕಾಣಿಸಿಕೊಳ್ಳುತ್ತಿರುವ ಕೊರೊನಾ

ರಾಜ್ಯದಲ್ಲಿ ಇಗಾಗಲೇ ಸುಮಾರು 168 ಮಕ್ಕಳಿಗೆ ಕೊರೊನಾ ಸೋಂಕು ಕಾಣಿಸಿಕೊಂಡಿದ್ದು, ಈ ನಡುವೆ ಶಾಲೆ ಪ್ರಾರಂಭವಾದಲ್ಲಿ ಮತ್ತೆ ಕೊರೊನಾ ಹೆಚ್ಚಾಗುವ ಸಾಧ್ಯತೆಕೂಡ ಇದೆ. ಈ ಬಗ್ಗೆ ಸರ್ಕಾರ ಯಾವ ರೀತಿ ಕ್ರಮ ಕೈಗೊಳ್ಳುತ್ತದೆ ಎಂದು ಕಾದು ನೋಡಬೇಕಿದೆ.

Exit mobile version