ದೀಪಾವಳಿ ಹಬ್ಬಕ್ಕೆ ಪಟಾಕಿಗಳನ್ನು ಖರೀದಿಸಿ ಮನೆ ಕಡೆ ಹೊರಟ್ಟಿದ್ದ ಅಪ್ಪ- ಮಗ ಬಾರದ ಲೋಕಕ್ಕೆ ತೆರಳಿದ್ದಾರೆ. ನಡು ರಸ್ತೆಯಲ್ಲಿ ಸುಟ್ಟು ಕರಕಲಾಗಿದ್ದಾರೆ.
ಪುದುಚೇರಿ: . ಪಟಾಕಿಗಳನ್ನು ಗೋಣಿಚೀಲದಲ್ಲಿ ತುಂಬಿಕೊಂಡು ಬೈಕ್ನಲ್ಲಿ ತೆರಳುತ್ತಿದ್ದಾಗ ಅವು ದಿಢೀರ್ ಹೊತ್ತಿ ಉರಿದ ಪರಿಣಾಮ, ಬೈಕ್ನಲ್ಲಿ ಸಾಗುತ್ತಿದ್ದ ತಂದೆ ಮತ್ತು ಆತನ 7 ವರ್ಷದ ಮಗ ಸಾವನ್ನಪ್ಪಿರುವ ಹೃದಯವಿದ್ರಾವಕ ಘಟನೆ ವಿಲ್ಲುಪುರಂ ಜಿಲ್ಲೆಯ ಕೊಟ್ಟಕುಪ್ಪಂ ಬಳಿ ನಡೆದಿದೆ.
ಪಟಾಕಿಗಳ ಬಾಕ್ಸ್ನೊಂದಿಗೆ ಅಪ್ಪ ಮಗ ಇಬ್ಬರು ಹೋಗುತ್ತಿದ್ದಾಗ ಬೆಂಕಿ ಹೊತ್ತಿಕೊಂಡಿದೆ. ಕ್ಷಣ ಮಾತ್ರದಲ್ಲೇ ಸ್ಕೂಟರ್ ಸ್ಫೋಟಗೊಂಡಿದೆ. ಘಟನೆಯ ವಿಡಿಯೋವೊಂದು ಸಾಮಾಜಿಕ ಜಾಲತಾಣದಲ್ಲಿ ವೈರಲ್ ಆಗಿದೆ. ಸಿಸಿಟಿವಿ ದೃಶ್ಯಾವಳಿಯಲ್ಲಿ ಕಲೈನಾಸನ್ ಸ್ಕೂಟರ್ ಓಡಿಸುತ್ತಿದ್ದಾಗ, ಅವರ ಮಗ ಪ್ರದೀಪ್ ಮುಂಭಾಗದಲ್ಲಿ ಕುಳಿತುಕೊಂಡಿದ್ದ. ತಿರುವಿನಲ್ಲಿ ವೇಗವಾಗಿ ಬಂದ ಸ್ಕೂಟರ್ ಸ್ಫೋಟಗೊಂಡು ಬಾಲಕ ಮತ್ತು ಆತನ ತಂದೆ ಸ್ಥಳದಲ್ಲೇ ಸಾವನ್ನಪ್ಪಿರುವ ದೃಶ್ಯ ವಿಡಿಯೋದಲ್ಲಿ ಸೆರೆಯಾಗಿದೆ
ಪಟಾಕಿ ಸಿಡಿದ ಪರಿಣಾಮ ಇಬ್ಬರೂ ಸ್ಥಳದಲ್ಲೇ ಸಾವನ್ನಪ್ಪಿದ್ದಾರೆ. ರಸ್ತೆಯಲ್ಲಿ ಸಂಚರಿಸುತ್ತಿದ್ದ ಮತ್ತಿಬ್ಬರು ಗಾಯಗೊಂಡಿದ್ದಾರೆ. ಗಾಯಾಳುಗಳನ್ನು ಚಿಕಿತ್ಸೆಗಾಗಿ ಜಿಲ್ಲಾಸ್ಪತ್ರೆಗೆ ದಾಖಲಿಸಲಾಗಿದೆ. ಘಟನೆಯಿಂದ ರಸ್ತೆಗಳಲ್ಲಿ ಸಂಚಾರ ಅಸ್ತವ್ಯಸ್ತಗೊಂಡಿದ್ದು, 2 ಗಂಟೆಗೂ ಹೆಚ್ಚು ಕಾಲ ಟ್ರಾಫಿಕ್ ಜಾಮ್ ಉಂಟಾಗಿತ್ತು.
ಈ ದುರ್ಘಟನೆಯಲ್ಲಿ ಲಾರಿ ಮತ್ತಿತರ ವಾಹನಗಳು ಜಖಂಗೊಂಡಿವೆ. ಘಟನಾ ಸ್ಥಳಕ್ಕೆ ಭೇಟಿ ನೀಡಿರುವ ವಿಲ್ಲುಪುರಂ ಜಿಲ್ಲಾ ಮತ್ತು ಪುದುಚೇರಿ ಪೊಲೀಸ್ ಅಧಿಕಾರಿಗಳು ಈ ಬಗ್ಗೆ ತನಿಖೆ ನಡೆಸುತ್ತಿದ್ದಾರೆ.