ಮುಂಬೈನಲ್ಲಿ ಕೊರೊನಾ ಅಟ್ಟಹಾಸ; 12 ಸಾವಿರ ಮಕ್ಕಳಲ್ಲಿ ಸೋಂಕು ಪತ್ತೆ, ವ್ಯಾಕ್ಸಿನ್ ನೀಡುವಂತೆ ಹೈಕೋರ್ಟ್ ಮೆಟ್ಟಿಲು ಹತ್ತಿದ ಬಾಲಕ

ಮುಂಬೈ, ಮೇ. 28: ವಾಣಿಜ್ಯ ನಗರಿ ಮುಂಬೈನಲ್ಲಿ ಕೊರೊನಾ ಅಟ್ಟಹಾಸ ಮೆರೆಯುತ್ತಿದ್ದು, 12,000 ಮಕ್ಕಳು ಕೋವಿಡ್ ನಿಂದ ಬಳಲುತ್ತಿದ್ದಾರೆ. ಇವರ ಪೈಕಿ ಈಗಾಗಲೇ 17 ಮಕ್ಕಳು ಕೊರೊನಾಗೆ ಬಲಿಯಾಗಿದ್ದಾರೆ.

ಈ ಕುರಿತು ಮುಂಬೈ ಮುನ್ಸಿಪಲ್ ಕಾರ್ಪೋರೇಷನ್ ಬಾಂಬೆ ಹೈಕೋರ್ಟ್ ಗೆ ಅಧಿಕೃತ ಮಾಹಿತಿ ನೀಡಿದೆ. ಕೊರೊನಾ ಎರಡನೇ ಅಲೆಯಲ್ಲೆ 12 ಸಾವಿರ ಮಕ್ಕಳು ಬಳಲುತ್ತಿದ್ದು, ಇನ್ನು 3 ನೇ ಹಂತದಲ್ಲಿ ಮಕ್ಕಳಿಗೆ ಹೆಚ್ಚು ಪರಿಣಾಮ ಬೀರುತ್ತದೆ ಎಂದು ತಜ್ಞ ವೈದ್ಯರು ಹೇಳಿರುವ ಕಾರಣ ಬಿಎಂಸಿ ಸಕಲ ಸಿದ್ಧತೆ ಮಾಡಿಕೊಂಡಿದೆ. ಮಕ್ಕಳಿಗೆ ಚಿಕಿತ್ಸೆ ನೀಡಲು ಪ್ರತ್ಯೇಕ ಬೆಡೆ ರೆಡಿ ಮಾಡಲಾಗಿದೆ. ಜೊತೆಗೆ ಉಪಯುಕ್ತ ಔಷಧಿಯನ್ನು ಸ್ಟಾಕ್ ಮಾಡಲಾಗಿದೆ.

12 ರಿಂದ 17 ವರ್ಷದ ಮಕ್ಕಳಿಗೆ ಲಸಿಕೆ ನೀಡುವಂತೆ ಬಾಲಕನೊಬ್ಬ ಹೈಕೋರ್ಟ್ ಮೆಟ್ಟಿಲು ಹತ್ತಿದ್ದಾರೆ. ಎಲ್ಲಾ ವಯಸ್ಕರಿಗೆ ಲಸಿಕೆ ನೀಡಲಾಗುತ್ತಿದೆ. ಆದರೆ 12 ರಿಂದ 17 ವರ್ಷದ ಬಾಲಕರ ಬಗ್ಗೆ ನಿರ್ಲಕ್ಷ್ಯ ಧೋರಣೆ ತಾಳಲಾಗಿದೆ ಎಂದು ಅರ್ಜಿಯಲ್ಲಿ ವಿವರಿಸಿದ್ದಾನೆ. ಈ ಪ್ರಕರಣ ಕುರಿತಂತೆ ಜೂನ್ 4 ರೊಳಗೆ ಉತ್ತರ ನೀಡುವಂತೆ ಹೈಕೋರ್ಟ್ ರಾಜ್ಯ ಮತ್ತು ಕೇಂದ್ರ ಸರ್ಕಾರಕ್ಕೆ ನೋಟಿಸ್ ಜಾರಿ ಮಾಡಿದೆ.

Exit mobile version