ವಿಶಾಖಪಟ್ಟಣ: ಆಂಧ್ರಪ್ರದೇಶದ ವಿಶಾಖಪಟ್ಟಣಂನ ಅನಿಲ ಸೋರಿಕೆ ಪ್ರಕರಣದ ನೆನಪು ಮಾಸುವ ಮುನ್ನವೇ ಮತ್ತೊಂದು ದುರಂತ ಸಂಭವಿಸಿದ್ದು ಪರವಾಡ ಬಳಿಯ ಜೆ.ಎನ್ ಫಾರ್ಮಾ ಸಿಟಿಯಲ್ಲಿರುವ ಔಷಧ ತಯಾರಕ ಘಟಕ ಸ್ಪೋಟಗೊಂಡಿದೆ.
ಸ್ಫೋಟ ಸಂಭವಿಸಿದಾಗ ಘಟಕದಲ್ಲಿ ಒಟ್ಟು ಆರು ಕಾರ್ಮಿಕರಿದ್ದು, ಓರ್ವ ಗಂಭೀರ ಗಾಯಗೊಂಡರೆ ಉಳಿದ ಐವರು ಆಶ್ಚರ್ಯಕರ ರೀತಿಯಲ್ಲಿ ಪಾರಾಗಿದ್ದಾರೆ.
ಸಾಗರ ತ್ಯಾಜ್ಯ ನಿರ್ವಹಣೆ ಮಾಡಲಾಗುವ ರಾಮ್‌ಕಿ ದ್ರಾವಕಗಳ ಘಟಕದಲ್ಲಿ ಸ್ಫೋಟ ಸಂಭವಿಸಿದೆ ಎನ್ನಲಾಗಿದ್ದು, ಸುಮಾರು 15 ಬಾರಿ ಸ್ಫೋಟದ ಸದ್ದು ಕೇಳಿಸಿದೆ. ಭಾರಿ ಪ್ರಮಾಣದ ಬೆಂಕಿಯನ್ನು ನಂದಿಸಲು ಮತ್ತು ಸುತ್ತಮುತ್ತಲಿನ ಇತರ ಔಷಧ ಕಾರ್ಖಾನೆಗಳಿಗೆ ಬೆಂಕಿ ಹರಡದಂತೆ ತಡೆಯಲು 10 ಅಗ್ನಿಶಾಮಕ ವಾಹನಗಳನ್ನು ಸ್ಥಳದಲ್ಲಿ ನಿಯೋಜಿಸಲಾಗಿದೆ ಎಂದು ವಿಶಾಖಪಟ್ಟಣಂ ಜಿಲ್ಲಾಧಿಕಾರಿ ವಿ ವಿನಯ್ ಚಂದ್ ತಿಳಿಸಿದ್ದಾರೆ.
ಕೆಲ ತಿಂಗಳ ಹಿಂದೆ ಎಲ್‌ಜಿ ಪಾಲಿಮರ್ಸ್ ಕೈಗಾರಿಕೆಯಿಂದ ವಿಷಾನಿಲ ಸೋರಿಕೆಯಾಗಿ ಹಲವರು ಮೃತಪಟ್ಟ ಘಟನೆ ಹಸಿರಾಗಿರುವಾಗಲೇ ನಡದಿರುವ ಘಟನೆಯು ಪರವಾಡಾ ಪ್ರದೇಶದ ನಿವಾಸಿಗಳಲ್ಲಿ ಆತಂಕ ಉಂಟುಮಾಡಿದೆ.