ಬೆಂಗಳೂರು,14,: ಬನ್ನೇರುಘಟ್ಟ ರಸ್ತೆಯಲ್ಲಿ ಬೈಕ್ ಅಪಘಾತವಾಗಿ ಸ್ಯಾಂಡಲ್ವುಡ್ ನಟ, ರಾಷ್ಟ್ರ ಪ್ರಶಸ್ತಿ ವಿಜೇತ ಸಂಚಾರಿ ವಿಜಯ್ ಅವರಿಗೆ ಗಂಭೀರ ಗಾಯಗಳಾಗಿವೆ.
ಶನಿವಾರ ರಾತ್ರಿ ಬೈಕ್ ಅಪಘಾತವಾಗಿದ್ದು, ಸಂಚಾರಿ ವಿಜಯ್ ಅವರನ್ನು ಆಸ್ಪತ್ರೆಗೆ ದಾಖಲಿಸಲಾಗಿದೆ. ವಿಜಯ್ಗೆ ಮೆದುಳಿನ ಭಾಗ ಹಾಗೂ ತೊಡೆಯ ಭಾಗಕ್ಕೆ ಗಂಭೀರ ಗಾಯಗಳಾಗಿದ್ದು, ಐಸಿಯುನಲ್ಲಿ ಚಿಕಿತ್ಸೆ ನೀಡಲಾಗುತ್ತಿದೆ. ಮೆದುಳಿನ ಭಾಗದ ಶಸ್ತ್ರ ಚಿಕಿತ್ಸೆ ನಡೆಸಲಾಗಿದೆ.