ಬೆಂಗಳೂರು, ಏ. 22: ಕೊರೊನಾ ಸೋಂಕಿಗೆ ಗುರಿಯಾಗಿ ನಗರದ ಮಣಿಪಾಲ್ ಆಸ್ಪತ್ರೆಯಲ್ಲಿ ದಾಖಲಾಗಿದ್ದ ಮುಖ್ಯಮಂತ್ರಿ ಬಿ.ಎಸ್. ಯಡಿಯೂರಪ್ಪ ಸಂಪೂರ್ಣ ಗುಣಮುಖರಾಗಿ ಗುರುವಾರ ಡಿಸ್ಚಾರ್ಜ್ ಆಗಿದ್ದಾರೆ.
ಕೊರೊನಾ ಸೋಂಕು ಕಾಣಿಸಿಕೊಂಡ ಹಿನ್ನೆಲೆಲ್ಲಿ ಏಪ್ರಿಲ್ 16ರಂದು ಯಡಿಯೂರಪ್ಪ ಬೆಂಗಳೂರಿನ ಮಣಿಪಾಲ್ ಆಸ್ಪತ್ರೆಗೆ ದಾಖಲಾಗಿದ್ದರು. ಇದೀಗ ಅವರು ಸಂಪೂರ್ಣ ಗುಣಮುಖರಾಗಿದ್ದು, ಕೋವಿಡ್ ವರದಿ ನೆಗೆಟಿವ್ ಬಂದ ಹಿನ್ನೆಲೆಯಲ್ಲಿ ಡಿಸ್ಚಾರ್ಜ್ ಆಗಿದ್ದಾರೆ.
ಈ ವೇಳೆ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ರಾಜ್ಯದಲ್ಲಿ ಕರೊನಾ ಸೋಂಕಿನ ಪ್ರಮಾಣ ಹೆಚ್ಚುತ್ತಿದೆ. ಹೀಗಾಗಿ ಜನರು ಸೋಂಕು ಹರಡುವುದನ್ನುತಡೆಯಲು ಸರ್ಕಾರದೊಂದಿಗೆ ಕೈಜೋಡಿಸಬೇಕೆಂದು ಮನವಿ ಮಾಡಿದರು.
ಸೋಂಕು ನಿಯಂತ್ರಣಕ್ಕೆ ಸರ್ಕಾರ ಹಲವಾರು ಕಠಿಣ ಕ್ರಮಗಳನ್ನು ಜಾರಿ ಮಾಡಿದೆ. ಸರ್ಕಾರ ಜಾರಿಗೊಳಿಸಿರುವ ನಿಯಮಗಳನ್ನು ಜನರು ಪಾಲನೆ ಮಾಡುವ ಮೂಲಕ ಸೋಂಕು ನಿಯಂತ್ರಣಕ್ಕೆ ಸಹಕರಿಸಬೇಕು. ಪ್ರತಿಯೊಬ್ಬರು ಕಡ್ಡಾಯವಾಗಿ ಮಾಸ್ಕ್ ಧರಿಸಿ ಸಾಮಾಜಿಕ ಅಂತರವನ್ನು ಕಾಪಾಡಬೇಕೆಂದು ಮನವಿ ಮಾಡಿದ್ದಾರೆ.