ಐವರು ಮಕ್ಕಳೊಂದಿಗೆ ರೈಲ್ವೇ ಹಳಿಗೆ ಜಿಗಿದ ಮಹಿಳೆ

ರಾಜಸ್ಥಾನ, ಮೇ. 12 ಐವರು ಮಕ್ಕಳೊಂದಿಗೆ ಮಹಿಳೆವೋರ್ವಳು ರೈಲು ಬರುವ ವೇಳೆ ಹಳಿಯ ಮೇಲೆ ಜಿಗಿದಿದ್ದು, ಮಹಿಳೆ ಹಾಗೂ ಮೂವರು ಮಕ್ಕಳು ಸ್ಥಳದಲ್ಲೇ ಮೃತಪಟ್ಟಿದ್ದಾರೆ.

ರಾಜಸ್ಥಾನದ ದೌಸಾ ಜಿಲ್ಲೆಯ ಮಂದವಾರ್​​ ರೈಲ್ವೆ ನಿಲ್ದಾಣದ ಸಮೀಪ ಈ ಘಟನೆ ನಡೆದಿದ್ದು, ಇಬ್ಬರು ಬಾಲಕಿಯರು ಬದುಕುಳಿದಿದ್ದಾರೆ. ಸ್ಥಳಕ್ಕೆ ಬಂದ ಪೊಲೀಸರು ಛಿದ್ರ ಛಿದ್ರವಾಗಿದ್ದ ಮೃತದೇಹಗಳನ್ನು ಆಸ್ಪತ್ರೆಗೆ ರವಾನಿಸಿದ್ದು, ಗಾಯಗೊಂಡಿರುವ ಇಬ್ಬರು ಮಕ್ಕಳನ್ನು ಚಿಕಿತ್ಸೆಗೆ ದಾಖಲಿಸಿದ್ದಾರೆ.

ಮೃತ ಮಹಿಳೆಯ ಪತಿಯು ಮಂದವಾರ್​​ ರೈಲ್ವೆ ನಿಲ್ದಾಣದಲ್ಲಿ ಗೇಟ್​ಮ್ಯಾನ್​ ಆಗಿ ಕೆಲಸ ಮಾಡುತ್ತಿದ್ದರು. ಆತ್ಮಹತ್ಯೆಗೆ ಕಾರಣ ತಿಳಿದು ಬಂದಿಲ್ಲ. ಪ್ರಕರಣ ದಾಖಲಿಸಿಕೊಂಡಿರುವ ಪೊಲೀಸರು, ತನಿಖೆ ಮುಂದುವರೆಸಿದ್ದಾರೆ.

Exit mobile version