ರಾಜ್ಯದ ಬೆಂಗಳೂರು ಮಹಾನಗರ ಸಾರಿಗೆ ಸಂಸ್ಥೆ (Bangalore Metropolitan Transport Corporation) 2286 ನಿರ್ವಾಹಕ ಹುದ್ದೆಗಳ ನೇಮಕಾತಿಗೆ ಅಧಿಕೃತ ಅಧಿಸೂಚನೆ ಹೊರಡಿಸಿದೆ. ಅರ್ಹ ಹಾಗೂ ಆಸಕ್ತಿ ಅಭ್ಯರ್ಥಿಗಳು ಹೆಚ್ಚಿನ ಮಾಹಿತಿಗಳನ್ನು ಕೆಳಗಿನಂತೆ ತಿಳಿದು ಆನ್ಲೈನ್ ಮೂಲಕ ಅರ್ಜಿ ಸಲ್ಲಿಸಲು ಕೋರಲಾಗಿದೆ.
![BMTC Job Vacancy](https://sp-ao.shortpixel.ai/client/to_webp,q_glossy,ret_img,w_321,h_193/https://vijayatimes.com/wp-content/uploads/2024/05/Bmtc-job-alert.webp)
ನೇಮಕಾತಿ ಪ್ರಾಧಿಕಾರ : ಕರ್ನಾಟಕ ಪರೀಕ್ಷಾ ಪ್ರಾಧಿಕಾರ (KEA)
ಉದ್ಯೋಗ ಸಂಸ್ಥೆ : ಬೆಂಗಳೂರು ಮಹಾನಗರ ಸಾರಿಗೆ ಸಂಸ್ಥೆ
ಹುದ್ದೆ ಹೆಸರು : ನಿರ್ವಾಹಕ
ಒಟ್ಟು ಹುದ್ದೆಗಳ ಸಂಖ್ಯೆ : 2500.
ಹುದ್ದೆಗಳ ವರ್ಗೀಕರಣ
ಮಿಕ್ಕಳಿದ ವೃಂದದಲ್ಲಿ 2286 ನಿರ್ವಾಹಕ ಹುದ್ದೆಗಳು.
ಸ್ಥಳೀಯ ವೃಂದದಲ್ಲಿ 214 ( ಹಿಂಬಾಕಿ 15 )
ಅರ್ಹತೆಗಳು :
PUC / ICSE / CBSE ಪಾಸ್ ಮಾಡಿರಬೇಕು ಅಥವಾ 3 ವರ್ಷಗಳ ಡಿಪ್ಲೊಮ ಪೂರೈಸಿರಬೇಕು.
ಮೋಟಾರು ವಾಹನ ನಿರ್ವಾಹಕ ಪರವಾನಗಿ
ಮೋಟಾರು ವಾಹನ ಬ್ಯಾಡ್ಜ್ ಅನ್ನು ಹೊಂದಿರತಕ್ಕದ್ದು.
ಪುರುಷರ ಎತ್ತರ 160 CM, ಮಹಿಳೆಯರ ಎತ್ತರ 150 CM ಇರಬೇಕು.
![Job 2024 Conductor](https://sp-ao.shortpixel.ai/client/to_webp,q_glossy,ret_img,w_305,h_219/https://vijayatimes.com/wp-content/uploads/2024/05/job-vacancy-2.jpg)
ವಯೋಮಿತಿ : ಕನಿಷ್ಠ 18 ವರ್ಷ ಆಗಿರಬೇಕು. ಗರಿಷ್ಠ ವಯಸ್ಸು ವರ್ಗಾವಾರು ಕೆಳಗಿನಂತೆ ಮೀರಿರಬಾರದು.
GM ವರ್ಗದವರಿಗೆ – 35 ವರ್ಷ.
OBC ಅಭ್ಯರ್ಥಿಗಳಿಗೆ 38 ವರ್ಷ.
ST/ SC / ಪ್ರವರ್ಗ-1 ಅಭ್ಯರ್ಥಿಗಳಿಗೆ 40 ವರ್ಷ.
ಮಾಜಿ ಸೈನಿಕ ಅಭ್ಯರ್ಥಿಗಳಿಗೆ 45 ವರ್ಷ.
ವೇತನ ಶ್ರೇಣಿ : ರೂ.18660-25300.
ಅರ್ಜಿ ಶುಲ್ಕ ವಿವರ :
GM ಮತ್ತು ಹಿಂದುಳಿದ ಪ್ರವರ್ಗಗಳಿಗೆ ಶುಲ್ಕ ರೂ.750.
SC / ST, ಪ್ರವರ್ಗ-1, ಮಾಜಿ ಸೈನಿಕ ಮತ್ತು ಅಂಗವಿಕಲ ಅಭ್ಯರ್ಥಿಗಳಿಗೆ ರೂ.500.
ಅರ್ಜಿ ಸಲ್ಲಿಸಲು ನಿಗಧಿಪಡಿಸಿರುವ ಅವಧಿ
ಅರ್ಜಿ ಸಲ್ಲಿಕೆಗೆ ಪ್ರಾರಂಭಿಕ ದಿನಾಂಕ: 19-04-2024
ಅರ್ಜಿ ಸಲ್ಲಿಕೆಗೆ ಕೊನೆ ದಿನಾಂಕ: 18-05-2024
ಶುಲ್ಕ ಪಾವತಿಗೆ ಕೊನೆ ದಿನಾಂಕ : 19-05-2024
ನೇಮಕಾತಿ ವಿಧಾನ : ಸಾಮಾನ್ಯ ಸಾಮರ್ಥ್ಯ ಪರೀಕ್ಷೆಯನ್ನು ಎರಡು ಪತ್ರಿಕೆಗಳಿಗೆ ತಲಾ 100 ಗಳಿಗೆ ನಡೆಸಿ, ನಂತರ ಇದರಲ್ಲಿನ ಶೇಕಡ.75 ಅಂಕಗಳು ಹಾಗೂ ಶೈಕ್ಷಣಿಕ ಅರ್ಹತೆಯ ಶೇಕಡ.25 ಅಂಕಗಳನ್ನು ಸೇರಿಸಿ ಮೆರಿಟ್ ಆಧಾರದ ಮೇಲೆ 1:5 ಅನುಪಾತದ ಅಭ್ಯರ್ಥಿಗಳಿಗೆ ಮೂಲ ದಾಖಲೆಗಳ ಪರಿಶೀಲನೆ ನಡೆಸಿ ಆಯ್ಕೆ ಮಾಡಲಾಗುತ್ತದೆ.
BMTC ವೆಬ್ಸೈಟ್ : https://mybmtc.karnataka.gov.in/english
ಅರ್ಜಿ ಸಲ್ಲಿಸಲು ಕರ್ನಾಟಕ ಪರೀಕ್ಷಾ ಪ್ರಾಧಿಕಾರದ ವೆಬ್ಸೈಟ್ : http://kea.kar.nic.in