Visit Channel

ಕೊರೋನಾ ತಡೆಗಟ್ಟಲು ಸಂಪೂರ್ಣ ಲಾಕ್ ಡೌನ್ ಏಕೈಕ ಮಾರ್ಗ; ರಾಹುಲ್‌ ಗಾಂಧಿ

ydzFFur9_400x400

ನವದೆಹಲಿ, ಮೇ. 04: ದೇಶದಲ್ಲಿ ಕೋವಿಡ್-19 ಸಾವಿನ ಪ್ರಕರಣಗಳು ಹೆಚ್ಚಾಗುತ್ತಿರುವುದಕ್ಕೆ ಕೇಂದ್ರ ಸರ್ಕಾರದ ವಿರುದ್ಧ ಮಂಗಳವಾರ ತೀವ್ರ ವಾಗ್ದಾಳಿ ನಡೆಸಿರುವ ಕಾಂಗ್ರೆಸ್ ಮುಖಂಡ ರಾಹುಲ್ ಗಾಂಧಿ, ಕೊರೋನಾವೈರಸ್ ಹರಡದಂತೆ ತಡೆಯುವಲ್ಲಿ ಇರುವ ಏಕೈಕ ಮಾರ್ಗ ದೇಶಾದ್ಯಂತ ಸಂಪೂರ್ಣ ಲಾಕ್ ಡೌನ್ ಎಂದಿದ್ದಾರೆ. ಕೋವಿಡ್-19 ಸಾಂಕ್ರಾಮಿಕದಿಂದ ಅನೇಕ ಅಮಾಯಕ ಜನರು ಬಲಿಯಾಗುತ್ತಿದ್ದರೂ, ಕೇಂದ್ರ ಸರ್ಕಾರ ಯಾವುದೇ ಕ್ರಮ ಕೈಗೊಳ್ಳದೆ ನಿರ್ಲಕ್ಷ್ಯ ವಹಿಸಿದೆ ಎಂದು ಅವರು ಆರೋಪಿಸಿದ್ದಾರೆ.

ಕೋವಿಡ್ -19 ಸೋಂಕು ಹರಡದಂತೆ ಈಗ ಇರುವ ಏಕೈಕ ಮಾರ್ಗ,ದುರ್ಬಲ ವರ್ಗಗಳಿಗೆ ನ್ಯಾಯ ರಕ್ಷಣೆಯೊಂದಿಗೆ ದೇಶಾದ್ಯಂತ ಸಂಪೂರ್ಣ ಲಾಕ್ ಡೌನ್ ಜಾರಿ ಮಾಡುವುದಾಗಿದೆ. ಅನೇಕ ಅಮಾಯಕ ಜನರು ಸಾಯುತ್ತಿದ್ದರೂ ಕೇಂದ್ರ ಸರ್ಕಾರ ಯಾವುದೇ ಕ್ರಮ ಕೈಗೊಳ್ಳುತ್ತಿಲ್ಲ ಎಂದು ರಾಹುಲ್ ಗಾಂಧಿ ಟ್ವೀಟ್ ಮಾಡಿದ್ದಾರೆ.

ಕಳೆದ ತಿಂಗಳು ದೇಶವನ್ನುದ್ದೇಶಿಸಿ ಮಾತನಾಡಿದ ಪ್ರಧಾನಿ ನರೇಂದ್ರ ಮೋದಿ, ಸೂಕ್ಷ್ಮ ಕಂಟೈನ್ ಮೆಂಟ್ ವಲಯದತ್ತ ಗಮನ ಹರಿಸಿ. ಕೊನೆಯ ಮಾರ್ಗವಾಗಿ ಲಾಕ್ ಡೌನ್ ಬಳಸಿ ಎಂದು ರಾಜ್ಯ ಸರ್ಕಾರಗಳಿಗೆ ಸೂಚನೆ ನೀಡಿದ್ದರು.

Latest News

bjp
ರಾಜಕೀಯ

ಕಾಂಗ್ರೆಸ್ಸಿಗರಿಗೇಕೆ ಜಿಹಾದಿಗಳ ಮೇಲೆ ಇಷ್ಟೊಂದು ಪ್ರೀತಿ? : ಬಿಜೆಪಿ ಪ್ರಶ್ನೆ

ಸ್ವಾತಂತ್ರ್ಯದ ಅಮೃತ ಮಹೋತ್ಸವದ ಸಂಭ್ರಮಕ್ಕೆ ಮಸಿ ಬಳಿಯಲು ಯತ್ನಿಸಿದ ದುಷ್ಟ ಶಕ್ತಿಗಳನ್ನು ಮಟ್ಟ ಹಾಕಲಾಗಿದೆ ಎಂದು ಬಿಜೆಪಿ ತಿಳಿಸಿದೆ.

Pingali
ಮಾಹಿತಿ

ನಮ್ಮ ರಾಷ್ಟ್ರಧ್ವಜವನ್ನು ನಿರ್ಮಿಸಿದ ಪಿಂಗಳಿ ವೆಂಕಯ್ಯ, ಮೊದಲು ಬ್ರಿಟಿಷ್ ಸೈನ್ಯದಲ್ಲಿದ್ದರು ; ಇಲ್ಲಿದೆ ಓದಿ ಅಚ್ಚರಿಯ ಮಾಹಿತಿ

ದೇಶಕ್ಕೊಂದು ಧ್ವಜಕೊಟ್ಟು 100 ವರ್ಷ ಕಳೆದರೂ ಪಿಂಗಳಿ ಅವರ ನೆನಪು ಅಜರಾಮರವಾಗಿದೆ. ಪಿಂಗಳಿ ವೆಂಕಯ್ಯ ಅವರ ಬಗ್ಗೆ ಇನ್ನೂ ಹೆಚ್ಚಿನ ಮಾಹಿತಿಯನ್ನು ತಿಳಿದುಕೊಳ್ಳೋಣ ಮುಂದೆ ಓದಿ.

JK
ದೇಶ-ವಿದೇಶ

ಜಮ್ಮು-ಕಾಶ್ಮೀರದಲ್ಲಿ ಕಾಶ್ಮೀರಿ ಪಂಡಿತರನ್ನು ಹತ್ಯೆಗೈದ ಭಯೋತ್ಪಾದಕರು!

ಕಾಶ್ಮೀರಿ ಪಂಡಿತರೊಬ್ಬರನ್ನು(Kashmiri Pandits) ಗುಂಡಿಕ್ಕಿ ಕೊಂದು ಆತನ ಸಹೋದರನನ್ನು ಗಾಯಗೊಳಿಸಿದ್ದಾರೆ. ಸಂತ್ರಸ್ತ ಸಹೋದರನನ್ನು ಕೂಡಲೇ ಆಸ್ಪತ್ರೆಗೆ ದಾಖಲಿಸಲಾಗಿದೆ.