ನವದೆಹಲಿ, ಜು. 09: ದೇಶದಾದ್ಯಂತ ಇಲ್ಲಿಯವರೆಗೆ ಒಟ್ಟು 36.89 ಕೋಟಿ ಮಂದಿಗೆ ಕೊರೊನಾ ಲಸಿಕೆ ನೀಡಲಾಗಿದ್ದು, ಕಳೆದ ಇಪ್ಪತ್ನಾಲ್ಕು ಗಂಟೆಗಳಲ್ಲಿ 40 ಲಕ್ಷ ಡೋಸ್ ಗಳಷ್ಟು ಲಸಿಕೆ ನೀಡಲಾಗಿದೆ ಎಂದು ಕೇಂದ್ರ ಆರೋಗ್ಯ ಸಚಿವಾಲಯ ಶುಕ್ರವಾರ ಬಿಡುಗಡೆ ಮಾಡಿರುವ ಪ್ರಕಟಣೆಯಲ್ಲಿ ತಿಳಿಸಿದೆ.
ಲಸಿಕೆ ಪಡೆದ 36.89 ಕೋಟಿ ಮಂದಿಯಲ್ಲಿ, 11.18 ಕೋಟಿಗೂ ಹೆಚ್ಚು ಮಂದಿ 18 ರಿಂದ 44 ವರ್ಷದೊಳಗಿನವರಾಗಿದ್ದಾರೆ ಎಂದು ಸಚಿವಾಲಯ ತಿಳಿಸಿದೆ.
ಜುಲೈ 8ರಂದು 40,23,173 ಡೋಸ್ಗಳಷ್ಟು ಲಸಿಕೆ ನೀಡಲಾಗಿದೆ. ಅದರಲ್ಲಿ 27,01,200 ಫಲಾನುಭವಿಗಳು ಮೊದಲ ಡೋಸ್ ಮತ್ತು 13,21,973 ಮಂದಿ ಎರಡನೇ ಡೋಸ್ ಲಸಿಕೆಯನ್ನು ಪಡೆದಿದ್ದಾರೆ.
ದೇಶದ ಎಂಟು ರಾಜ್ಯಗಳಾದ ಉತ್ತರ ಪ್ರದೇಶ, ಮಧ್ಯಪ್ರದೇಶ, ರಾಜಸ್ಥಾನ, ತಮಿಳುನಾಡು, ಬಿಹಾರ, ಗುಜರಾತ್,ಕರ್ನಾಟಕ ಮತ್ತು ಮಹಾರಾಷ್ಟ್ರದಲ್ಲಿ 18 ರಿಂದ 44 ವರ್ಷದೊಳಗಿನ 50 ಲಕ್ಷಕ್ಕೂ ಹೆಚ್ಚು ಮಂದಿಗೆ ಮೊದಲ ಡೋಸ್ ಲಸಿಕೆ ನೀಡಲಾಗಿದೆ.