• ಹೋಮ್
  • ವಿಜಯ ಟೈಮ್ಸ್‌
    • ಪ್ರಮುಖ ಸುದ್ದಿ
    • ರಾಜ್ಯ
    • ದೇಶ-ವಿದೇಶ
    • ರಾಜಕೀಯ
  • ಕವರ್‌ ಸ್ಟೋರಿ
  • ಲೈಫ್ ಸ್ಟೈಲ್
  • ಆರೋಗ್ಯ
  • ಕ್ರೀಡೆ
  • ಮನರಂಜನೆ
    • ವೈರಲ್ ಸುದ್ದಿ
Menu
  • ಹೋಮ್
  • ವಿಜಯ ಟೈಮ್ಸ್‌
    • ಪ್ರಮುಖ ಸುದ್ದಿ
    • ರಾಜ್ಯ
    • ದೇಶ-ವಿದೇಶ
    • ರಾಜಕೀಯ
  • ಕವರ್‌ ಸ್ಟೋರಿ
  • ಲೈಫ್ ಸ್ಟೈಲ್
  • ಆರೋಗ್ಯ
  • ಕ್ರೀಡೆ
  • ಮನರಂಜನೆ
    • ವೈರಲ್ ಸುದ್ದಿ
Vijaya Times logo
  • ಹೋಮ್
  • ವಿಜಯ ಟೈಮ್ಸ್‌
    • ಪ್ರಮುಖ ಸುದ್ದಿ
    • ರಾಜ್ಯ
    • ದೇಶ-ವಿದೇಶ
    • ರಾಜಕೀಯ
  • ಕವರ್‌ ಸ್ಟೋರಿ
  • ಲೈಫ್ ಸ್ಟೈಲ್
  • ಆರೋಗ್ಯ
  • ಕ್ರೀಡೆ
  • ಮನರಂಜನೆ
    • ವೈರಲ್ ಸುದ್ದಿ
Menu
  • ಹೋಮ್
  • ವಿಜಯ ಟೈಮ್ಸ್‌
    • ಪ್ರಮುಖ ಸುದ್ದಿ
    • ರಾಜ್ಯ
    • ದೇಶ-ವಿದೇಶ
    • ರಾಜಕೀಯ
  • ಕವರ್‌ ಸ್ಟೋರಿ
  • ಲೈಫ್ ಸ್ಟೈಲ್
  • ಆರೋಗ್ಯ
  • ಕ್ರೀಡೆ
  • ಮನರಂಜನೆ
    • ವೈರಲ್ ಸುದ್ದಿ
Visit Channel
Home ಪ್ರಮುಖ ಸುದ್ದಿ

ಕೇಂದ್ರದಿಂದ ಎಲ್ಲಾ ರಾಜ್ಯಗಳಿಗೂ ವಿಜಯದಶಮಿಗೆ ಬಂಪರ್‌ ಉಡುಗೊರೆ- ಕೇಂದ್ರ ಸಚಿವ ಪ್ರಹ್ಲಾದ್ ಜೋಶಿ

Shwetha Mohan by Shwetha Mohan
in ಪ್ರಮುಖ ಸುದ್ದಿ, ಮಾಹಿತಿ, ರಾಜಕೀಯ, ರಾಜ್ಯ, ಲೈಫ್ ಸ್ಟೈಲ್
ಕೇಂದ್ರದಿಂದ ಎಲ್ಲಾ ರಾಜ್ಯಗಳಿಗೂ ವಿಜಯದಶಮಿಗೆ ಬಂಪರ್‌ ಉಡುಗೊರೆ- ಕೇಂದ್ರ ಸಚಿವ ಪ್ರಹ್ಲಾದ್ ಜೋಶಿ
0
SHARES
32
VIEWS
Share on FacebookShare on Twitter
  • ಕರ್ನಾಟಕ ಸೇರಿದಂತೆ ಎಲ್ಲಾ 28 ರಾಜ್ಯ ಸರ್ಕಾರಗಳಿಗೂ ಕೇಂದ್ರದಿಂದ ಭರ್ಜರಿ ಗಿಫ್ಟ್‌
  • ಒಟ್ಟಾರೆ 1,01,603 ಕೋಟಿ ರೂ. ಹೆಚ್ಚುವರಿ ತೆರಿಗೆ ಹಂಚಿಕೆ ಹಣ ಬಿಡುಗಡೆ
  • ಕರ್ನಾಟಕಕ್ಕೆ 3705 ಕೋಟಿ ರೂ. ಹೆಚ್ಚುವರಿ ತೆರಿಗೆ ಪಾಲನ್ನು ಒದಗಿಸಿದ ಕೇಂದ್ರ (A huge gift from the Central Govt to all 28 State Govts)

ದಸರಾ-ದೀಪಾವಳಿಗೆ GST ಇಳಿಕೆ ಮಾಡಿದ ಬೆನ್ನಲ್ಲೇ ಕೇಂದ್ರ ಸಚಿವ ಪ್ರಹ್ಲಾದ್ ಜೋಶಿ ಎಲ್ಲಾ ರಾಜ್ಯಗಳಿಗೂ ದಸರಾ-ದೀಪಾವಳಿ ಹಬ್ಬದ ವೇಳೆ ಹೆಚ್ಚುವರಿ ತೆರಿಗೆ ಹಂಚಿಕೆಯ (Tax Devolution) ಉಡುಗೊರೆ ನೀಡಿದ್ದಾರೆ.

ಪ್ರಧಾನಿ ನರೇಂದ್ರ ಮೋದಿಯವರ ಆಸೆಯಂತೆ ಕರ್ನಾಟಕ ಸೇರಿದಂತೆ ಎಲ್ಲಾ 28 ರಾಜ್ಯ ಸರ್ಕಾರಗಳಿಗೂ ಕೇಂದ್ರ ಹಣಕಾಸು ಸಚಿವಾಲಯ ಒಟ್ಟಾರೆ 1,01,603 ಕೋಟಿ ರೂ. ಹೆಚ್ಚುವರಿ ತೆರಿಗೆ ಹಂಚಿಕೆ

ಹಣವನ್ನು ಬಿಡುಗಡೆ ಮಾಡಿದೆ. ದಸರಾ-ದೀಪಾವಳಿ ಹಬ್ಬಗಳ ಋತುವಿನಲ್ಲಿ ಕೇಂದ್ರ ಸರ್ಕಾರ ಮಹತ್ತರ ನಿರ್ಣಯ ಕೈಗೊಂಡು ಎಲ್ಲಾ ರಾಜ್ಯಗಳಿಗೂ ನೆರವಾಗುವಂತೆ ತೆರಿಗೆ ಹಂಚಿಕೆಯ

ಒಂದು ಮುಂಗಡ ಕಂತು ಬಿಡುಗಡೆ ಮಾಡಿದೆ. ಇದರಲ್ಲಿ ಕರ್ನಾಟಕಕ್ಕೆ 3705 ಕೋಟಿ ರೂ. ಹೆಚ್ಚುವರಿ ತೆರಿಗೆ ಪಾಲನ್ನು ಒದಗಿಸಲಾಗಿದೆ ಎಂದು ಮಾಹಿತಿ ನೀಡಿದ್ದಾರೆ.

ರಾಜ್ಯಗಳ ಬಂಡವಾಳ ವೆಚ್ಚವನ್ನು ವೇಗಗೊಳಿಸಲು ಹಾಗೂ ಅಭಿವೃದ್ಧಿ, ಕಲ್ಯಾಣ ಕಾರ್ಯಗಳ ವೆಚ್ಚಕ್ಕೆ ಆರ್ಥಿಕ ನೆರವು ಒದಗಿಸುವ ನಿಟ್ಟಿನಲ್ಲಿ ಕೇಂದ್ರ ಸರ್ಕಾರ ದೇಶದ ಎಲ್ಲಾ 28 ರಾಜ್ಯ ಸರ್ಕಾರಗಳಿಗೂ

A huge gift from the Central Govt to all 28 State Govts

ಒಟ್ಟಾರೆ 1,01,603 ಕೋಟಿ ರೂ. ತೆರಿಗೆ ಹಂಚಿಕೆಯನ್ನು ಮುಂಗಡ ಕಂತಾಗಿ ಬಿಡುಗಡೆ ಮಾಡಲಾಗಿದೆ. ಅಕ್ಟೋಬರ್ 10ರಂದು ಬಿಡುಗಡೆ ಆಗಬೇಕಾದ ಸಾಮಾನ್ಯ ಮಾಸಿಕ ಹಂಚಿಕೆ ಜೊತೆಗೇ

ಈ ಹೆಚ್ಚುವರಿ ತೆರಿಗೆ ಪಾಲಿನ ಹಣವೂ ಬಿಡುಗಡೆಯಾಗಲಿದ್ದು, ರಾಜ್ಯ ಸರ್ಕಾರಗಳು ಅಭಿವೃದ್ಧಿ ಕಾರ್ಯಗಳಿಗೆ ಇದನ್ನು ಸಮರ್ಪಕವಾಗಿ ಬಳಸಿಕೊಳ್ಳಲಿ ಎಂದು ಅವರು ಸಲಹೆ ನೀಡಿದ್ದಾರೆ.

ಅತಿವೃಷ್ಟಿಯಿಂದಾಗಿ ರಾಜ್ಯದ ರೈತರು ತತ್ತರಿಸಿದ್ದಾರೆ. ಉತ್ತರ ಕರ್ನಾಟಕ, ಕಲ್ಯಾಣ ಕರ್ನಾಟಕ ಸೇರಿದಂತೆ ರಾಜ್ಯಾದ್ಯಾಂತ ವಿಪರೀತ ಮಳೆಯಿಂದ ರೈತರು ಬೆಳೆಹಾನಿಗೆ ಒಳಗಾಗಿದ್ದಾರೆ.

ಈ ಸಂಕಷ್ಟ ಪರಿಸ್ಥಿತಿಯಲ್ಲಿ ಕೇಂದ್ರ ಸರ್ಕಾರ ವಿವಿಧ ಬೆಳೆಗಳಿಗೆ ಬೆಂಬಲ ಬೆಲೆಯ ನೆರವು ಕಲ್ಪಿಸಿದೆ. ರಾಜ್ಯ ಸರ್ಕಾರ ಅನ್ನದಾತರಿಗೆ ಇದನ್ನು ಸಮರ್ಪಕವಾಗಿ ತಲುಪಿಸಲಿ ಎಂದು ಒತ್ತಾಯಿಸಿದ್ದಾರೆ.

ಕೆಲ ದಿನಗಳ ಹಿಂದಷ್ಟೇ ವಿಶೇಷವಾಗಿ ಕರ್ನಾಕಟದ ರೈತರಿಗಾಗಿಯೇ ಬೆಂಬಲ ಬೆಲೆಯಲ್ಲಿ ಹೆಸರು, ಉದ್ದಿನಕಾಳು, ಸೋಯಾಬಿನ್‌, ಶೇಂಗಾ ಮತ್ತು ಸೋಯಾಬಿನ್‌ ಖರೀದಿಗೆ ಸೂಚಿಸಿದ್ದ ಕೇಂದ್ರ ಸರ್ಕಾರ,

ಇದೀಗ ಹಿಂಗಾರು ಹಂಗಾಮಿನ ದ್ವಿದಳ ಧಾನ್ಯಗಳು ಸೇರಿದಂತೆ ವಿವಿಧ ಬೆಳೆಗಳ ಬೆಂಬಲ ಬೆಲೆಯನ್ನೂ ಹೆಚ್ಚಿಸಿ ರೈತರ ನೆರವಿಗೆ ಬಂದಿದೆ. ಮುಂಬರುವ ಹಿಂಗಾರು ಋತುವಿನಲ್ಲಿ

ಮಾರುಕಟ್ಟೆಯಲ್ಲಿ ಖರೀದಿಸುವ ಗೋಧಿ, ಕುಸುಬೆ, ಬಾರ್ಲಿ, ಮಸೂರ್‌, ಸಾಸಿವೆ, ಕಡಲೆ ಹೀಗೆ ವಿವಿಧ ಧಾನ್ಯಗಳಿಗೆ ಕೇಂದ್ರ ಸರ್ಕಾರ ಈ ಬಾರಿ ಅತಿ ಹೆಚ್ಚಿನ ಬೆಂಬಲ ಬೆಲೆಯನ್ನು ಘೋಷಿಸಿದೆ.

ಇದನ್ನು ಓದಿ : ಮಲ್ಟಿಪ್ಲೆಕ್ಸುಗಳು ಟಿಕೆಟ್ ಮಾರಾಟದ ಲೆಕ್ಕ ನಿರ್ವಹಣೆ ಮಾಡಬೇಕು: ಹೈಕೋರ್ಟ್ ಸೂಚನೆ

ರಾಜ್ಯ ಸರ್ಕಾರ ಉತ್ತರ ಕರ್ನಾಟಕ ಮತ್ತು ಕಲ್ಯಾಣ ಕರ್ನಾಟಕ ಭಾಗದ ರೈತರಿಗೆ ಇದರ ಲಾಭವನ್ನು ಸಮರ್ಪಕವಾಗಿ ಒದಗಿಸುವ ಕೆಲಸ ಮಾಡಲಿ ಎಂದು ಕೇಂದ್ರ ಸಚಿವ ಪ್ರಹ್ಲಾದ್ ಜೋಶಿ ಹೇಳಿದ್ದಾರೆ. (A huge gift from the Central Govt to all 28 State Govts)

Tags: central govtPrahlad JoshiState Govttax allocation moneyTax Devolution

Related News

ಇನ್ಮುಂದೆ ರಾಷ್ಟ್ರೀಯ ಹೆದ್ದಾರಿಗಳ ಮೇಲೆ ಎಐ ಕಣ್ಗಾವಲು: ರಸ್ತೆ ಗುಂಡಿ ಪತ್ತೆಗೆ NHAI ಹೊಸ ತಂತ್ರಜ್ಞಾನ ಜಾರಿ
ಪ್ರಮುಖ ಸುದ್ದಿ

ಇನ್ಮುಂದೆ ರಾಷ್ಟ್ರೀಯ ಹೆದ್ದಾರಿಗಳ ಮೇಲೆ ಎಐ ಕಣ್ಗಾವಲು: ರಸ್ತೆ ಗುಂಡಿ ಪತ್ತೆಗೆ NHAI ಹೊಸ ತಂತ್ರಜ್ಞಾನ ಜಾರಿ

June 17, 2026
ಜೂನ್ 18 ರಿಂದ ಬೆಂಗಳೂರಿನಾದ್ಯಂತ ಪ್ರತಿಭಟನೆ: ಬೇಕರಿ ಸೇರಿದಂತೆ ಸಣ್ಣ ಅಂಗಡಿಗಳು ಬಂದ್
ಪ್ರಮುಖ ಸುದ್ದಿ

ಜೂನ್ 18 ರಿಂದ ಬೆಂಗಳೂರಿನಾದ್ಯಂತ ಪ್ರತಿಭಟನೆ: ಬೇಕರಿ ಸೇರಿದಂತೆ ಸಣ್ಣ ಅಂಗಡಿಗಳು ಬಂದ್

June 17, 2026
ದುಬಾರೆ ದುರಂತದ ಬಳಿಕ ರಾಜ್ಯ ಸರ್ಕಾರದ ಕಟ್ಟುನಿಟ್ಟಿನ ಕ್ರಮ: ಆನೆ ಶಿಬಿರಗಳಿಗೆ ಹೊಸ ಸುರಕ್ಷತಾ ನಿಯಮಗಳು ಜಾರಿ
ಪ್ರಮುಖ ಸುದ್ದಿ

ದುಬಾರೆ ದುರಂತದ ಬಳಿಕ ರಾಜ್ಯ ಸರ್ಕಾರದ ಕಟ್ಟುನಿಟ್ಟಿನ ಕ್ರಮ: ಆನೆ ಶಿಬಿರಗಳಿಗೆ ಹೊಸ ಸುರಕ್ಷತಾ ನಿಯಮಗಳು ಜಾರಿ

June 17, 2026
ಭಾರತದ ಟೆಕ್‌ ರಾಜಧಾನಿಯಾಗಿ ಹೊರಹೊಮ್ಮಿದ ಕರ್ನಾಟಕ: ₹19.7 ಲಕ್ಷ ಕೋಟಿ ರಫ್ತಿನೊಂದಿಗೆ ದೇಶದಲ್ಲೇ ನಂ.1 ಸ್ಥಾನ
ದೇಶ-ವಿದೇಶ

ಭಾರತದ ಟೆಕ್‌ ರಾಜಧಾನಿಯಾಗಿ ಹೊರಹೊಮ್ಮಿದ ಕರ್ನಾಟಕ: ₹19.7 ಲಕ್ಷ ಕೋಟಿ ರಫ್ತಿನೊಂದಿಗೆ ದೇಶದಲ್ಲೇ ನಂ.1 ಸ್ಥಾನ

June 17, 2026

ವಿಜಯ ಟೈಮ್ಸ್‌ - ಬದಲಾವಣೆಯ ಹಾದಿ

Vijaya Times logo

ವಿಜಯ ಟೈಮ್ಸ್‌

  • ಪ್ರಮುಖ ಸುದ್ದಿ
  • ರಾಜಕೀಯ
  • ದೇಶ-ವಿದೇಶ
  • ಮನರಂಜನೆ
  • ಪ್ರಮುಖ ಸುದ್ದಿ
  • ರಾಜಕೀಯ
  • ದೇಶ-ವಿದೇಶ
  • ಮನರಂಜನೆ

Quick Links

  • About Us
  • Contact Us
  • For Advertisement
  • Privacy policy
  • About Us
  • Contact Us
  • For Advertisement
  • Privacy policy

Follow Us

Facebook Twitter Instagram Youtube

Download Vijaya Times App

Android
© 2022 Vijaya Times. All rights reserved.
No Result
View All Result
  • ಹೋಮ್
  • ವಿಜಯ ಟೈಮ್ಸ್‌
    • ಪ್ರಮುಖ ಸುದ್ದಿ
    • ರಾಜ್ಯ
    • ದೇಶ-ವಿದೇಶ
    • ರಾಜಕೀಯ
  • ಕವರ್‌ ಸ್ಟೋರಿ
  • ಲೈಫ್ ಸ್ಟೈಲ್
  • ಆರೋಗ್ಯ
  • ಕ್ರೀಡೆ
  • ಮನರಂಜನೆ
    • ವೈರಲ್ ಸುದ್ದಿ

© 2022 Vijaya Times. All Rights Reserved.