Visit Channel

ದೇಶದಲ್ಲಿ ಈವರೆಗೆ ಒಟ್ಟು 36.89 ಕೋಟಿ ಮಂದಿಗೆ ಕೊರೊನಾ ಲಸಿಕೆ

vaccine-istock-1006562-16258142081625823417

ನವದೆಹಲಿ, ಜು. 09: ದೇಶದಾದ್ಯಂತ ಇಲ್ಲಿಯವರೆಗೆ ಒಟ್ಟು 36.89 ಕೋಟಿ ಮಂದಿಗೆ ಕೊರೊನಾ ಲಸಿಕೆ ನೀಡಲಾಗಿದ್ದು, ಕಳೆದ ಇಪ್ಪತ್ನಾಲ್ಕು ಗಂಟೆಗಳಲ್ಲಿ 40 ಲಕ್ಷ ಡೋಸ್ ಗಳಷ್ಟು ಲಸಿಕೆ ನೀಡಲಾಗಿದೆ ಎಂದು ಕೇಂದ್ರ ಆರೋಗ್ಯ ಸಚಿವಾಲಯ ಶುಕ್ರವಾರ ಬಿಡುಗಡೆ ಮಾಡಿರುವ ಪ್ರಕಟಣೆಯಲ್ಲಿ ತಿಳಿಸಿದೆ.

ಲಸಿಕೆ ಪಡೆದ 36.89 ಕೋಟಿ ಮಂದಿಯಲ್ಲಿ, 11.18 ಕೋಟಿಗೂ ಹೆಚ್ಚು ಮಂದಿ 18 ರಿಂದ 44 ವರ್ಷದೊಳಗಿನವರಾಗಿದ್ದಾರೆ ಎಂದು ಸಚಿವಾಲಯ ತಿಳಿಸಿದೆ.

ಜುಲೈ 8ರಂದು 40,23,173 ಡೋಸ್‌ಗಳಷ್ಟು ಲಸಿಕೆ ನೀಡಲಾಗಿದೆ. ಅದರಲ್ಲಿ 27,01,200 ಫಲಾನುಭವಿಗಳು ಮೊದಲ ಡೋಸ್‌ ಮತ್ತು 13,21,973 ಮಂದಿ ಎರಡನೇ ಡೋಸ್‌ ಲಸಿಕೆಯನ್ನು ಪಡೆದಿದ್ದಾರೆ.

ದೇಶದ ಎಂಟು ರಾಜ್ಯಗಳಾದ ಉತ್ತರ ಪ್ರದೇಶ, ಮಧ್ಯಪ್ರದೇಶ, ರಾಜಸ್ಥಾನ, ತಮಿಳುನಾಡು, ಬಿಹಾರ, ಗುಜರಾತ್,ಕರ್ನಾಟಕ ಮತ್ತು ಮಹಾರಾಷ್ಟ್ರದಲ್ಲಿ 18 ರಿಂದ 44 ವರ್ಷದೊಳಗಿನ 50 ಲಕ್ಷಕ್ಕೂ ಹೆಚ್ಚು ಮಂದಿಗೆ ಮೊದಲ ಡೋಸ್‌ ಲಸಿಕೆ ನೀಡಲಾಗಿದೆ.

Latest News

Lal singh chadda
ಮನರಂಜನೆ

“ಲಾಲ್ ಸಿಂಗ್ ಚಡ್ಡಾ” ಚಿತ್ರ ಭಾರತೀಯ ಸೇನೆ ಮತ್ತು ಸಿಖ್ಖರನ್ನು ಅವಮಾನಿಸಿದೆ! : ಕ್ರಿಕೆಟಿಗ ಮಾಂಟಿ ಪನೇಸರ್

ಲಾಲ್ ಸಿಂಗ್ ಚಡ್ಡಾ  ಚಿತ್ರ ನಿಷೇಧಕ್ಕೆ ಮಾಂಟಿ ಪನೇಸರ್ ಕರೆ.  ಕ್ರಿಕೆಟಿಗ ಮಾಂಟಿ ಪನೇಸರ್ ಅವರು ಟ್ವಿಟರ್ನಲ್ಲಿ “ಲಾಲ್ ಸಿಂಗ್ ಚಡ್ಡಾ ಚಿತ್ರ ನಾಚಿಕೆಗೇಡಿನದು.

Medical Test
ಮಾಹಿತಿ

ಮದುವೆಗೂ ಮುನ್ನ ಈ ವೈದ್ಯಕೀಯ ಪರೀಕ್ಷೆಗಳನ್ನು ತಪ್ಪದೇ ಮಾಡಿಸಿಕೊಳ್ಳಿ ; ಅನುವಂಶಿಕ ಕಾಯಿಲೆಗಳನ್ನು ಪತ್ತೆ ಮಾಡಿ

ಕೆಲ ವೈದ್ಯಕೀಯ ಪರೀಕ್ಷೆಗಳನ್ನು ನಡೆಸುವುದರಿಂದ ಆನುವಂಶಿಕ ಕಾಯಿಲೆಗಳು ಪತ್ತೆ ಮಾಡಿ, ಅವುಗಳಿಗೆ ಚಿಕಿತ್ಸೆಯನ್ನು ಕೂಡ ಪಡೆದುಕೊಳ್ಳಬಹುದು.

Siddaramaiah
ರಾಜಕೀಯ

ಲೋಕಾಯುಕ್ತವೇ ಇದ್ದಿದ್ದರೆ ಮಜಾವಾದಿ ಸಿದ್ದರಾಮಯ್ಯ ಜೈಲೂಟ ತಿನ್ನುತ್ತಿದ್ದರು : ಬಿಜೆಪಿ

ಲೋಕಾಯುಕ್ತವೇ ಇದ್ದಿದ್ದರೆ ಮಜಾವಾದಿ ಸಿದ್ದರಾಮಯ್ಯ(Siddaramaiah) ಜೈಲೂಟ ತಿನ್ನುತ್ತಿದ್ದರು ಎಂದು ರಾಜ್ಯ ಬಿಜೆಪಿ(State BJP) ವ್ಯಂಗ್ಯವಾಡಿದೆ.

Gaalipata 2
ಮನರಂಜನೆ

ತೆರೆಯ ಮೇಲೆ ಹಾರಿದ ‘ಗಾಳಿಪಟ-2’; ಗಣಿ-ಭಟ್ರು ಕಾಂಬಿನೇಷನ್‍ಗೆ ಶಿಳ್ಳೆ-ಚಪ್ಪಾಳೆ

ಯೋಗರಾಜ್ ಭಟ್ ಮತ್ತು ‘ಗೋಲ್ಡನ್ ಸ್ಟಾರ್’ ಗಣೇಶ್ ಅವರ ಕಾಂಬಿನೇಷನ್ ಹೇಗೆ ಮೂಡಿಬಂದಿದೆ ಎಂಬುದನ್ನು ತಿಳಿಯಲು ಅಭಿಮಾನಿಗಳು ಕುತೂಹಲದಿಂದ ಚಿತ್ರಮಂದಿರದತ್ತ ಹೆಜ್ಜೆ ಹಾಕಿದ್ದಾರೆ.